ಅಪಘಾತ (ಸಂಗ್ರಹ ಚಿತ್ರ) 
ರಾಜ್ಯ

ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ: ಓರ್ವ ದುರ್ಮರಣ

ಹೊಸಗುಡ್ಡದಹಳ್ಳಿಯಿಂದ ಬಾಪೂಜಿನಗರದ ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ವಾಹನವು ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಚಾಲನನ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿದೆ.

ಬೆಂಗಳೂರು: ಮೈಸೂರು ರಸ್ತೆಯ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ವಪ್ಪಿರುವ ಘಟನೆ ಶನಿವಾ ನಡೆದಿದೆ.

ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ತಮಿಳುನಾಡು ಮೂಲದ ಜಗನ್ ಎಂದು ಗುರ್ತಿಸಲಾಗಿದೆ. ಘಟನೆಯಲ್ಲಿ. ಪಾದಚಾರಿ ಮನೋಜ್ (20) ಮತ್ತು ಆಟೋರಿಕ್ಷಾ ಚಾಲಕ ಚಂದಾ ಪಾಷಾ (25) ಗಾಯಗೊಂಡಿದ್ದಾರೆ. ಅಪಘಾತದಲ್ಲಿ ವಾಹನ ಸಂಪೂರ್ಣವಾಗಿ ಜಖಂಗೊಂಡಿದೆ.

ಬೆಳಗ್ಗೆ 4 ಗಂಟೆ ಸುಮಾರಿಗೆ ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿಯಿಂದ ಬಾಪೂಜಿನಗರದ ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ವಾಹನವು ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಚಾಲನನ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕ್ಯಾಂಟರ್ ಮೂರು ಕ್ಯಾಬ್, ಮೂರು ಆಟೋ ಹಾಗೂ ಒಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕ್ಯಾಂಟರ್ ವಾಹನದ ಚಾಲಕ ಜಗನ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬೆಳಿಗ್ಗೆ ಮೃತಪಟ್ಟಿದ್ದಾನೆ. ಗಾಯಗೊಂಡಿರುವ ಇಬ್ಬರಿಗೆ ಚಿಕಿತ್ಸೆ ಮುಂದುವರೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!