ಶ್ರೀನಿವಾಸ್ 
ರಾಜ್ಯ

ಕಾಂಗ್ರೆಸ್​ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಶ್ರೀನಿವಾಸ್ ಅವರ ಪತ್ನಿ ಡಾ. ಎಸ್. ಚಂದ್ರಕಲಾ ಅವರು ಹೈಕೋರ್ಟ್​ಗೆ ಮನವಿ ಮಾಡಿದ್ದರು.

ಬೆಂಗಳೂರು: ಮಾಜಿ ಸ್ಪೀಕರ್ ಕೆಆರ್ ರಮೇಶ್ ಕುಮಾರ್ ಆಪ್ತ ಹಾಗೂ ಕೋಲಾರ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆಯನ್ನು ಕರ್ನಾಟಕ ಹೈಕೋರ್ಟ್​ ಸೋಮವಾರ ಸಿಬಿಐಗೆ ವಹಿಸಿದೆ.

ಸಿಬಿಐ ತನಿಖೆ ಕೋರಿ ಶ್ರೀನಿವಾಸ್ ಅವರ ಪತ್ನಿ ಡಾ. ಎಸ್. ಚಂದ್ರಕಲಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಪ್ರಕರಣವನ್ನು ಸಿಬಿಐಗೆ ವಹಿಸಿ ಆದೇಶ ಹೊರಡಿಸಿದ್ದಾರೆ.

ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಎಂ ಶ್ರೀನಿವಾಸ್ ಅವರನ್ನು 2023 ಅಕ್ಟೋಬರ್ 23ರಂದು ಶ್ರೀನಿವಾಸಪುರ ಹೊರವಲಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು.

ಕೊಲೆಯ ಹಿಂದೆ ರಾಜಕೀಯ ಷಡ್ಯಂತ್ರವಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಶ್ರೀನಿವಾಸ್ ಅವರ ಪತ್ನಿ ಡಾ. ಎಸ್. ಚಂದ್ರಕಲಾ ಅವರು ಹೈಕೋರ್ಟ್​ಗೆ ಮನವಿ ಮಾಡಿದ್ದರು.

ಸ್ಥಳೀಯ ಪೊಲೀಸರು ಹಾಗೂ ಸಿಐಡಿ ಅಧಿಕಾರಿಗಳು ಸಮರ್ಪಕ ತನಿಖೆ ನಡೆಸಿಲ್ಲ. ಸತ್ಯವನ್ನು ನೀರಿನಲ್ಲಿ ಮುಳುಗಿಸಲಾಗಿದೆ. ಹೀಗಾಗಿ ಸಿಬಿಐ ತನಿಖೆ ಅನಿವಾರ್ಯವೆಂದ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, 3 ತಿಂಗಳಿನಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸಿಬಿಐಗೆ ಸೂಚನೆ ನೀಡಿದೆ.

ಇನ್ನು ಸಿಬಿಐ ತನಿಖೆಗೆ ಸಹಕರಿಸುವಂತೆ ಪೊಲೀಸರಿಗೂ ಸಹ ಹೈಕೋರ್ಟ್​ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!