ಬಂಧಿತ ಆರೋಪಿಗಳು 
ರಾಜ್ಯ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಹೋಳಿ ಆಚರಣೆ ವೇಳೆ ನೇಪಾಳಿ ಗುಂಪುಗಳ ನಡುವೆ ಘರ್ಷಣೆ, ಮೂವರ ಬಂಧನ

ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್ ನಲ್ಲಿ ಹೋಳಿ ಆಚರಿಸುವಾಗ ನೇಪಾಳಿ ನಾಗರಿಕರ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಲಾಲ್‌ಬಾಗ್ ನಲ್ಲಿ ಶುಕ್ರವಾರ ಸಂಜೆ ಈ ಘರ್ಷಣೆ ನಡೆದಿದ್ದು, ಯುವಕರ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಅಮರ್, ಉಮೇಶ್ ಮತ್ತು ರಮೇಶ್ ಎಂದು ಗುರುತಿಸಲಾಗಿದ್ದು, ಬಂಧಿತರಲ್ಲಿ ಓರ್ವ ಬೆಂಗಳೂರು ನಿವಾಸಿಯಾಗಿದ್ದರೆ, ಉಳಿದ ಇಬ್ಬರು ನೇಪಾಳ ಮೂಲದವರು ಎಂದು ತಿಳಿದು ಬಂದಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಹಲವಾರು ಜನ ಕಳವಳ ವ್ಯಕ್ತಪಡಿಸಿ, ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ ನಂತರ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

ಪೊಲೀಸರ ಪ್ರಕಾರ, ಎರಡು ಗುಂಪುಗಳು ಪರಸ್ಪರ ಬಣ್ಣಗಳನ್ನು ಎರಚುವ ಮೂಲಕ ಹೋಳಿ ಆಡುತ್ತಿದ್ದಾಗ ಇದ್ದಕ್ಕಿದ್ದಂತೆ ಅವರ ನಡುವೆ ಗಲಾಟೆ ಪ್ರಾರಂಭವಾಯಿತು.

ಜಗಳಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಎರಡು ಗುಂಪುಗಳ ಸದಸ್ಯರು ಕೋಲುಗಳು ಮತ್ತು ನೀರಿನ ಬಾಟಲಿಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT