ಮೃತ ಮಹಿಳೆಯರು 
ರಾಜ್ಯ

ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಬಿದ್ದ ವಿದ್ಯುತ್ ಕಂಬ; ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ಸಾವು

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮತಿ (35) ಮತ್ತು ಸೋನಿ ( 36) ಮೃತಪಟ್ಟಿದ್ದಾರೆ. ಇಬ್ಬರು ತಮ್ಮ ಮಕ್ಕಳನ್ನು ಟ್ಯೂಷನ್ ನಿಂದ ಕರೆದುಕೊಂಡು ಬರಲು ಹೋಗುತ್ತಿರುವಾಗ ಈ ಅವಘಡ ಸಂಭವಿಸಿದೆ.

ಬೆಂಗಳೂರು: ವಿದ್ಯುತ್ ಕಂಬ ತಲೆ ಮೇಲೆ ಬಿದ್ದು 4 ತಿಂಗಳ ಗರ್ಭಿಣಿ ಸೇರಿ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ನಗರದ ಸದ್ದುಗುಂಟೆ ಪಾಳ್ಯದಲ್ಲಿ ನಡೆದಿದೆ.

ಸೋಮವಾರ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮತಿ (35) ಮತ್ತು ಸೋನಿ ( 36) ಮೃತಪಟ್ಟಿದ್ದಾರೆ. ಇಬ್ಬರು ತಮ್ಮ ಮಕ್ಕಳನ್ನು ಟ್ಯೂಷನ್ ನಿಂದ ಕರೆದುಕೊಂಡು ಬರಲು ಹೋಗುತ್ತಿರುವಾಗ ಈ ಅವಘಡ ಸಂಭವಿಸಿದೆ.

ರಸ್ತೆ ಕಾಮಗಾರಿ ನಡೆಯುವ ವೇಳೆ ಬೆಳಿಗ್ಗೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿ ಹೊಡೆದಿತ್ತು. ಸಂಜೆ ಕಂಬ ಮಹಿಳೆಯರ ಮೇಲೆ ಬಿದ್ದಿದೆ ಎಂದು‌ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಬೈಯಪ್ಪನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.‌ ಜರಸ್ತೆ ಕಾಮಗಾರಿ ಗುತ್ತಿಗೆ ಪಡೆದಿರುವ ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

ರಸ್ತೆ ಕಾಮಗಾರಿಯ ವೇಳೆ ಜೆಸಿಬಿ ಡ್ರೈವರ್‌ ಕಿವಿಗೆ ಹೆಡ್‌ಫೋನ್ ಹಾಕಿಕೊಂಡು ಕೆಲಸ ಮಾಡುತ್ತಿದ್ದ. ಈ ವೇಳೆ ಲೈಟ್ ಕಂಬದಿಂದ ಮನೆಗೆ ಬೇರೆ ಕಡೆಗೆ ಕನೆಕ್ಟ್ ಮಾಡಿದ್ದ ವೈಯರ್‌ಗೆ ಜೆಸಿಬಿಯ ಮುಂಭಾಗ ಟಚ್ ಆಗಿದೆ. ಜನ ಜೋರಾಗಿ ಕೂಗಿಕೊಂಡರೂ ಡ್ರೈವರ್‌ ಕೇಳಿಸಿಕೊಳ್ಳದೇ ವೈಯರ್ ಎಳೆದಿರುವುದೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಕುಣಿಗಲ್ ನಿವಾಸಿಗಳ ದಾರುಣ ಸಾವು

ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ: 21 ಕೋಟಿಯಷ್ಟು ಹಣ ಮೃತಪಟ್ಟವರ ಖಾತೆಗೆ ಹೋಗಿದೆ; ಡಿಕೆ ಶಿವಕುಮಾರ್

SCROLL FOR NEXT