ಅಧಿವೇಶನದಲ್ಲಿ ಸಚಿವ ಕೃಷ್ಣ ಬೈರೇಗೌಡ 
ರಾಜ್ಯ

ಪೋಷಕರ ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲು ಇಲ್ಲ: ಸಚಿವ Krishna Byre Gowda

ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆʼಯಲ್ಲಿ ಈ ಅಂಶವಿದೆ. ಆದರೆ...

ಬೆಂಗಳೂರು: ಮಕ್ಕಳು ಪೋಷಕರ ಆರೈಕೆ ಮಾಡದಿದ್ದರೆ ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ವಿಲ್ ಅಥವಾ ದಾನಪತ್ರ ರದ್ದು ಮಾಡುವ ಅವಕಾಶವಿದೆ ಸಂತ್ರಸ್ಥ ಪೋಷಕರಿಗೆ ಇದೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೇಂದ್ರ ಸರ್ಕಾರ 2007ರಲ್ಲಿ ಜಾರಿಗೆ ತಂದಿರುವ ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆʼಯಲ್ಲಿ ಈ ಅಂಶವಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿ ಇಲ್ಲ’ ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಸಚಿವರು, ‘ಈ ಕಾಯ್ದೆ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರನ್ನು ಆರೈಕೆ ಮಾಡಬೇಕು. ಔಷಧಿ ಸೇರಿದಂತೆ ಅವರ ತಿಂಗಳ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಅಥವಾ ಆರೈಕೆ ಮಾಡಲು ನಿರ್ಲಕ್ಷಿಸಿದರೆ ಹಿರಿಯ ನಾಗರಿಕರು ಕಾಯ್ದೆಯ ಸೆಕ್ಷನ್ 09ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಬಹುದು.

ಅಂತೆಯೇ ‘ತಂದೆ– ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ಸೆಕ್ಷನ್ 23ರಂತೆ ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಅಥವಾ ದಾನಪತ್ರವನ್ನು ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೇ ಮರು ಸ್ಥಾಪಿಸಲು ಈ ಕಾಯ್ದೆಯಲ್ಲಿ ಅವಕಾಶ ಇದೆ. ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ’ ಎಂದು ಸಚಿವರು ಹೇಳಿದರು.

ಪ್ರತಿ ತಿಂಗಳು ಸಭೆ

ಅಲ್ಲದೆ ‘ಉಪ ವಿಭಾಗಾಧಿಕಾರಿಗಳ ಮುಂದೆ ಸಾವಿರಾರು ಪ್ರಕರಣಗಳಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳೂ ಉಪ ವಿಭಾಗಾಧಿಕಾರಿಗಳ ಜೊತೆ ಸಭೆ ನಡೆಸಲಾಗುತ್ತಿದೆ. ಅಲ್ಲದೆ, ಜಿಲ್ಲಾಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಲು ಕೂಡಾ ಅರ್ಜಿದಾರರಿಗೆ ಅವಕಾಶ ನೀಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ಒಂದು ವರ್ಷದೊಳಗೆ ಇ- ಜಮಾಬಂದಿ ತಂತ್ರಾಂಶ

ಇದೇ ವೇಳೆ ‘ಗ್ರಾಮ ಹಾಗೂ ತಾಲ್ಲೂಕು ಮಟ್ಟದ ಭೂದಾಖಲೆಗಳನ್ನು ತಾಳೆ ಮಾಡಿ ಕ್ರಮಬದ್ಧಗೊಳಿಸುವ ಜಮಾಬಂದಿ ಪ್ರಕ್ರಿಯೆಯನ್ನು ವೇಗವಾಗಿ ನಿರ್ವಹಿಸಲು ಇ-ಜಮಾಬಂದಿ ತಂತ್ರಾಂಶವನ್ನು ಒಂದು ವರ್ಷದೊಳಗೆ ಅಭಿವೃದ್ಧಿಪಡಿಸಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ನ ಟಿ.ಎನ್. ಜವರಾಯಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ ಮಂಡಿಸಿದ ಬಜೆಟ್‌ನಲ್ಲಿ ಇ- ಜಮಾಬಂದಿ ಘೋಷಿಸಿದ್ದಾರೆ. ಇದರಿಂದ ಗ್ರಾಮ ಲೆಕ್ಕಿಗರ ಮೇಲಿನ ಕೆಲಸದ ಒತ್ತಡ ಕಡಿಮೆ ಆಗಲಿದೆ. ಇ-ಜಮಾಬಂದಿ ಎಂದರೆ ಜಮಾಬಂದಿಯ ಆನ್‌ಲೈನ್ ಆವೃತ್ತಿ. ಇದು ಹಕ್ಕುಗಳ ದಾಖಲೆ ಅಥವಾ ಭೂ ಮಾಲೀಕತ್ವದ ದಾಖಲೆಗಳಿಗೆ ಅಧಿಕೃತ ದೃಢೀಕರಣ ನೀಡುತ್ತದೆ. ಹರಿಯಾಣ ಸೇರಿದಂತೆ ಇತರ ರಾಜ್ಯಗಳು ಈಗಾಗಲೇ ಜಮಾಬಂದಿಯ ವಿದ್ಯುನ್ಮಾನ ಆವೃತ್ತಿಯನ್ನು ಅಭಿವೃದ್ಧಿಪಡಿಸಿ ಯಶಸ್ವಿ ಆಗಿವೆ’ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT