ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ  
ರಾಜ್ಯ

ಗ್ಯಾರಂಟಿ ಜಾರಿ ಮೇಲ್ವಿಚಾರಣಾ ಸಮಿತಿಗಳ ರದ್ದುಗೊಳಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

ಯಾವುದೇ ಪಕ್ಷದ ಸರ್ಕಾರ ಇದ್ದಾಗ ಆ ಪಕ್ಷದ ಕಾರ್ಯಕರ್ತರಿಗೆ ಅವಕಾಶಗಳನ್ನು ಕೊಡುವುದು ಹಿಂದಿನಿಂದಲೂ ನಡೆದುಕೊಂಡೇ ಬಂದಿದೆ.

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗೆ ರಚಿಸಲಾದ ಕಾಂಗ್ರೆಸ್ ಸದಸ್ಯರ ಸಮಿತಿಗಳನ್ನು ರದ್ದುಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಸ್ಪಷ್ಟಪಡಿಸಿದ್ದಾರೆ.

ಗ್ಯಾರಂಟಿ ಸಮಿತಿಗಳ ಅಧ್ಯಕ್ಷ ಹುದ್ದೆ ರದ್ದು ಮಾಡಿ, ಶಾಸಕರಿಗೆ ಆ ಜವಾಬ್ದಾರಿ ನೀಡಬೇಕು ಮತ್ತು ಸಮಿತಿಗಳಲ್ಲಿರುವ ಕಾಂಗ್ರೆಸ್‌ ಪದಾಧಿಕಾರಿಗಳಿಗೆ ಸರ್ಕಾರದ ಬೊಕ್ಕಸದಿಂದ ಸಂಬಳ ನೀಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ವಿಧಾನಸಭೆಯಲ್ಲಿ ಎರಡು ದಿನಗಳಿಂದ ವಿರೋಧ ಪಕ್ಷಗಳ ನಡೆಸುತ್ತಿದ್ದ ಧರಣಿ ಹಾಗೂ ಹೋರಾಟಕ್ಕೆ ಮುಖ್ಯಮಂತ್ರಿಗಳು ಬುಧವಾರ ಉತ್ತರಿಸಿದರು.

ಯಾವುದೇ ಪಕ್ಷದ ಸರ್ಕಾರ ಇದ್ದಾಗ ಆ ಪಕ್ಷದ ಕಾರ್ಯಕರ್ತರಿಗೆ ಅವಕಾಶಗಳನ್ನು ಕೊಡುವುದು ಹಿಂದಿನಿಂದಲೂ ನಡೆದುಕೊಂಡೇ ಬಂದಿದೆ. ಮಹಾರಾಷ್ಟ್ರದಲ್ಲಿ ಸಚಿವರಿಗೆ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಆಪ್ತ ಸಹಾಯಕರನ್ನಾಗಿ ಮಾಡಿಲ್ಲವೇ? ಕೆಕೆಆರ್‌ಡಿಬಿಗೆ ಸಲಹೆ ಕೊಡಲು ಬಸವರಾಜಪಾಟೀಲ ಸೇಡಂ ನೇತೃತ್ವದಲ್ಲಿ ಸಂಸ್ಥೆಯೊಂದನ್ನು ಮಾಡಿ ಅದಕ್ಕೆ ಸರ್ಕಾರದಿಂದ ಹಣ ಕೊಟ್ಟಿರಲಿಲ್ಲವೇ ಎಂದು ಪ್ರಶ್ನಿಸಿದರು.

ಇದಕ್ಕೆ ತಿರುಗೇಟು ನೀಡಿದ ಬಿಜೆಪಿ ಸದಸ್ಯರು, ‘ನೀವು ಕೂಡ ಕಾಂಗ್ರೆಸ್‌ ಕಾರ್ಯಕರ್ತರನ್ನು ನೇಮಿಸಿಕೊಂಡಿಲ್ಲವೇ? ಮಹಾರಾಷ್ಟ್ರದಲ್ಲಿ ಗ್ಯಾರಂಟಿ ಸಮಿತಿ ರೀತಿಯ ವ್ಯವಸ್ಥೆ ಮಾಡಿ ಅಲ್ಲಿ ಪಕ್ಷದ ಕಾರ್ಯಕರ್ತರಿಗೆ ಸಂಬಳ ಕೊಟ್ಟು ಸಾಕುತ್ತಿಲ್ಲ ಎಂದರು.

ಈ ವೇಳೆ ತಮ್ಮ ಪಟ್ಟು ಬಿಡದ ಸಿದ್ದರಾಮಯ್ಯ ಅವರು, ನಾನು ಮೊದಲು ಶಾಸಕನಾಗಿದ್ದೇನೆ. ಶಾಸಕರ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ನಾನು ಗೌರವಿಸುತ್ತೇನೆ. ಯಾವುದೇ ಕಾರಣಕ್ಕೂ ರಾಜ್ಯ, ಜಿಲ್ಲೆ ಮತ್ತು ತಾಲ್ಲೂಕು ಮಟ್ಟದ ಸಮಿತಿಗಳಲ್ಲಿ ಬದಲಾವಣೆ ಮಾಡುವುದಿಲ್ಲ. ಆದರೆ, ಶಾಸಕರಿಗೇ ಪ್ರಾಧಾನ್ಯ ನೀಡಬೇಕು, ಅಗೌರವ ತೋರಬಾರದು ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡುತ್ತೇನೆಂದು ಹೇಳಿದರು.

ಆಗ ಮಧ್ಯಪ್ರವೇಶಿಸಿ ಮಾತನಾಡಿದ ಆರ್‌.ಅಶೋಕ, ಸಮಿತಿಯ ಅಧ್ಯಕ್ಷರು ಶಾಸಕರನ್ನು ಲೆಕ್ಕಕ್ಕೇ ತೆಗೆದುಕೊಳ್ಳುತ್ತಿಲ್ಲ. ಅಗೌರವ ತೋರಿಸುತ್ತಿದ್ದಾರೆ. ಶಿಕಾರಿಪುರದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷರು ಅಧಿಕಾರಿಗಳನ್ನು ಕರೆದು ಸಭೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಅಧಿಕಾರಿಗಳ ಪಟ್ಟಿ ಮಾಡಿ ವರ್ಗಾವಣೆಗೂ ಮುಂದಾಗಿದ್ದಾರೆ. ಮುಂದೆ ಬೇರೆ ಸರ್ಕಾರಗಳು ಬಂದಾಗಲೂ ಇದೇ ಪರಂಪರೆ ಮುಂದುವರಿಸುತ್ತಾರೆ. ಈ ಪ್ರವೃತ್ತಿ ವ್ಯವಸ್ಥೆಯನ್ನು ನಾಶಪಡಿಸುತ್ತದೆ. ಏಕೆಂದರೆ ಪಕ್ಷದ ಸಾಮಾನ್ಯ ಕಾರ್ಯಕರ್ತರು ಚುನಾಯಿತ ಶಾಸಕರಿಗಿಂತ ಹೆಚ್ಚಿನ ಅಧಿಕಾರವನ್ನು ಹೊಂದಿದವರಾಗುತ್ತಾದೆ. ನೀವು ತಪ್ಪು ದಾರಿಯಲ್ಲಿ ನಡೆದರೆ, ಅದು ನಿಮಗೇ ರಿವರ್ಸ್‌ ಆಗುತ್ತದೆ. ಹಿಂದೆ ಯಾವುದೇ ಮುಖ್ಯಮಂತ್ರಿ ಈ ರೀತಿ ನಡೆದುಕೊಂಡಿರಲಿಲ್ಲ. ಸ್ಪೀಕರ್ ಶಾಸಕರ ರಕ್ಷಣೆಗೆ ಬರಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಸಿಎಂ, ಅಂತಹ ಸಮಸ್ಯೆಗಳನ್ನು ಎದುರಾದರೆ, ನನ್ನ ಗಮನಕ್ಕೆ ತನ್ನಿ, ಪರಿಹರಿಸಲಾಗುತ್ತದೆ ಎಂದು ಹೇಳಿದರು. ಇದಕ್ಕೆ ಒಬ್ಬದ ಬಿಜೆಪಿ ಶಾಸಕರು ಸಮಿತಿಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ, ಪ್ರತಿಭಟನೆ ಮುಂದುವರೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT