ರನ್ಯಾ ರಾವ್ ಹಾಗೂ ರಾಮಚಂದ್ರರಾವ್‌  
ರಾಜ್ಯ

Ranya Rao Case: ಡಿಜಿಪಿ ರಾಮಚಂದ್ರ ರಾವ್'ಗೆ ನೋಟಿಸ್ ಸಾಧ್ಯತೆ, ಕಡ್ಡಾಯ ರಜೆಗೆ ಸೂಚನೆ?

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧನ ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಕೆಗೆ ಕಾನೂನು ಬಾಹಿರವಾಗಿ ಶಿಷ್ಟಾಚಾರ (ಪ್ರೋಟೋಕಾಲ್‌) ಸೌಲಭ್ಯ ನೀಡಿರುವುದು ಬಹಿರಂಗಗೊಂಡಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.

ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಕೃತ್ಯದಲ್ಲಿ ತಮ್ಮ ಮಲ ಮಗಳಿಗೆ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ಸೌಲಭ್ಯ ಕಲ್ಪಿಸಿದ ಆರೋಪ ಬೆನ್ನಲ್ಲೇ ರಾಜ್ಯ ಪೊಲೀಸ್ ಗೃಹ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಡಿಜಿಪಿ ರಾಮಚಂದ್ರರಾವ್ ಅವರಿಗೆ ನೋಟಿಸ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ,

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧನ ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಕೆಗೆ ಕಾನೂನು ಬಾಹಿರವಾಗಿ ಶಿಷ್ಟಾಚಾರ (ಪ್ರೋಟೋಕಾಲ್‌) ಸೌಲಭ್ಯ ನೀಡಿರುವುದು ಬಹಿರಂಗಗೊಂಡಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.

ನನಗೆ ದುಬೈನಿಂದಲೇ ರನ್ಯಾ ರಾವ್‌ ಕರೆ ಮಾಡಿ ಶಿಷ್ಟಾಚಾರ (ಪ್ರೋಟೋಕಾಲ್‌) ಪ್ರಕಾರ ಕರೆದುಕೊಂಡು ಹೋಗುವಂತೆ ಹೇಳಿದ್ದರು. ಅಲ್ಲದೆ, ವಿಮಾನ ನಿಲ್ದಾಣದಲ್ಲಿ ಕುಟುಂಬದವರು ಯಾರೇ ಬಂದರೂ ಶಿಷ್ಟಾಚಾರ ನೀಡುವಂತೆ ಡಿಜಿಪಿ ರಾಮಚಂದ್ರರಾವ್‌ ಅವರ ಸೂಚನೆ ಇತ್ತು’ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆ ಶಿಷ್ಟಾಚಾರ ವಿಭಾಗದ ಹೆಡ್‌ ಕಾನ್‌ಸ್ಟೇಬಲ್‌ ಬಸವರಾಜು ಅವರು ಡಿಆರ್‌ಐಗೆ ಹೇಳಿಕೆ ನೀಡಿದ್ದಾರೆ.

ಮಾ.3ರಂದು ದುಬೈನಿಂದ ನನಗೆ ರನ್ಯಾ ಕರೆ ಮಾಡಿ ರಾತ್ರಿ 7ಕ್ಕೆ ವಿಮಾನದಲ್ಲಿ ಬರುತ್ತೇನೆ. ನನ್ನನ್ನು ಕಸ್ಟಮ್ಸ್‌ ಗ್ರೀನ್ ಚಾನೆಲ್ (ಹೆಚ್ಚು ತಪಾಸಣೆ ಇಲ್ಲದೆ) ಮೂಲಕ ಕರೆದೊಯ್ಯುವಂತೆ ಸೂಚಿಸಿದ್ದರು. ಅಂತೆಯೇ ದುಬೈ ವಿಮಾನ ಕೆಐಎನಲ್ಲಿ ಬಂದಿಳಿದ ಕೂಡಲೇ ವಿಮಾನ ನಿಲ್ದಾಣದೊಳಗೆ ತೆರಳಿ ಶಿಷ್ಟಾಚಾರ ಮೂಲಕ ರನ್ಯಾರನ್ನು ಕರೆತರಲು ಸಹೋದ್ಯೋಗಿ ಹಾಗೂ ವಿಮಾನ ನಿಲ್ದಾಣದ ಗುಪ್ತದಳ ವಿಭಾಗದ ಕಾನ್‌ಸ್ಟೇಬಲ್ ಧನುಶ್ ಕುಮಾರ್ ಜತೆ ಹೋಗಿದ್ದೆ. ನನಗೆ ಚಿನ್ನ ಸಾಗಣೆ ಬಗ್ಗೆ ಮಾಹಿತಿ ಇರಲಿಲ್ಲ. ನನಗೆ ಡಿಜಿಪಿ ರಾಮಚಂದ್ರರಾವ್‌ ಪರಿಚಯವಿತ್ತು. ಹೀಗಾಗಿ ತಮ್ಮ ಕುಟುಂಬದವರು ಹಾಗೂ ಸ್ನೇಹಿತರಿಗೆ ಶಿಷ್ಟಾಚಾರ ನೀಡುವಂತೆ ಡಿಜಿಪಿ ಸೂಚಿಸಿದ್ದರು. ಅಧಿಕಾರಿಗಳ ಸೂಚನೆಯಂತೆ ನಾನು ಕೆಲಸ ಮಾಡಿದ್ದೇನೆ. ನನಗೆ ಅವರ ಯಾವುದೇ ವ್ಯವಹಾರದ ಬಗ್ಗೆಯೂ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಹೇಳಿಕೆಯ ಹಿನ್ನೆಲೆಯಲ್ಲಿ ತಮ್ಮ ಮಲ ಮಗಳು ರನ್ಯಾ ಅವರಿಗೆ ಕಾನೂನುಬಾಹಿರವಾಗಿ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ಸೌಲಭ್ಯವನ್ನು ರಾಜ್ಯ ಗೃಹ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಡಿಜಿಪಿ ರಾಮಚಂದ್ರರಾವ್‌ ಕಲ್ಪಿಸಿದ್ದರು ಎಂಬ ಆರೋಪಕ್ಕೆ ಸಾಕ್ಷಿ ಸಿಕ್ಕಂತಾಗಿದೆ.

ಚಿನ್ನ ಕಳ್ಳ ಸಾಗಣೆ ಪ್ರಕರಣ ಸಂಬಂಧ ಹೆಡ್ ಕಾನ್‌ಸ್ಟೇಬಲ್ ಬಸವರಾಜು ಅವರನ್ನು ಡಿಆರ್‌ಐ ವಿಚಾರಣೆ ನಡೆಸಿ ಹೇಳಿಕೆ ಪಡೆದಿತ್ತು. ಇವರ ಹೇಳಿಕೆ ಡಿಜಿಪಿಗೆ ಸಂಕಷ್ಟವನ್ನು ಎದುರು ಮಾಡಿದೆ. ಸಾಕ್ಷ್ಯ ಸಿಕ್ಕಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡಿಜಿಪಿಗೆ ನೋಟಿಸ್ ಜಾರಿ ಮಾಡುವ ಸಾಧ್ಯತೆಗಳಿದ್ದು, ತನಿಖೆ ಪೂರ್ಣಗೊಳ್ಳುವವರೆಗೆ ಕಡ್ಡಾಯ ರಜೆಯ ಮೇಲೆ ಹೋಗುವಂತೆ ಸೂಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT