ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರ ವಿರುದ್ಧ ಅಶ್ಲೀಲ ಪದ ಬಳಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಮಂಗಳವಾರ ದೂರು ದಾಖಲಾಗಿದೆ.
ನಟಿ ರನ್ಯಾ ರಾವ್ ಪರವಾಗಿ ಅಕುಲ ಅನುರಾಧ ಎಂಬುವವರು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ದೂರು ನೀಡಿದ್ದಾರೆ.
ಯತ್ನಾಳ್ ಅವರು ಅಶ್ಲೀಲ ಪದ ಬಳಸುವ ಮೂಲಕ ನಟಿಯ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ದೂರಿನ ಆಧಾರದ ಮೇಲೆ ಬಿಎನ್ಎಸ್ ಸೆಕ್ಷನ್ 79 ಅಡಿ FIR ದಾಖಲಾಗಿದೆ.
“ಆಕೆ ದೇಹದಾದ್ಯಂತ ಚಿನ್ನವನ್ನು ಹೊಂದಿದ್ದಳು, ರಂಧ್ರಗಳನ್ನು ಹೊಂದಿರುವಲ್ಲೆಲ್ಲಾ ಅದನ್ನು ಬಚ್ಚಿಟ್ಟಿದ್ದಳು” ಎಂದು ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.