ಶಾಸಕ ರಾಜುಕಾಗೆ 
ರಾಜ್ಯ

ಸರ್ಕಾರದ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ವಿರುದ್ಧ ಕೈ ಶಾಸಕ ರಾಜು ಕಾಗೆ ಆಕ್ರೋಶ

ನಮ್ಮ ಸರ್ಕಾರದಲ್ಲಿ ಸಚಿವರಿಗೆ ಮತ್ತು ಕಾರ್ಯದರ್ಶಿಗೂ ತಾಳ ಮೇಳ ಇಲ್ಲ. ಇದೇ ರೀತಿ ಮುಂದುವರೆದರೆ ಶಾಸಕರು ಬೇರೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಬೆಳಗಾವಿ: ಕಂದಾಯ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ವಿರುದ್ಧ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಗವಾಡ ಪಟ್ಟಣದಲ್ಲಿ ಸುಮಾರು 8.60 ಕೋಟಿ ರೂ. ವೆಚ್ಚದಲ್ಲಿ ಪ್ರಜಾ ಸೌಧ ಕಟ್ಟಡ ನಿರ್ಮಾಣ ಮಾಡಲು ಅನುಮೋದನೆ ನೀಡುವಂತೆ ರಾಜು ಕಾಗೆ ರಾಜೇಂದ್ರ ಕಠಾರಿಯಾ ಅವರ ಕಚೇರಿಗೆ ತೆರಳಿದ್ದರು. ಈ ವೇಳೆ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ರಾಜು ಕಾಗೆಯವರು, ಬೆಳಗಾವಿಯ ಕಾಗ್ವಾಡ್ ಪಟ್ಟಣದಲ್ಲಿ ಪ್ರಜಾಸೌಧ (ಸಾರ್ವಜನಿಕ ಆಡಳಿತ ಕಟ್ಟಡ) ನಿರ್ಮಾಣಕ್ಕೆ ಅನುಮೋದನೆ ಕೋರಿದಾಗ ನನಗೆ ಅವಮಾನ ಮಾಡಿದ್ದಾರೆಂದು ಹೇಳಿದ್ದಾರೆ.

ಅಲ್ಲಿ ಕೆರೆ ಇತ್ತು, ನಿಮಗೆ ಬುದ್ಧಿ ಇದೆಯೋ ಇಲ್ಲವೋ ಹೋಗಿ ಅಂತ ಹೇಳಿ ನನಗೆ ಅಪಮಾನ ಮಾಡಿದ್ದಾರೆ. ನನಗೆ ಅಪಮಾನ ಮಾಡಿದ ಕಾರ್ಯದರ್ಶಿ ವಿರುದ್ಧ ನಾಳೆ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡಿಸುತ್ತೇನೆ ಎಂದು ಗುಡುಗಿದ್ದಾರೆ.

ನಮ್ಮ ಸರ್ಕಾರದಲ್ಲಿ ಸಚಿವರಿಗೆ ಮತ್ತು ಕಾರ್ಯದರ್ಶಿಗೂ ತಾಳ ಮೇಳ ಇಲ್ಲ. ಇದೇ ರೀತಿ ಮುಂದುವರೆದರೆ ಶಾಸಕರು ಬೇರೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಕಂದಾಯ ಇಲಾಖೆ ಕಾರ್ಯದರ್ಶಿ ಗ್ರಾಮ ಲೆಕ್ಕಿಗರು ಸೇರಿದಂತೆ ಇಲಾಖೆ ಅಧಿಕಾರಿಗಳೊಂದಿಗೆ ಸಹಕರಿಸುತ್ತಿಲ್ಲ, ಇದು ಆಡಳಿತಾತ್ಮಕ ಪ್ರಗತಿಗೆ ಮತ್ತಷ್ಟು ಅಡ್ಡಿಯಾಗುತ್ತಿದೆ ಎಂದು ಕಾಗೆ ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್