ಸಂಗ್ರಹ ಚಿತ್ರ 
ರಾಜ್ಯ

ಆಸ್ತಿ ತೆರಿಗೆ: ಸರ್ಕಾರಿ ಕಟ್ಟಡಗಳಿಗೂ OTS ಯೋಜನೆ ಜಾರಿಗೊಳಿಸಿದ BBMP

ಈ ಹಿಂದೆ, OTS ಯೋಜನೆ ಎಲ್ಲರಿಗೂ ಮುಕ್ತವಾಗಿತ್ತು, ಆದರೆ, ವಿಧಾನಸೌಧ, ವಿಕಾಸಸೌಧ ಮತ್ತು ಇತರ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಟ್ಟಡಗಳು ಯೋಜನೆ ಬಳಸಿಕೊಳ್ಳುವಲ್ಲಿ ವಿಫಲವಾಗಿತ್ತು.

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಟ್ಟಡಗಳು ಆಸ್ತಿ ತೆರಿಗೆ ಬಾಕಿಗಳನ್ನು ಪಾವತಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಒನ್-ಟೈಮ್ ಸೆಟ್ಲ್‌ಮೆಂಟ್ (OTS) ಯೋಜನೆಯನ್ನು ಘೋಷಿಸಿದೆ.

ಈ ಹಿಂದೆ, OTS ಯೋಜನೆ ಎಲ್ಲರಿಗೂ ಮುಕ್ತವಾಗಿತ್ತು, ಆದರೆ, ವಿಧಾನಸೌಧ, ವಿಕಾಸಸೌಧ ಮತ್ತು ಇತರ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಟ್ಟಡಗಳು ಯೋಜನೆ ಬಳಸಿಕೊಳ್ಳುವಲ್ಲಿ ವಿಫಲವಾಗಿತ್ತು. ಇದರಿಂದ ಕೋಟಿಗಟ್ಟಲೆ ಆಸ್ತಿ ತೆರಿಗೆ ಮತ್ತು ಸೇವಾ ಶುಲ್ಕಗಳನ್ನು ಬಾಕಿ ಉಳಿದಿವೆ.

ಹೀಗಾಗಿ ಸಮಸ್ಯೆ ಪರಿಹರಿಸಲು ಪಾಲಿಕೆ ಸರ್ಕಾರಿ ಕಟ್ಟಡಗಳಿಗೆ ಒಟಿಎಸ್ ಯೋಜನೆಯನ್ನು ಜಾರಿಗಾಳಿಸಿದೆ. ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಗೆ OTS ಅನ್ನು ನೀಡಲಾಗಿದ್ದು, ಯೋಜನೆ ದು ಮಾರ್ಚ್ 31 ರವರೆಗೆ ಅಥವಾ ಮುಂದಿನ ಆದೇಶದವರೆಗೆ ಲಭ್ಯವಿರಲಿದೆ ಎಂದು ತಿಳಿಸಲಾಗಿದೆ.

ಆಸ್ತಿ ತೆರಿಗೆ ಬಾಕಿ ಹಿನ್ನೆಲೆಯಲ್ಲಿ ಈ ಹಿಂದೆ ರಾಜ್ಯ ಪ್ರಮುಖ ಶಕ್ತಿ ಕೇಂದ್ರಗಳಾದ ವಿಧಾನಸೌಧ, ವಿಕಾಸಸೌಧ ಮತ್ತು ರಾಜಭವನ ಸೇರಿದಂತೆ 250 ಕ್ಕೂ ಹೆಚ್ಚು ಸರ್ಕಾರಿ ಕಟ್ಟಡಗಳಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿತ್ತು.

ಆಸ್ತಿ ತೆರಿಗೆ ಬಾಕಿಗಳನ್ನು ಪಾವತಿಸುವಂತೆ ಸರ್ಕಾರಿ ಕಚೇರಿಗಳಿಗೆ ಪದೇ ಪದೇ ಜ್ಞಾಪನೆ ಪತ್ರಗಳನ್ನು ಕಳುಹಿಸಲಾಗಿದೆ. ಆದರೆ, ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಪಾಲಿಕೆಯು ಎಂಟು ವಲಯಗಳಲ್ಲಿ ಹೆಚ್ಚಿನ ಆಸ್ತಿ ತೆರಿಗೆ ಬಾಕಿದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಬಿಬಿಎಂಪಿ ತಿಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT