ಕಾರು ನಜ್ಜುಗುಜ್ಜಾಗಿರುವುದು. 
ರಾಜ್ಯ

ಬೆಳಗಾವಿ: ಕಾರಿನ ಮೇಲೆ‌ ಲಾರಿ ಬಿದ್ದು ಇಬ್ಬರಿಗೆ ಗಂಭೀರ ಗಾಯ

ಕಾಂಕ್ರಿಟ್ ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಅಪ್ಪಚ್ಚಿಯಾಗಿದ್ದು, ಕಾರಿನೊಳಗೆ ಇಬ್ಬರು ಸಿಲುಕಿಕೊಂಡು ನರಳಾಡಿದ್ದಾರೆ. ತಮ್ಮನು ರಕ್ಷಿಸುವಂತೆ ಕೈ ಬೀಸಿ ಕೂಗಿಕೊಂಡಿದ್ದಾರೆ.

ಬೆಳಗಾವಿ: ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಮುಗುಚಿ ಬಿದ್ದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.

ಕಾಂಕ್ರಿಟ್ ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಅಪ್ಪಚ್ಚಿಯಾಗಿದ್ದು, ಕಾರಿನೊಳಗೆ ಇಬ್ಬರು ಸಿಲುಕಿಕೊಂಡು ನರಳಾಡಿದ್ದಾರೆ. ತಮ್ಮನು ರಕ್ಷಿಸುವಂತೆ ಕೈ ಬೀಸಿ ಕೂಗಿಕೊಂಡಿದ್ದಾರೆ.

ಕೂಡಲೇ ಸ್ಥಳೀಯರು ರಕ್ಷಣೆ ಧಾವಿಸಿದ್ದಾರೆ. ಕಾರು ಅಪ್ಪಚ್ಚಿಯಾಗಿದ್ದರಿಂದ ಜನರಿಂದ ರಕ್ಷಣೆ ಸಾಧ್ಯವಾಗಿಲ್ಲ. ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಎರಡು ಕ್ರೇನ್​ಗಳನ್ನು ಸ್ಥಳಕ್ಕೆ ಕರೆಯಿಸಿ ಅದರ ಮೂಲಕ ಕಾರಿನ ಪಾರ್ಟ್ಸ್​​ಗಳನ್ನು ಬಿಡಿ ಬಿಡಿ ಮಾಡಿ, ಕಾರಿನಲ್ಲಿದ್ದ ಇಬ್ಬರನ್ನು ಹೊರತೆಗೆದು ರಕ್ಷಿಸಿದ್ದಾರೆ.

ಕಾರ್ಯಾಚರಣೆ ನಡೆಸುವುದು ಕಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಎರಡು ಕ್ರೇನ್​ಗಳನ್ನು ಸ್ಥಳಕ್ಕೆ ಕರೆಯಿಸಿ ಅದರ ಮೂಲಕ ಕಾರಿನ ಪಾರ್ಟ್ಸ್​​ಗಳನ್ನು ಬಿಡಿ ಬಿಡಿ ಮಾಡಿ ಇಬ್ಬರನ್ನು ರಕ್ಷಣೆ ಮಾಡಲಾಗಿದೆ.

ಬೆಳಗಾವಿ ನಗರ ಹೊರವಲಯದ ಕೆಎಲ್ಇ ಆಸ್ಪತ್ರೆ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಆದರೂ ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಸಿಲುಕಿಹಾಕಿಕೊಂಡಿದ್ದವರನ್ನು ಪರಪ್ಪ ಬಾಳೆಕಾಯಿ, ನಿಂಗಪ್ಪ ಕೊಪ್ಪದ ಎಂದು ಗುರುತಿಸಲಾಗಿದೆ.

ಇತ್ತೀಚೆಗಷ್ಟೇ ಬೆಂಗಳೂರಿನ ಹೊರವಲಯದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಂಟೈನರ್‌ ಲಾರಿ ಬಿದ್ದು ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಂಚ ಪಡೆಯುತ್ತಿದ್ದ ಸಚಿವ ಕೆ.ಜೆ ಜಾರ್ಜ್‌ OSD ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

Russian strike: ಉಕ್ರೇನ್‌ ರೈಲು ನಿಲ್ದಾಣದಲ್ಲಿ ರಷ್ಯಾ 'ಡ್ರೋನ್' ದಾಳಿ; ಓರ್ವ ಸಾವು, 30 ಮಂದಿಗೆ ಗಾಯ! Video

ಬೆಂಗಳೂರು: ವಿವಾಹಿತರ ಅನೈತಿಕ ಸಂಬಂಧ ಸಾವಿನಲ್ಲಿ ಅಂತ್ಯ; Oyo ರೂಂನಲ್ಲಿ ಮಹಿಳೆ ಆತ್ಮಹತ್ಯೆ!

ಪ್ರಧಾನಿ ಮೋದಿ ಜೊತೆಗಿನ ವರ್ಚುವಲ್ ಸಭೆಯಲ್ಲಿ, ಕೈ ಮುಗಿದು ಕುಳಿತ ನಿತೀಶ್ ಕುಮಾರ್; ವ್ಯಾಪಕ ಟೀಕೆ!: Video

ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ

SCROLL FOR NEXT