ಬೆಂಗಳೂರು: ಬೇಲೂರು ತಾಲೂಕಿನ ಬಿಕ್ಕೋಡು, ಅರೇಹಳ್ಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಮಾನವ-ಆನೆ ಸಂಘರ್ಷದ ಹಿನ್ನೆಲೆಯಲ್ಲಿ ಸ್ಥಳೀಯರನ್ನು ಭಯಭೀತಗೊಳಿಸುತ್ತಿರುವ ಮೂರು ಆನೆಗಳನ್ನು ಸೆರೆ ಹಿಡಿಯುವಂತೆ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಶನಿವಾರ ಆದೇಶ ನೀಡಿದ್ದಾರೆ.
ಈ ಪ್ರದೇಶದಲ್ಲಿ ತಕ್ಷಣ ಆನೆ ಕಾರ್ಯಪಡೆ (ಇಟಿಎಫ್) ಕಚೇರಿ ಸ್ಥಾಪಿಸಲು ಮತ್ತು ಕಾರ್ಯಾಚರಣೆಗಳ ಮೇಲ್ವಿಚಾರಣೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೇಣಿಯ ಅಧಿಕಾರಿಯ ನಿಯೋಜನೆಗೆ ನಿರ್ದೇಶನ ನೀಡಿದ್ದಾರೆ.
ಮಾರ್ಚ್ 14 ರಂದು ತೋಟದಲ್ಲಿ ಆನೆ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ವಿಕಾಸಸೌಧದಲ್ಲಿ ಅರಣ್ಯಾಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಅವರು, ಆನೆಗಳ ಚಲನವಲನಗಳ ಮೇಲೆ ನಿಗಾ ಇಡಲು ಮತ್ತು ನಿವಾಸಿಗಳಿಗೆ ತಕ್ಷಣ ಎಚ್ಚರಿಕೆ ನೀಡಲು ಹಾಸನ ವ್ಯಾಪ್ತಿಗೆ ಎರಡು ಥರ್ಮಲ್ ಕ್ಯಾಮೆರಾ ಅಳವಡಿಸಿದ ಡ್ರೋನ್ ಖರೀದಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಆನೆ-ಸಂಬಂಧಿತ ಸಮಸ್ಯೆಗಳ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಎರಡು ಹೆಚ್ಚುವರಿ ಜೀಪ್‌ಗಳು ಮತ್ತು ತುರ್ತು ಸ್ಪಂದನಾ ತಂಡಗಳಿಗೆ ಹೆಚ್ಚಿನ ಸಿಬ್ಬಂದಿ ನಿಯೋಜನೆಯನ್ನು ಕಡ್ಡಾಯಗೊಳಿಸಿದ್ದಾರೆ. ಆನೆಗಳ ಚಲನವಲನಗಳ ಬಗ್ಗೆ ಮಾಹಿತಿ ಸ್ವೀಕರಿಸಿದ ನಂತರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದರು. ಬೇಲೂರು ನಿವಾಸಿಗಳು ಮತ್ತು ತೋಟದ ಕಾರ್ಮಿಕರಿಗೆ ಆಗುತ್ತಿರುವ ಅಪಾಯಗಳನ್ನು ತಗ್ಗಿಸಲು ಜಾಗೃತಿ ಅಭಿಯಾನ ನಡೆಸುವಂತೆ ಅವರು ಆದೇಶಿಸಿದ್ದಾರೆ.