ರುದ್ರಪ್ಪ ಲಮಾಣಿ 
ರಾಜ್ಯ

ಮೂತ್ರ ವಿಸರ್ಜನೆಗೆ ಕಾರಿಂದ ಕೆಳಗಿಳಿದ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಬೈಕ್ ಡಿಕ್ಕಿ, ಗಂಭೀರ ಗಾಯ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿ ಈ ಅಪಘಾತ ಸಂಭವಿಸಿದ್ದು, ರುದ್ರಪ್ಪ ಲಮಾಣಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಇಳಿದಿದ್ದ ವಿಧಾನ ಸಭೆಯ ಉಪಸಭಾಪತಿ ಹಾಗೂ ಹಾವೇರಿ ಕಾಂಗ್ರೆಸ್ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಶುಕ್ರವಾರ ಬೈಕ್ ಡಿಕ್ಕಿ ಹೊಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿ ಈ ಅಪಘಾತ ಸಂಭವಿಸಿದ್ದು, ರುದ್ರಪ್ಪ ಲಮಾಣಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮೂತ್ರ ವಿಸರ್ಜನೆಗಾಗಿ ಕಾರಿಂದ ಕೆಳಗಿಳಿದು ನಿಂತಿದ್ದ ರುದ್ರಪ್ಪ ಲಮಾಣಿ ಅವರಿಗೆ ಬೈಕ್​ನಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಡಿಕ್ಕಿ ಹೊಡೆದಿದ್ದಾರೆ.

ಡಿಕ್ಕಿಯ ರಭಸಕ್ಕೆ ರುದ್ರಪ್ಪ ಲಮಾಣಿ ಅವರು ನೆಲಕ್ಕೆ ಬಿದ್ದ ಪರಿಣಾಮ ಅವರ ಹಣೆ, ಹಲ್ಲು ಮತ್ತು ಬಲ ಮೊಣಕಾಲಿಗೆ ಗಾಯಗಳಾಗಿವೆ. ತಕ್ಷಣಕ್ಕೆ ಹಿರಿಯೂರಲ್ಲಿ ಚಿಕಿತ್ಸೆ ಪಡೆದ ಅವರು, ಬಳಿಕ ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.

ಸ್ಥಳಕ್ಕೆ ಹಿರಿಯೂರು DYSP ಶಿವಕುಮಾರ್ ಹಾಗೂ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಆನಂದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