ಸಂಗ್ರಹ ಚಿತ್ರ 
ರಾಜ್ಯ

ಬೇಸಿಗೆ ಬಂತು: ಹೀಟ್ ಸ್ಟ್ರೋಕ್ ಬಗ್ಗೆ ಇರಲಿ ಎಚ್ಚರ, ಈ ಸಲಹೆಗಳ ಪಾಲಿಸಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾಪಮಾನವು ಈಗಾಗಲೇ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ತಾಪಮಾನ ಹೆಚ್ಚಳಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ಸ್ಟ್ರೋಕ್ ಬಗ್ಗೆ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಬೆಂಗಳೂರು: ಬೇಸಿಗೆ ಶುರುವಾಗಿದ್ದು, ನಗರದಲ್ಲಿ ತಾಪಮಾನದಲ್ಲಿ ಏರಿಕೆ ಕಂಡು ಬಂದಿದೆ. ಬಿರು ಬಿಸಿಲಿಗೆ ಜನ ಬಸವಳಿದು ಹೋಗಿದ್ದಾರೆ. ಬಿಸಿಲಿನ ಝಳ ಶಿಶುಗಳು, ವಯಸ್ಸಾದವರು, ಮಕ್ಕಳು, ಗರ್ಭೀಣಿಯರಿಗೆ, ಬೀದಿಬದಿಯಲ್ಲಿ ವ್ಯಾಪಾರ ಮಾಡುವವರಿಗೆ, ಬಿಸಿಲಲ್ಲಿ ಕೂಲಿ ಕೆಲಸ ಮಾಡುವ ಬಡ ಮತ್ತು ಸಾಮಾನ್ಯ ವರ್ಗದವರಿಗೆ, ವಿಶೇಷ ಚೇತನ ವ್ಯಕ್ತಿಗಳಿಗೆ, ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಸಾಕಷ್ಟು ಕಾಡುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾಪಮಾನವು ಈಗಾಗಲೇ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ತಾಪಮಾನ ಹೆಚ್ಚಳಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ಸ್ಟ್ರೋಕ್ ಬಗ್ಗೆ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ತಕ್ಷಣದ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು, ಅಸ್ತಿತ್ವದಲ್ಲಿರುವ ಕೆಲವು ಸೌಲಭ್ಯಗಳನ್ನು ಚಿಕಿತ್ಸಾ ಕೊಠಡಿಗಳಾಗಿ ಪರಿವರ್ತಿಸಲು ಮುಂದಾಗಿದೆ. ಈ ಕೊಠಡಿಗಳಲ್ಲಿ ಅಗತ್ಯ ಔಷಧಗಳು, ಫ್ಯಾನ್‌ಗಳನ್ನು ಅಳವಡಿಸಲಾಗುತ್ತಿದೆ.

ಪರಿಸ್ಥಿತಿ ಎದುರಿಸಲು ಸಿದ್ಧರಾಗಿರುವಂತೆ ತಜ್ಞ ವೈದ್ಯರಿಗೆ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆಗಳನ್ನು ನೀಡಿದೆ. ಶೀಘ್ರದಲ್ಲೇ ತಾಲ್ಲೂಕು ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆಗಳಿವೆ ಎಂದು ಆರೋಗ್ಯಾಧಿಕಾರಿಯೊಬ್ಬರು ಹೇಳಿದ್ದಾರೆ.

ರಾಜ್ಯದಲ್ಲಿ ಈವರೆಗೂ ಹೀಟ್ ಸ್ಟ್ರೋಕ್ ಪ್ರಕರಣಗಳು ವರದಿಯಾಗಿಲ್ಲ. ತಾಪಮಾನ 40 ಡಿಗ್ರಿ ತಲುಪಿದ ಸಂದರ್ಭದಲ್ಲಿ ಪ್ರಕರಣಗಳು ವರದಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ರಾಜ್ಯದವಲ್ಲಿ ಕಳೆದ ವರ್ಷ 6000ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು.

ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿತ್ತು. ಮಧ್ಯಾಹ್ನ 12-3 ಗಂಟೆ ವರೆಗೆ ಹೊರಗಿನ ಚಟುವಟಿಕೆಗಳನ್ನು ನಿಯಂತ್ರಿಸುವಂತೆ ಸಲಹೆ ನೀಡಿತ್ತು.

