ಹಂಪಿ  
ರಾಜ್ಯ

Another Hampi horror: ಇಸ್ರೇಲಿ ಯುವತಿ ಜೊತೆ ಯುವಕರ ಅಸಭ್ಯ ವರ್ತನೆ; ತಲೆಕೆಡಿಸಿಕೊಳ್ಳದ ಪೊಲೀಸರು!

ಯುವಕರು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವುದನ್ನು ನೋಡಿ, ಆಟೋರಿಕ್ಷಾ ಚಾಲಕನೊಬ್ಬ ಆಕೆಯ ರಕ್ಷಣೆಗೆ ಧಾವಿಸಿದ. ಆದರೆ ಯುವಕರು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದರು.

ಹಂಪಿ: ಇಸ್ರೇಲಿ ಪ್ರವಾಸಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಮಾಸುವ ಮುನ್ನವೇ. ಕಳೆದ ವಾರ ಹಂಪಿ ಉತ್ಸವದ ಸಂದರ್ಭದಲ್ಲಿ ಮೂವರು ಯುವಕರ ಗುಂಪೊಂದು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದೆ ಎಂದು ಘಟನೆಗೆ ಸಾಕ್ಷಿಯಾಗಿದ್ದ ವ್ಯಕ್ತಿಯೊಬ್ಬ ಹೇಳಿದ್ದಾರೆ.

ಯುವಕರು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವುದನ್ನು ನೋಡಿ, ಆಟೋರಿಕ್ಷಾ ಚಾಲಕನೊಬ್ಬ ಆಕೆಯ ರಕ್ಷಣೆಗೆ ಧಾವಿಸಿದ. ಆದರೆ ಯುವಕರು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದರು, ಆತನ ಮೂಗಿನಿಂದ ರಕ್ತ ಹರಿಯಿತು. ಯುವಕರನ್ನು ವಶಕ್ಕೆ ಪಡೆದ ಹಂಪಿ ಪೊಲೀಸರು, ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ಸೆಕ್ಷನ್ 109 ರ ಅಡಿಯಲ್ಲಿ ಪ್ರಕರಣ ದಾಖಲಿಸಿದರು.

ಇಸ್ರೇಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯುವಕರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಲಿಲ್ಲ, ಆದರೂ ಆಕೆಯನ್ನು ಆಟೋ ಚಾಲಕನ ಜೊತೆಗೆ ಠಾಣೆಗೆ ಕರೆದೊಯ್ಯಲಾಯಿತು.

ಪೊಲೀಸರು ಯುವಕರನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವುದಾಗಿ ಒಪ್ಪಿಕೊಂಡ ನಂತರ ಮತ್ತು ಇನ್ನು ಮುಂದೆ ಅಂತಹ ಅಪರಾಧಗಳನ್ನು ಮಾಡುವುದಿಲ್ಲ ಎಂದು ಲಿಖಿತ ಭರವಸೆ ನೀಡಿದ ನಂತರ ನ್ಯಾಯಾಲಯ ಅವರನ್ನು ಬಿಡುಗಡೆ ಮಾಡಿತು ಎಂದು ಅವರು ಹೇಳಿದರು.

ಇಸ್ರೇಲಿ ಮಹಿಳೆ ಆಟೋ ಚಾಲಕನಿಗೆ ತನ್ನ ರಾಯಭಾರ ಕಚೇರಿಯಲ್ಲಿ ಈ ವಿಷಯವನ್ನು ಚರ್ಚಿಸುವುದಾಗಿ ಮತ್ತು ಮೂವರು ಯುವಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾಳೆ ಎಂದು ಆಟೋ ಚಾಲಕು ತಿಳಿಸಿದ್ದಾರೆ. ಆದರೆ ಹಂಪಿ ಪೊಲೀಸರಿಗೆ ಇದುವರೆಗೆ ಯಾವುದೇ ರಾಯಭಾರ ಕಚೇರಿಯಿಂದ ಯಾವುದೇ ದೂರು ಬಂದಿಲ್ಲ.

ಹೊಸಪೇಟೆ ಮೂಲದ ಯುವಕರನ್ನು ಆಟೋ ಚಾಲಕ ಮತ್ತು ಸಂತ್ಸಸ್ತ ಜೊತೆಗೆ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅವರ ವಿರುದ್ಧ ಐಪಿಸಿ ಸೆಕ್ಷನ್ 109 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆಯನ್ನು ದೃಢಪಡಿಸಿದ ವಿಜಯನಗರದ ಪೊಲೀಸ್ ಅಧಿಕಾರಿಯೊಬ್ಬರು, ಗಸ್ತು ತಿರುಗುವಿಕೆಯನ್ನು ತೀವ್ರಗೊಳಿಸಲಾಗಿದೆ ಮತ್ತು ತೊಂದರೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT