ಕರ್ನಾಟಕ ವಿಧಾನ ಪರಿಷತ್ 
ರಾಜ್ಯ

ವಿಧಾನ ಪರಿಷತ್: ಗ್ಯಾರಂಟಿ ಸಮಿತಿ ರದ್ದುಗೊಳಿಸುವಂತೆ ಬಿಜೆಪಿ, ಜೆಡಿಎಸ್ ಆಗ್ರಹ

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ, ಏಜೆನ್ಸಿಗಳಿಗೆ 40 ಲಕ್ಷ ರೂ.ಗಳನ್ನು ನೀಡಿರುವುದನ್ನು ಒಪ್ಪಿಕೊಂಡಿದೆ ಎಂದು ಬಿಜೆಪಿ ಸದಸ್ಯ ಮತ್ತು ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರದ್ದುಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ, ಏಜೆನ್ಸಿಗಳಿಗೆ 40 ಲಕ್ಷ ರೂ.ಗಳನ್ನು ನೀಡಿರುವುದನ್ನು ಒಪ್ಪಿಕೊಂಡಿದೆ ಎಂದು ಬಿಜೆಪಿ ಸದಸ್ಯ ಮತ್ತು ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

"ನೀವು ಏಜೆನ್ಸಿಗಳಿಗೆ ಹಣ ನೀಡಿದ್ದರೆ, ಅನುಷ್ಠಾನ ಸಮಿತಿ ಏಕೆ? ಕಾರ್ಯಕರ್ತರಿಗೆ ಸಂಬಳ ನೀಡಿ ಜನರಿಂದ ಮಾಹಿತಿ ಪಡೆಯುವುದರ ಅರ್ಥವೇನು?" ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು.

ಈ ವೇಳೆ ನಾರಾಯಣಸ್ವಾಮಿ ಅವರಿಗೆ ಸಾಥ್ ನೀಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಎಂ2ಎಂ ಸಂಸ್ಥೆಗೆ ಒಂದು ಕೋಟಿ ರೂ. ಮತ್ತು ಇನ್ನೊಂದು ಸಂಸ್ಥೆಗೆ 9.25 ಕೋಟಿ ರೂ. ನೀಡಲಾಗಿದೆ ಎಂದು ಗಮನಸೆಳೆದರು. ಇದನ್ನು ಉತ್ತರದಲ್ಲಿ ಉಲ್ಲೇಖಿಸಲಾಗಿಲ್ಲ. ಇದನ್ನು ಏಕೆ ಮರೆಮಾಚಲಾಗುತ್ತಿದೆ? ಎಂದು ಪ್ರಶ್ನಿಸಿದರು.

ಇದಕ್ಕು ಮೊದಲು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ ಅವರು, ಗ್ಯಾರಂಟಿಗಳಿಂದ ರಾಜ್ಯಕ್ಕೆ ನಷ್ಟವೆಂದು ಬಿಜೆಪಿ ಆರೋಪಿಸಿತ್ತು. ಹಣ ಸರಿಯಾಗಿ ಜನರಿಗೆ ತಲುಪುತಿದೆಯಾ ಎಂದು ತಿಳಿಯುವುದಕ್ಕೆ ಕೆಲ ಏಜೆನ್ಸಿಗಳಿಗೆ ವಹಿಸಿದ್ದೆವು. ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ಮೀಸಲಿರಿಸಲಾಗಿದೆ. ಮೌಲ್ಯಮಾಪನ ನಡೆಸಲು ಶೇ.1ರಷ್ಟು ಖರ್ಚು ಮಾಡಿದರೆ ತಪ್ಪೇನು? ಎಂದು ಪ್ರಶ್ನಿಸಿದರು.

ಈ ಮಧ್ಯೆ, ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಅವರು ಮಧ್ಯಪ್ರವೇಶಿಸಿ ಶುಕ್ರವಾರ ಇದರ ಬಗ್ಗೆ ಚರ್ಚೆಗೆ ಅರ್ಧ ಗಂಟೆ ಸಮಯ ನೀಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್