ಎಂಸಿ ಸುಧಾಕರ್ 
ರಾಜ್ಯ

ಕಾಲೇಜುಗಳಲ್ಲಿ ಶೀಘ್ರದಲ್ಲೇ ಎರಡು ಸಾವಿರ ಬೋಧಕ, ಬೋಧಕೇತರ ಹುದ್ದೆ ಭರ್ತಿ: ಸಚಿವ ಎಂಸಿ ಸುಧಾಕರ್

ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ ಎರಡು ಸಾವಿರ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಬಜೆಟ್​ನಲ್ಲಿ ಅವಕಾಶ ನೀಡಲಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.

ಬೆಂಗಳೂರು: ಶೀಘ್ರದಲ್ಲೇ ಎರಡು ಸಾವಿರ ಬೋಧಕ, ಬೋಧಕೇತರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಗುರುವಾರ ವಿಧಾನಸಭೆಗೆ ತಿಳಿಸಿದ್ದಾರೆ.

ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ಪ್ರಶ್ನೆಗೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವರು, ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ ಎರಡು ಸಾವಿರ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಬಜೆಟ್​ನಲ್ಲಿ ಅವಕಾಶ ನೀಡಲಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.

ರಾಜ್ಯದ ಹಲವು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹುದ್ದೆಗಳ ಕೊರತೆ ಇದೆ. ಈ ಹುದ್ದೆಗಳನ್ನು ಸದ್ಯದಲ್ಲೇ ಭರ್ತಿ ಮಾಡಲಾಗುವುದು. ಈ ಬಜೆಟ್​ನಲ್ಲಿ ಕಾಲೇಜು ಶಿಕ್ಷಣ ಇಲಾಖೆ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಒಟ್ಟು 2 ಸಾವಿರ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿಗಳು ಅವಕಾಶ ಕಲ್ಪಿಸಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 18 ಹೊಸ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮಂಜೂರಾಗಿದ್ದು. ಇದರಲ್ಲಿ 16 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಕಟ್ಟಡ ಕಾಮಗಾರಿ ಪೂರ್ಣಗೊಂಡು ಶೈಕ್ಷಣಿಕ ಚಟುವಟಿಕೆ ಪ್ರಾರಂಭಗೊಂಡಿದೆ ಎಂದರು.

ಅರಸೀಕೆರೆ ಮತ್ತು ದೇವದುರ್ಗ ಎಂಜಿನಿಯರಿಂಗ್ ಕಾಲೇಜುಗಳ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದೆ. ಕೊಪ್ಪಳದಲ್ಲಿ ಹೊಸ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಆರಂಭಿಸುವ ಪ್ರಸ್ತಾಪ ಇಲ್ಲ. ಪ್ರಸ್ತುತ ಕೊಪ್ಪಳ ಜಿಲ್ಲೆಯ ಯಲಬುರ್ಗ ತಾಲೂಕಿನ ತಳಕಲ್ ಗ್ರಾಮ ಹಾಗೂ ಗಂಗಾವತಿಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ತಳಕಲ್​​ನಲ್ಲಿ ವಿಟಿಯುನೊಂದಿಗೆ ಒಪ್ಪಂದ ಮಾಡಿಕೊಂಡು ದೊಡ್ಡಮಟ್ಟದ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಹೊಸ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಸರ್ಕಾರಿ ಕಾಲೇಜುಗಳನ್ನು ಸ್ಥಾಪಿಸಲು 2024ರ ಜುಲೈನಲ್ಲಿ ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ಈ ಸಮಿತಿಯ ವರದಿ ಆಧರಿಸಿ ಹೊಸ ಎಂಜಿನಿಯರಿಂಗ್ ಕಾಲೇಜುಗಳ ಆರಂಭದ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT