ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ನೀಡುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಬಿಜೆಪಿ 'ಅಸಂವಿಧಾನಿಕ ದುಸ್ಸಾಹಸ' ಎಂದು ಕರೆದಿದೆ. ಈ ಕ್ರಮದ ವಿರುದ್ಧ ಹೋರಾಟ ನಡೆಸುತ್ತೇವೆ. ಅಲ್ಲದೆ ನ್ಯಾಯಾಲಯದಲ್ಲಿಯೂ ಪ್ರಶ್ನಿಸುತ್ತೇವೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸಿದ್ದರಾಮಯ್ಯ ಸರ್ಕಾರವು ಪ್ರಸ್ತಾವಿತ ಅಸಂವಿಧಾನಿಕ ದುಸ್ಸಾಹಸವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಮುಸ್ಲಿಮರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಧರ್ಮಾಧಾರಿತ ಮೀಸಲಾತಿ ಸಾಂವಿಧಾನಕ್ಕೆ ವಿರುದ್ಧವಾಗಿದೆ ಎಂಬ ಬಿಜೆಪಿಯ ಆರೋಪವನ್ನು ಡಿಸಿಎಂ ಡಿಕೆ ಶಿವಕುಮಾರ್ ತಳ್ಳಿಹಾಕಿದರು. ಅಲ್ಲದೆ ತಮ್ಮ ಸರ್ಕಾರದ ಪ್ರಸ್ತಾವನೆಯನ್ನು ಸಮರ್ಥಿಸಿಕೊಂಡಿರುವ ಅವರು, ಮುಸ್ಲಿಮರು, ಕ್ರಿಶ್ಚಿಯನ್ನರು, ಸಿಖ್ಖರು ಮತ್ತು ಬೌದ್ಧರು ಈ ದೇಶದ ನಾಗರಿಕರು ಎಂದು ಹೇಳಿದರು.

ಹಿಂದೂ ಯುವಕರೇ ಅನ್ಯ ಧರ್ಮಿಯರ ಹುಡುಗಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಕರೆ ನೀಡಿದ್ದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ರಶೀದ್ ನೀಡಿದ ದೂರಿನ ಹಿನ್ನಲೆಯಲ್ಲಿ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೋಮು ದ್ವೇಷ ಪ್ರಚೋದನೆ ಅಡಿಯಲ್ಲಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ. ಮಾರ್ಚ್ 9ರಂದು VHP ಆಯೋಜಿಸಿದ್ದ ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮನಡೆ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ್ದ ಸೂಲಿಬೆಲೆ ಅವರು, ಅನ್ಯ ಧರ್ಮಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಕರೆ ನೀಡಿದ್ದರು. ಇದು ಭಾರೀ ವಿವಾದ ಸೃಷ್ಟಿಸಿತ್ತು.
ಕೋಲಾರದ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿ ಕರ್ನಾಟಕ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತ ಎಂ ಶ್ರೀನಿವಾಸ್ ಅವರನ್ನು 2023 ಅಕ್ಟೋಬರ್ 23ರಂದು ಶ್ರೀನಿವಾಸಪುರ ಹೊರವಲಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದರು. ಈ ಸಂಬಂಧ ಶ್ರೀನಿವಾಸ್ ಅವರ ಪತ್ನಿ ಡಾ. ಎಸ್. ಚಂದ್ರಕಲಾ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕೆಂದು ಹೈಕೋರ್ಟ್ಗೆ ಮನವಿ ಮಾಡಿದ್ದರು.
ಕೇಂದ್ರ ಸರ್ಕಾರವು ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕು ಮತ್ತು ಅಕ್ರಮ ವಲಸಿಗರನ್ನು ನೇರವಾಗಿ ಗಡಿಪಾರು ಮಾಡಲು ನಿಯಮಗಳನ್ನು ಸರಳಗೊಳಿಸಬೇಕು ಎಂದು ಗೃಹ ಸಚಿವ ಜಿ ಪರಮೇಶ್ವರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಅಧಿಕೃತ ಸಂಖ್ಯೆಯನ್ನು ಸರ್ಕಾರಕ್ಕೆ ನೀಡಲಾಗಿದೆ. ಆದರೂ, ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಿರುವ ಸಾಧ್ಯತೆ ಇದೆ ಎಂದರು. ಕಳೆದ 20 ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ 15,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿಗರು ವಾಸಿಸುತ್ತಿದ್ದಾರೆ. ವಲಸಿಗರ ಭಾಷೆ ಮತ್ತು ದೈಹಿಕ ನೋಟವು ಭಾರತೀಯರಿಗಿಂತ ಭಿನ್ನವಾಗಿದ್ದರೂ, ಈ ವ್ಯಕ್ತಿಗಳು ಆಧಾರ್ ಕಾರ್ಡ್‌ಗಳು ಮತ್ತು ಪಡಿತರ ಚೀಟಿಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿ ಬಿಜೆಪಿ ಎಂಎಲ್‌ಸಿ ಪಿಎಚ್ ಪೂಜಾರ್ ಪ್ರಶ್ನಿಸಿದ್ದರು.