ಮಂಗೇಶ ಪವಾರ-ವಾಣಿ‌ ವಿಲಾಸ ಜೋಶಿ‌ 
ರಾಜ್ಯ

ಬೆಳಗಾವಿ ಮೇಯರ್ ಚುನಾವಣೆ: ಮತ್ತೆ ಬಿಜೆಪಿ ಅಧಿಪತ್ಯ; ಮರಾಠಿಗನಿಗೆ ಮೇಯರ್ ಪಟ್ಟ-ಕನ್ನಡತಿಗೆ ಉಪಮೇಯರ್ ಸ್ಥಾನ!

ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ನಡೆಸಿದ್ದು ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಗಳಾದ ಮಂಗೇಶ ಪವಾರ ಹಾಗೂ‌ ಉಪಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಆಯ್ಕೆಯಾಗಿದ್ದಾರೆ.

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ನಡೆಸಿದ್ದು ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಗಳಾದ ಮಂಗೇಶ ಪವಾರ ಹಾಗೂ‌ ಉಪಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 40 ಸದಸ್ಯರನ್ನು ಹೊಂದಿರುವ ಬಿಜೆಪಿ ಮತ್ತೊಮ್ಮೆ ಪಾಲಿಕೆ‌ ಚುಕ್ಕಾಣಿ ‌ಹಿಡಿಯುವಲ್ಲಿ ಯಶಸ್ವಿಯಾಗಿದೆ.

41ನೇ ವಾರ್ಡ್ ಸದಸ್ಯರಾಗಿರುವ ಮಂಗೇಶ ಪವಾರ 40 ಮತಗಳನ್ನು ಪಡೆಯುವ ಮೂಲಕ ಮೇಯರ್ ಆಗಿ ಆಯ್ಕೆಯಾಗಿದ್ದರೆ, 43ನೇ ವಾರ್ಡಿನ ಸದಸ್ಯೆ ವಾಣಿವಿಲಾಸ ಜೋಶಿ ಅವರು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನಕ್ಕೆ ಬಿಜೆಪಿಯ ಮಂಗೇಶ ಪವಾರ್, ರಾಜು ಭಾತಖಾಂಡೆ, ಪಕ್ಷೇತರ ಅಭ್ಯರ್ಥಿ ಬಸವರಾಜ ಮೋದಗೇಕರ್, ಎಐಎಂಐಎಂನ ಶಾಹಿದ್​​ಖಾನ್ ಪಠಾಣ ನಾಮಪತ್ರ ಸಲ್ಲಿಸಿದರು. ತದನಂತರ ರಾಜು ಭಾತಖಾಂಡೆ ಹಾಗೂ ಶಾಹಿದ್​​ಖಾನ್ ಪಠಾಣ ತಮ್ಮ ನಾಮಪತ್ರ ಹಿಂಪಡೆದರು.

ಚುನಾವಣೆ ಪ್ರಕ್ರಿಯೆಯಲ್ಲಿ ಒಟ್ಟು 65 ಮತದಾರ ಪೈಕಿ 60 ಮಂದಿ ಹಾಜರಿದ್ದರು. ಆದರೆ ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಶಾಸಕ ಆಸಿಫ್ ಸೇಠ್, ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಓರ್ವ ಪಾಲಿಕೆ ಸದಸ್ಯ ಗೈರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!