  • ಬಾಯಾರಿಕೆಯು ನಿರ್ಜಲೀಕರಣದ ಲಕ್ಷಣವಾಗಿದೆ. ಪ್ರಯಾಣ ಸಮಯದಲ್ಲೂ ಕುಡಿಯುವ ನೀರು ಜೊತೆಗೆ ಇರಬೇಕು. ಮೌಖಿಕ ಮನರ್ಜಲೀಕರಣ ದ್ರಾವಣ (ORS), ಮನೆಯಲ್ಲಿಯೇ ಸಿದ್ಧಪಡಿಸಿದ ನಿಂಬೆ ಹಣ್ಣಿನ ಜ್ಯೂಸ್‌, ಮಜ್ಜಿಗೆ, ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸಬಹುದಾಗಿದೆ.

  • ಋತುಮಾನದಲ್ಲಿ ಲಭ್ಯವಿರುವ, ಹೆಚ್ಚು ನೀರಿನಂಶ ಹೊಂದಿರುವ ಹಣ್ಣು, ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟ್ಯೂಸ್, ಎಳನೀರು ಹೆಚ್ಚಾಗಿ ಸೇವಿಸಿ. ಹೆಚ್ಚು ಬಿಸಿಲು ಬೀಳದಂತೆ ಶರೀರವನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು. ಹಾಗಾಗಿ ತಿಳಿ ಬಣ್ಣದ, ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.

  • ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್‌, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ. ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ, ಶೂಗಳನ್ನು ಧರಿಸಿ,

  • ಹೊರಾಂಗಣ ಚಟುವಟಿಕೆಗಳನ್ನು ಆದಷ್ಟು ಬೆಳಿಗ್ಗೆ 11 ಗಂಟೆಯ ಮೊದಲು ಅಥವಾ ಸಂಜೆ 4 ಗಂಟೆಯ ನಂತರಕ್ಕೆ ನಿಗದಿಪಡಿಸಿ. ಸಭೆ, ಸಮಾರಂಭಗಳಿದ್ದಲ್ಲಿ ಬಿಸಿಲಿನಿಂದ ರಕ್ಷಣೆಗೆ ಶಾಮಿಯಾನ, ಪೆಂಡಾಲ್ ವ್ಯವಸ್ಥೆ ಮಾಡಬೇಕು. ಉತ್ತಮ ಗಾಳಿಯ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಬೇಕು. ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು.

  • ಬಿಸಿಲಿಗೆ ನವಜಾತ ಶಿಶುಗಳು, ಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವವರು, ಹೃದ್ರೋಗ, ಅಧಿಕ ರಕ್ತದೊತ್ತಡ ಸೇರಿದಂತೆ ವಿವಿಧ ಅನಾರೋಗ್ಯ ಸಮಸ್ಯೆ ಇರುವವರು ಹೆಚ್ಚು ಆಪಾಯ ಎದುರಿಸುವ ಸಾಧ್ಯತೆಗಳಿವೆ.

  • ಅಪಾಯದಿಂದ ದೂರ ಉಳಿಯಲು ಮಧ್ಯಾಹ್ನದ ಸಮಯದಲ್ಲಿ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ. ಮದ್ಯಪಾನ, ಚಹಾ, ಕಾಫಿ, ಕಾರ್ಬೊನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶ ಹೊಂದಿದ ಪಾನೀಯಗಳಿಂದ ದೂರವಿರಬೇಕು. ಹೆಚ್ಚು ಪ್ರೋಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸದಿರಿ.

  • ಮಕ್ಕಳು ಮತ್ತು ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳ ಒಳಗೆ ಬಿಡಬಾರದು. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನ ತಾಪಮಾನವು ಅಪಾಯಕಾರಿ ಆಗಬಹುದು.

ಹೀಟ್ ಸ್ಟ್ರೋಕ್ ಆದರೆ ಏನು ಮಾಡಬೇಕು...?

  • ವೈದ್ಯಕೀಯ ಸಹಾಯಕ್ಕಾಗಿ ತಕ್ಷಣ 108/102 ಗೆ ಕರೆ ಮಾಡಿ.

  • ವ್ಯಕ್ತಿಯನ್ನು ತಂಪಾದ ಸ್ಥಳಕ್ಕೆ ಸ್ಥಳಾಂತರಿಸಿ. ಅವರ ಚರ್ಮಕ್ಕೆ ತಣ್ಣೀರು ಹಚ್ಚಿ, ಫ್ಯಾನ್ ಹಾಕಿ. ಲಕ್ಷಣಗಳು ಉಲ್ಬಣಗೊಳ್ಳುವವರೆಗೆ ಕಾಯದಿರಿ. ವೈದ್ಯಕೀಯ ನೆರವು ಪಡೆಯಿರಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT