ಬೆಂಗಳೂರು ನೀರು ಸರಬರಾಜು ಮಂಡಳಿ 
ರಾಜ್ಯ

ಜಲಮಂಡಳಿಗೆ BIS ಮಾನ್ಯತೆ: ದೇಶದಲ್ಲಿಯೇ ಮೊದಲು ಎಂಬ ಹೆಗ್ಗಳಿಕೆ

ಕಳೆದ ಆರು ತಿಂಗಳಿನಿಂದ ವಿವಿಧ ಹಂತಗಳಲ್ಲಿ ನಡೆದ ಬಿಐಎಸ್‌ ಕಠಿಣ ಪರೀಕ್ಷೆಗಳಲ್ಲಿ ಬೆಂಗಳೂರು ಜಲಮಂಡಳಿ ತೇರ್ಗಡೆಯಾಗಿತ್ತು.

ಬೆಂಗಳೂರು: ಬೆಂಗಳೂರು ಜಲಮಂಡಳಿ ಪೂರೈಕೆ ಮಾಡುವ ಕಾವೇರಿ ನೀರಿನ ಗುಣಮಟ್ಟ ಪರೀಕ್ಷೆಯಲ್ಲಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಮಾನ್ಯತೆ ಪಡೆದಿದೆ. ಈ ಮೂಲಕ ದೇಶದಲ್ಲೇ ಮೊದಲ ಬಾರಿಗೆ 'ಬಿಐಎಸ್'ನಿಂದ ಪ್ರಮಾಣ ಪತ್ರ ಪಡೆದ ಹೆಗ್ಗಳಿಕೆಗೆ ಬೆಂಗಳೂರು ಜಲಮಂಡಳಿ ಪಾತ್ರವಾಗಿದೆ.

ಕೊಳವೆ ಮೂಲಕ ನೀರು ಪೂರೈಕೆ ಮಾಡುವ ಸಂಸ್ಥೆಯು ಬಿಐಎಸ್‌ ಪ್ರಮಾಣ ಪತ್ರ ಪಡೆದಿರುವುದು ದೇಶದಲ್ಲೇ ಮೊದಲಾಗಿದೆ.

ಕಳೆದ ಆರು ತಿಂಗಳಿನಿಂದ ವಿವಿಧ ಹಂತಗಳಲ್ಲಿ ನಡೆದ ಬಿಐಎಸ್‌ ಕಠಿಣ ಪರೀಕ್ಷೆಗಳಲ್ಲಿ ಬೆಂಗಳೂರು ಜಲಮಂಡಳಿ ತೇರ್ಗಡೆಯಾಗಿತ್ತು. ನೀರು ಸರಬರಾಜು ವ್ಯವಸ್ಥೆಯಲ್ಲಿ ಜಲಮಂಡಳಿ ಅಳವಡಿಸಿಕೊಂಡಿರುವ ಅಂತಾರಾಷ್ಟ್ರೀಯ ಮಾನದಂಡಗಳ ಬಗ್ಗೆ ಬಿಐಎಸ್‌ ತಂಡ ಶ್ಲಾಘಿಸಿದ್ದು, ಪ್ರಮಾಣ ಪತ್ರ ನೀಡಿದೆ.

ಬೆಂಗಳೂರು ಜಲಮಂಡಳಿಗೆ ಬಿಐಎಸ್ ಪ್ರಾಮಾಣೀಕರಣ ದೊರೆತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ| ರಾಮಪ್ರಸಾತ್ ಮನೋಹರ್ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ನಗರದ ಜನರಿಗೆ ಶುದ್ಧ ಮತ್ತು ಸುರಕ್ಷಿತ ನೀರು ಒದಗಿಸುವುದು ನಮ್ಮ ಪ್ರಮುಖ ಆದ್ಯತೆ. ಬಿಐಎಸ್ ಪ್ರಮಾಣೀಕರಣ ಪಡೆದ ದೇಶದ ಮೊದಲ ಸಂಸ್ಥೆ ಎಂಬ ಹೆಗ್ಗಳಿಕೆಗೆ ಜಲ ಮಂಡಳಿಯದ್ದಾಗಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದ್ದಾರೆ.

ನಾವು ನೀರಿನ ಗುಣಮಟ್ಟ ಮತ್ತು ಸುರಕ್ಷತೆಗೆ ವಿಶೇಷ ಮಾನದಂಡ ಹೊಂದಿದ್ದೇವೆ. ಇದು ಸಾರ್ವಜನಿಕ ಸೇವೆಗಳು ಮತ್ತು ನಗರ ಸುಸ್ಥಿರತೆಯಲ್ಲಿ ಅತ್ಯುನ್ನತ ಮಾನದಂಡಗಳನ್ನು ಅಳವಡಿಸಿಕೊಳ್ಳುವ ನಗರವಾಗಿ ಬ್ರ್ಯಾಂಡ್ ಬೆಂಗಳೂರು ಉಪಕ್ರಮಕ್ಕೆ ಇನ್ನಷ್ಟು ಶಕ್ತಿ ನೀಡಲಿದೆ. ಸುಸ್ಥಿರ ನೀರಿನ ನಿರ್ವಹಣೆ ಮತ್ತು ಗುಣಮಟ್ಟದ ಜೀವನಕ್ಕಾಗಿ ಬೆಂಗಳೂರನ್ನು ಮಾದರಿ ನಗರವಾಗಿ ರೂಪಿಸಲು ನಾವು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತೇವೆ. ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಅಂತಾರಾಷ್ಟ್ರೀಯ ಮಾನದಂಡಗಳನ್ನು ಅಳವಡಿಸಿಕೊಂಡು ಗುಣಮಟ್ಟವನ್ನು ಕಾಯ್ದುಕೊಂಡಿರುವ ಬೆಂಗಳೂರು ಜಲಮಂಡಳಿಯ ಎಲ್ಲರೂ ಅಭಿನಂದನೆಗೆ ಅರ್ಹರು ಎಂದು ತಿಳಿಸಿದ್ದಾರೆ.

ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷ ಡಾ.ರಾಮ ಪ್ರಸಾತ್ ಮನೋಹರ್ ಅವರು ಪ್ರತಿಕ್ರಿಯಿಸಿ, ಬೆಂಗಳೂರಿನ ಲಕ್ಷಾಂತರ ನಿವಾಸಿಗಳಿಗೆ ಸೇವೆ ಸಲ್ಲಿಸುತ್ತಿರುವ ಜಲ ಮಂಡಳಿಯ ಕಾರ್ಯನಿರ್ವಹಣೆಗೆ ಬಿಐಎಸ್ ಪ್ರಮಾಣಪತ್ರ ಲಭಿಸಿರುವುದು ನಗರದ ನೀರಿನ ಉಪಯುಕ್ತತೆಗೆ ಸಂಬಂಧಿಸಿದಂತೆ ಮಹತ್ವದ ಮೈಲಿಗಲ್ಲು. ನಾಗರಿಕರಿಗೆ ಗುಣಮಟ್ಟದ ಸೇವೆಯನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ. ನಮ್ಮ ಕಾರ್ಯಾಚರಣೆಗಳಲ್ಲಿ ಕಠಿಣ ಗುಣಮಟ್ಟದ ನಿರ್ವಹಣೆಯ ಬದ್ಧತೆಯು ಜಲಮಂಡಳಿಗೆ ಈ ಗೌರವವನ್ನು ತಂದುಕೊಟ್ಟಿದೆ" ಎಂದು ಹೇಳಿದ್ದಾರೆ.

ಬಿಐಎಸ್ ಪ್ರಮಾಣೀಕರಣದ ವ್ಯಾಪ್ತಿಯು ಜಲ ಮಂಡಳಿಯ ಸಮಗ್ರ ನೀರಿನ ನಿರ್ವಹಣಾ ಕಾರ್ಯಾಚರಣೆಗಳನ್ನು ಒಳಗೊಂಡಿದೆ. ಇದರಲ್ಲಿ ಮೂಲದಿಂದ ನೀರಿನ ಸೇವನೆ, ಸಂಸ್ಕರಣೆ, ಸಂಗ್ರಹಣೆ, ಪಂಪಿಂಗ್, ಜಲಮಂಡಳಿ ವ್ಯಾಪ್ತಿಯಲ್ಲಿ ಪೈಪ್ ನೆಟ್‌ವರ್ಕ್ ಮೂಲಕ ವಿತರಣೆ, ನಿರ್ವಹಣೆ, ಮೀಟರಿಂಗ್ ಮತ್ತು ಗ್ರಾಹಕರಿಗೆ ಬಿಲ್ಲಿಂಗ್ ಒಳಗೊಂಡಿದೆ ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

SCROLL FOR NEXT