ಸಂಗ್ರಹ ಚಿತ್ರ 
ರಾಜ್ಯ

ಇಬ್ಬರು BJP ಶಾಸಕರ ವಿರುದ್ಧದ ವಿಚಾರಣೆ ರದ್ದುಗೊಳಿಸಿದ ಹೈಕೋರ್ಟ್

ಜನಪ್ರತಿನಿಧಿ ಕಾಯಿದೆಯ ಸೆಕ್ಷನ್ 125ಎ ಅಡಿಯಲ್ಲಿ ಚುನಾವಣಾ ಪ್ರಮಾಣ ಪತ್ರದಲ್ಲಿನ ದೋಷಗಳನ್ನು ಪ್ರಶ್ನಿಸಲು ಚುನಾವಣಾ ಆಯೋಗವೇ ದೂರು ದಾಖಲಿಸಬೇಕು. ಖಾಸಗಿ ವ್ಯಕ್ತಿಗಳು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸುವುದಕ್ಕೆ ಅವಕಾಶವಿಲ್ಲ.

ಬೆಂಗಳೂರು: ನಾಮಪತ್ರಗಳ ಜೊತೆಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಆಸ್ತಿ ವಿವರಗಳನ್ನು ಮರೆಮಾಚುವ ಮತ್ತು ನಿವಾಸದ ತಪ್ಪು ವಿಳಾಸವನ್ನು ನೀಡಿದ ಆರೋಪದ ಮೇಲೆ ಶಾಸಕರಾದ ಮಂಜುಳಾ ಲಿಂಬಾವಳಿ ಮತ್ತು ಡಾ. ಶೈಲೇಂದ್ರ ಬೆಲ್ಡೇಲ್ ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ.

ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕಿ ಮಂಜುಳಾ ಲಿಂಬಾವಳಿ ಮತ್ತು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶೈಲೇಂದ್ರ ಬೆಳ್ದಾಳೆ ವಿರುದ್ಧ ಸಲ್ಲಿಕೆಯಾಗಿದ್ದ ಖಾಸಗಿ ದೂರನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿದ್ದು, ಪ್ರಕರಣ ರದ್ದುಪಡಿಸಿ ಆದೇಶಿಸಿದೆ.

ಪ್ರಕರಣ ಸಂಬಂಧ ದಾಖಲೆಗಳು ಹಾಗೂ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಜನಪ್ರತಿನಿಧಿ ಕಾಯಿದೆಯ ಸೆಕ್ಷನ್ 125ಎ ಅಡಿಯಲ್ಲಿ ಚುನಾವಣಾ ಪ್ರಮಾಣ ಪತ್ರದಲ್ಲಿನ ದೋಷಗಳನ್ನು ಪ್ರಶ್ನಿಸಲು ಚುನಾವಣಾ ಆಯೋಗವೇ ದೂರು ದಾಖಲಿಸಬೇಕು. ಖಾಸಗಿ ವ್ಯಕ್ತಿಗಳು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಿತು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಂಜುಳಾ ಲಿಂಬಾವಳಿ ಅವರು ಚುನಾವಣಾ ಪ್ರಮಾಣ ಪತ್ರದಲ್ಲಿ ತಾವು ಪಾಲುದಾರರಾಗಿರುವ ಸಂಸ್ಥೆಯ ಆಸ್ತಿಯನ್ನು ಮರೆ ಮಾಚಿದ್ದಾರೆ. ಜೊತೆಗೆ, ಅವರ ತಮ್ಮ ಅವಲಂಬಿತರ ವಿವರವನ್ನು ಕೊಡಬೇಕಾದ ಕಲಂಅನ್ನು ಖಾಲಿ ಬಿಟ್ಟಿದ್ದಾರೆ ಎಂದು ಆರೋಪಿಪಿ ಬೆಂಗಳೂರಿನ ನಾಗೇಶ್ ಟಿ ಎಂಬವರು ಖಾಸಗಿ ದೂರು ದಾಖಲಿಸಿದ್ದರು.

ಅದೇ ರೀತಿಯಲ್ಲಿ ಶೈಲೇಂದ್ರ ಬೆಳ್ದಾಳೆ ಅವರ ತಮ್ಮ ಗ್ರಾಮದ ಕುರಿತಂತೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ರಾಜಕುಮಾರ್ ಮಡ್ಕಿ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ಈ ಎರಡೂ ಪ್ರಕರಣಗಳಲ್ಲಿ ಇಬ್ಬರೂ ಅರ್ಜಿದಾರರು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಕಾಂಗ್ರೆಸ್ ಗೆ ಅವಮಾನವಾಗುವ ಹೇಳಿಕೆ ನೀಡಲು ನಿಮಗೆ ಯಾರ ಒತ್ತಡವಿದೆ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

SCROLL FOR NEXT