ಅನಧಿಕೃತ ಫ್ಲೆಕ್ಸ್ 
ರಾಜ್ಯ

ನಗರದ ಅನಧಿಕೃತ ಫ್ಲೆಕ್ಸ್-ಬ್ಯಾನರ್ ತೆರವುಗೊಳಿಸಿ, ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಿ: ಡಿ.ಕೆ ಶಿವಕುಮಾರ್

ಮಾರ್ಚ್ 17 ರಂದು ಸೋಮವಾರ ಅರಮನೆ ಮೈದಾನದಲ್ಲಿ (ಸೋಮವಾರ) ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ಬೆಂಗಳೂರು: ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅರಮನೆ ಮೈದಾನದ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿಗೆ ಸೂಚನೆ ನೀಡಿದ್ದಾರೆ.

ಮಾರ್ಚ್ 17 ರಂದು ಸೋಮವಾರ ಅರಮನೆ ಮೈದಾನದಲ್ಲಿ (ಸೋಮವಾರ) ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹಾಕಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳನ್ನ ಕೂಡಲೇ ತೆರವುಗೊಳಿಸಬೇಕು ಎಂದು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದರು.

ಅನಧಿಕೃತವಾಗಿ ಬ್ಯಾನರ್, ಫ್ಲೆಕ್ಸ್ ಹಾಕಿರುವವರು ತಾವಾಗಿಯೇ ತೆಗೆಯಬೇಕು, ಒಂದೊಮ್ಮೆ ತೆರವು ಮಾಡದಿದ್ದರೆ ಸಂಬಂಧಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಆದೇಶಿಸಿದ್ದೇನೆ. ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಬಲವನ್ನು ಬೂತ್ ಗಳಲ್ಲಿ ಪ್ರದರ್ಶಿಸಬೇಕೇ ಹೊರತು, ಈ ರೀತಿ ಬ್ಯಾನರ್, ಫ್ಲೆಕ್ಸ್ ಹಾಕಿಸಿ ಅಲ್ಲ ಎಂಗು ಹೇಳಿದರು.

ಒಂದೊಮ್ಮೆ ತೆರವು ಮಾಡದಿದ್ದರೆ ಸಂಬಂಧಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.

ಬೆಂಗಳೂರು ನಗರದ ಸೌಂದರ್ಯವನ್ನು ಹಾಳು ಮಾಡಬಾರದು ಎಂದು ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ನಿಷೇಧಿಸಲಾಗಿದೆ. ಸರ್ಕಾರದ ಈ ಆದೇಶವನ್ನು ಪದೇ ಪದೆ ನಿರ್ಲಕ್ಷಿಸಲಾಗಿದೆ. ಈ ಆದೇಶ ಉಲ್ಲಂಘಿಸಿರುವವರು ನಮ್ಮ ಪಕ್ಷದವರಾದರೂ ಸರಿ, ಬೇರೆ ಪಕ್ಷದವರಾದರೂ ಸರಿ ಅಂತಹವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT