ಕುಂಭಮೇಳ (ಸಂಗ್ರಹ ಚಿತ್ರ) 
ರಾಜ್ಯ

ನುಡಿದಂತೆ ನಡೆದ ಯೋಗಿ ಸರ್ಕಾರ: ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯ ಸಂತ್ರಸ್ತರ ಕುಟುಂಬಕ್ಕೆ 1 ಕೋಟಿ ರೂ ಪರಿಹಾರ ಹಣ ಜಮೆ

ಪರಿಹಾರ ಘೋಷಿಸಿದಂತೆ ಕಾಲ್ತುಳಿತ ಸಂಭವಿಸಿದ 40 ದಿನಗಳ ಬಳಿಕ ಇಂದು ಪರಿಹಾರ ಬಿಡುಗಡೆ ಮಾಡಿದೆ.

ಬೆಳಗಾವಿ: ಜನವರಿ 29 ರಂದು ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟಿದ್ದ ಬೆಳಗಾವಿ ಮೂಲದ ನಾಲ್ವರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ.ನಂತೆ 1 ಕೋಟಿ ರೂ. ಪರಿಹಾರವನ್ನು ಉತ್ತರ ಪ್ರದೇಶ ಸರ್ಕಾರ ನೀಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪ್ರಯಾಗರಾಜ್ ಜಿಲ್ಲಾಧಿಕಾರಿ ರವಿ ಮಂಜರ್ ಅವರೊಂದಿಗೆ ಚರ್ಚಿಸಿದ ನಂತರ ಪರಿಹಾರದ ಮೊತ್ತವನ್ನು ನೇರವಾಗಿ ಮೃತರ ಕುಟುಂಬಗಳಾದ ಜ್ಯೋತಿ ಹತ್ತರವಾಡ, ಮೇಘಾ ಹತ್ತರವಾಡ, ಮಹಾದೇವಿ ಬಾವನೂರ ಮತ್ತು ಅರುಣ್ ಕೋಪರ್ಡೆ ಅವರ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ತಿಳಿಸಿದರು.

ಗ್ರಾಮ ಲೆಕ್ಕಿಗರ ಮೂಲಕ ಪರಿಶೀಲನೆ ಪ್ರಕ್ರಿಯೆ ನಡೆಸಲಾಗಿದೆ ಎಂದು ತಿಳಿಸಿದರು. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಜ.29 ರಂದು ಮೃತರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದರು.

ಪರಿಹಾರ ಘೋಷಿಸಿದಂತೆ ಕಾಲ್ತುಳಿತ ಸಂಭವಿಸಿದ 40 ದಿನಗಳ ಬಳಿಕ ಇಂದು ಪರಿಹಾರ ಬಿಡುಗಡೆ ಮಾಡಿದೆ. ಉತ್ತರ ಪ್ರದೇಶ ಸರ್ಕಾರದಿಂದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಅಕೌಂಟ್‌ಗೆ ಹಣ ಜಮೆಯಾಗಿದೆ.

ಈ ಕುರಿತು ಸ್ವತಃ ಡಿಸಿ ಮಾಹಿತಿ ಹಂಚಿಕೊಂಡಿದ್ದು, ಕುಟುಂಬಸ್ಥರ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್ ಮೂಲಕ ಪರಿಹಾರ ಮೊತ್ತ ಜಮೆಯಾಗಿದೆ. ನಾಲ್ವರಿಗೆ ತಲಾ 25 ಲಕ್ಷ ರೂ.ಯಂತೆ 1 ಕೋಟಿ ರೂ. ಪರಿಹಾರ ವಿತರಣೆಯಾಗಿದ್ದು, ರಾಜ್ಯ ಸರ್ಕಾರದಿಂದಲೂ ಪರಿಹಾರ ನೀಡುವಂತೆ ಜಿಲ್ಲಾಡಳಿತದಿಂದ ವರದಿ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ ಎರಡು ದಿನಗಳಲ್ಲಿ ಮರಣೋತ್ತರ ಪರೀಕ್ಷೆಯ ವರದಿಗಳು ಮತ್ತು ಮರಣ ಪ್ರಮಾಣಪತ್ರಗಳನ್ನು ಕಳುಹಿಸಲಾಗುವುದು ಎಂದು ಪ್ರಯಾಗ್‌ರಾಜ್ ಆಡಳಿತವು ಭರವಸೆ ನೀಡಿದೆ ಎಂದು ಅವರು ಹೇಳಿದರು.

ಮಹಾಕುಂಭದ ಪ್ರಮುಖ ಸ್ನಾನದ ದಿನವಾದ ಮೌನಿ ಅಮಾವಾಸ್ಯೆಯಂದು ಸಂಗಮ ಘಾಟ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 30 ಭಕ್ತರು ಸಾವನ್ನಪ್ಪಿದರು ಮತ್ತು 60 ಮಂದಿ ಗಾಯಗೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್