ಅಭಿಷೇಕ್ ಅಂಬರೀಷ್-ಅವಿವಾ ಬಿದ್ದಪ್ಪ, ಸುಮಲತಾ ಮಗುವಿನ ಜೊತೆಗೆ  
ರಾಜ್ಯ

ಸುಮಲತಾ ಮೊಮ್ಮಗನಿಗೆ ನಾಮಕರಣ: ಮಗುವಿಗೆ ಇಟ್ಟ ಹೆಸರೇನು ಗೊತ್ತಾ?

ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದಪ್ಪ ಅವರು 2023ರ ಜೂನ್ 5 ರಂದು ಬೆಂಗಳೂರಿನಲ್ಲಿ ವಿವಾಹವಾಗಿದ್ದರು.

ಬೆಂಗಳೂರು: ಮಾಜಿ ಸಂಸದೆ, ಹಿರಿಯ ನಟಿ ಸುಮಲತಾ ಅಂಬರೀಶ್ ಅವರ ಮೊಮ್ಮಗ, ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನ ನಾಮಕರಣ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನೆರವೇರಿತು. ಅಂಬರೀಷ್ ಕುಟುಂಬಸ್ಥರು, ಸಂಬಂಧಿಕರು, ಹಿತೈಷಿಗಳು, ರಾಜಕೀಯ ಮತ್ತು ಚಿತ್ರರಂಗದ ಹಲವರು ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಮಗುವಿಗೆ ಹೆಸರಿಟ್ಟ ಕುಟುಂಬ

ತಮ್ಮ ವಂಶದ ಕುಡಿಗೆ ಸುಮಲತಾ ಮತ್ತು ಅಭಿಷೇಕ್ ಸೇರಿ ರಾಣಾ ಅಮರ್ ಅಂಬರೀಶ್ ಎಂದು ಹೆಸರಿಟ್ಟಿದ್ದಾರೆ. ಹಿರಿಯ ನಟ ದಿವಂಗತ ಅಂಬರೀಷ್ ಅವರ ಮೊದಲಿನ ಹೆಸರು ಅಮರ್ ನಾಥ್ ಎಂದಾಗಿತ್ತು, ಅವರ ಮೂಲ ಹೆಸರಿಟ್ಟಿದ್ದು ರಾಣಾ ಎಂದರೆ ರಾಜ, ಮಹಾಯೋಧ ಎಂದರ್ಥವಿದೆ.

ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದಪ್ಪ ಅವರು 2023ರ ಜೂನ್ 5 ರಂದು ಬೆಂಗಳೂರಿನಲ್ಲಿ ವಿವಾಹವಾಗಿದ್ದರು. ಬಳಿಕ ಮಂಡ್ಯದಲ್ಲಿ ಬೀಗರೂಟ ಸಹ ಆಯೋಜಿಸಲಾಗಿತ್ತು. ಕಳೆದ ವರ್ಷ ನವೆಂಬರ್ 12 ರಂದು ಈ ಜೋಡಿಗೆ ಗಂಡು ಮಗು ಜನನವಾಗಿತ್ತು.

ಇತ್ತೀಚೆಗೆ ನಟ ದರ್ಶನ್ ಮತ್ತು ಸುಮಲತಾ ಮಧ್ಯೆ ಸಂಬಂಧದಲ್ಲಿ ಬಿರುಕು ಮೂಡಿದೆ ಎಂದು ಸುದ್ದಿಯಾಗಿತ್ತು. ಇಂದಿನ ಕಾರ್ಯಕ್ರಮಕ್ಕೆ 2019ರ ಮಂಡ್ಯ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜೋಡೆತ್ತುಗಳಂತೆ ಕೆಲಸ ಮಾಡಿದ್ದ ದರ್ಶನ್ ಮತ್ತು ಯಶ್ ಹೋಗಿದ್ದಾರೆಯೇ ಎಂಬ ಬಗ್ಗೆ ಮಾಹಿತಿಯಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT