ಡಾ.ವಾಮನ ನಂದಾವರ  
ರಾಜ್ಯ

ತುಳು-ಕನ್ನಡ ವಿದ್ವಾಂಸ ಡಾ. ವಾಮನ ನಂದಾವರ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದರು.

ಬಂಟ್ವಾಳ: ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ತುಳು, ಕನ್ನಡ ವಿದ್ವಾಂಸರಾಗಿದ್ದ ಡಾ.ವಾಮನ ನಂದಾವರ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ವರ್ಷಗಳಿಂದ ಅನಾರೋಗ್ಯಪೀಡಿತರಾಗಿದ್ದ ಅವರು ಇಂದು ಬೆಳಗ್ಗೆ ಮಂಗಳೂರಿನಲ್ಲಿ ಕೊನೆಯುಸಿರೆಳೆದರು.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದರು.ಹೆಸರಾಂತ ಜಾನಪದ ವಿದ್ವಾಂಸರಾಗಿದ್ದ ಡಾ. ವಾಮನ ಅವರು ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ.

ಬಾಬು ಬಾಳೆಪುಣಿ- ಪೂವಮ್ಮರವರ ಮಗನಾಗಿ 1944ರ ನ.15ರಂದು ಜನಿಸಿದ ಡಾ.ವಾಮನ, ಬಂಟ್ವಾಳ ತಾಲೂಕಿನ ಮುದುಂಗಾರು ಕಟ್ಟೆ ಸರಕಾರಿ ಎಲಿಮೆಂಟರಿ ಶಾಲೆ, ಪಾಣೆಮಂಗಳೂರಿನ ಎಸ್‌ವಿಎಸ್ ಹೈಯರ್ ಎಲಿಮೆಂಟರಿ ಶಾಲೆ, ಕುರ್ನಾಡಿನ ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆ, ಕುರ್ನಾಡಿನ ಬೋರ್ಡ್ ಹೈಸ್ಕೂಲು, ಕೋಟೆಕಾರಿನ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ವಿದ್ಯಾಭ್ಯಾಸ ಮಾಡಿದ ಬಳಿಕ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಬಿಎಸ್ಸಿ ಪದವಿ ಪಡೆದರು.

ಮಂಗಳೂರು ಸರಕಾರಿ ಮಹಾವಿದ್ಯಾಲಯದಲ್ಲಿ ಬಿಎಡ್ ಪದವಿ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಎಂಎ (ಕನ್ನಡ), ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ ಎಂ.ಎಡ್ ಪದವಿ ಪಡೆದಿದ್ದರು.

ಬೆಂಗಳೂರಿನ ಚನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ಸಹಾಯಕ ಅಧ್ಯಾಪಕ, ಸೈಂಟ್ ಆನ್ಸ್ ಪ್ರೌಢಶಾಲೆಯ ಸಹಾಯಕ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ಬಳಿಕ ಸೈಂಟ್ ಆನ್ಸ್ ಮಹಿಳಾ ಶಿಕ್ಷಕ- ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಅಧ್ಯಯನ ಮಾರ್ಗದರ್ಶಕರಾಗಿ ದುಡಿದಿದ್ದ ಅವರು, ಪಿಲಿಕುಳ ನಿಸರ್ಗಧಾಮದ ಯೋಜನಾಧಿಕಾರಿಯಾಗಿ ಕರ್ತವ್ಯ ಸಲ್ಲಿಸಿದ್ದರು.

ಡಾ.ವಾಮನ ನಂದಾವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ತುಳು ಅಕಾಡೆಮಿಯ ಅಧ್ಯಕ್ಷತೆಯೂ ಸೇರಿದಂತೆ ಹಲವಾರು ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಗಳ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದ ಡಾ.ನಂದಾವರ ಅವರು ತುಳು ಮತ್ತು ಕನ್ನಡ ಜಾನಪದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಲವಾರು ಗ್ರಂಥಗಳನ್ನು ರಚಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT