ರನ್ಯಾ ರಾವ್ ಮತ್ತು ಆಕೆಯ ತಂದೆ ಡಿಜಿಪಿ ಕೆ ರಾಮಚಂದ್ರ ರಾವ್  
ರಾಜ್ಯ

ನಟಿ ರನ್ಯಾ ರಾವ್ ಮತ್ತು ಅವರ ತಂದೆ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರಕ್ಕೆ ತಡೆನೀಡಿ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾರನ್ನು ಬಂಧಿಸಿ ನ್ಯಾಯಾಂಗ ಬಂಧನದಲ್ಲಿ ಇರಿಸಿ ತನಿಖೆ ಇತ್ಯಾದಿ ಕಾನೂನು ಪ್ರಕ್ರಿಯೆಗಳು ನಡೆಯುತ್ತಿರುವ ಮಧ್ಯೆ ಹೈಕೋರ್ಟ್ ಈ ಆದೇಶ ನೀಡಿದೆ.

ಬೆಂಗಳೂರು: ನಟಿ ರನ್ಯಾ ರಾವ್ ಮತ್ತು ಅವರ ತಂದೆ, ಕರ್ನಾಟಕ ಸರ್ಕಾರದ ಡಿಜಿಪಿ ದರ್ಜೆಯ ಅಧಿಕಾರಿ ಕೆ. ರಾಮಚಂದ್ರ ರಾವ್ ಅವರ ವಿರುದ್ಧ ಮಾಧ್ಯಮಗಳು ಸುಳ್ಳು ಮತ್ತು ಮಾನಹಾನಿಕರ ವಿಷಯಗಳನ್ನು ಪ್ರಸಾರ ಮಾಡುವುದನ್ನು ಅಥವಾ ಪ್ರಕಟಿಸುವುದನ್ನು ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ.

ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾರನ್ನು ಬಂಧಿಸಿ ನ್ಯಾಯಾಂಗ ಬಂಧನದಲ್ಲಿ ಇರಿಸಿ ತನಿಖೆ ಇತ್ಯಾದಿ ಕಾನೂನು ಪ್ರಕ್ರಿಯೆಗಳು ನಡೆಯುತ್ತಿರುವ ಮಧ್ಯೆ ಹೈಕೋರ್ಟ್ ಈ ಆದೇಶ ನೀಡಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA)ದಲ್ಲಿ ರನ್ಯಾ ರಾವ್ ಬಂಧನ ನಂತರ ಹಲವು ಬೆಳವಣಿಗೆಗಳು ನಡೆದಿದ್ದು, ಅಧಿಕಾರಿಗಳು ರನ್ಯಾ ರಾವ್ ಅವರಿಂದ 12.56 ಕೋಟಿ ರೂಪಾಯಿ ಮೌಲ್ಯದ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇದರ ನಂತರ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ನಡೆದ ಶೋಧದಲ್ಲಿ 2.06 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳು ಮತ್ತು 2.67 ಕೋಟಿ ರೂ. ಮೌಲ್ಯದ ಭಾರತೀಯ ಕರೆನ್ಸಿ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಮಾರ್ಚ್ 12 ರಂದು, ರನ್ಯಾ ರಾವ್ ಅವರ ತಾಯಿ ಎಚ್ ಪಿ ರೋಹಿಣಿ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು, ಈ ವೇಳೆ ಜೂನ್ 2 ರವರೆಗೆ ಮಾಧ್ಯಮಗಳು ನಟಿಯ ವಿರುದ್ಧ ಯಾವುದೇ ಹೇಳಿಕೆ ಪ್ರಕಟಿಸುವುದು ಅಥವಾ ಪ್ರಸಾರ ಮಾಡದಂತೆ ನಿರ್ಬಂಧಿಸಿ ಏಕಪಕ್ಷೀಯ ಆದೇಶವನ್ನು ಹೊರಡಿಸಿತು. ನಂತರ ಅವರ ತಂದೆ ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಹೈಕೋರ್ಟ್ ಇದೇ ರೀತಿಯ ನಿರ್ದೇಶನ ನೀಡಿದೆ.

ನ್ಯಾಯಾಲಯ ಆದೇಶ ಹೊರತಾಗಿಯೂ ಕೆಲವು ಮಾಧ್ಯಮಗಳು ಸಂವೇದನಾಶೀಲ ಮತ್ತು ಹಾನಿಕಾರಕ ವಿಷಯವನ್ನು ಪ್ರಕಟಿಸುವುದನ್ನು ಮುಂದುವರೆಸಿವೆ ಎಂದು ರನ್ಯಾ ತಾಯಿ ನ್ಯಾಯಾಲಯ ಮೊರೆ ಹೋಗಿದ್ದರು. ಹೈಕೋರ್ಟ್‌ನಲ್ಲಿ ಅವರ ಅರ್ಜಿಯಲ್ಲಿ ತನಿಖೆಯ ಬಗ್ಗೆ ವಸ್ತುನಿಷ್ಠವಾಗಿ ವರದಿ ಮಾಡುವ ಬದಲು, ಮಾಧ್ಯಮಗಳು ಆರೋಪಿಯ ಚಾರಿತ್ರ್ಯಹರಣದಲ್ಲಿ ತೊಡಗಿವೆ ಎಂದು ವಾದಿಸಿದ್ದರು.

ವಿಚಾರಣೆಯ ಸಮಯದಲ್ಲಿ, ಚಿತ್ರನಟ ದರ್ಶನ್ ಆರೋಪಿಯಾಗಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ತನ್ನ ಹಿಂದಿನ ಹಸ್ತಕ್ಷೇಪವನ್ನು ನೆನಪಿಸಿಕೊಂಡಿತು, ದರ್ಶನ್ ಪ್ರಕರಣದಲ್ಲಿ ಕೂಡ ಮಾಧ್ಯಮ ಸಂಸ್ಥೆಗಳು ತಮ್ಮ ವರದಿಯಲ್ಲಿ ಸಂಯಮವನ್ನು ವಹಿಸುವಂತೆ ಸೂಚಿಸಿತ್ತು.

ಮನವಿಗೆ ಪ್ರತಿಕ್ರಿಯೆಯಾಗಿ, ಅರ್ಜಿಯಲ್ಲಿ ಪ್ರತಿವಾದಿಗಳಾಗಿ ಹೆಸರಿಸಲಾದ ಎಲ್ಲಾ ಮಾಧ್ಯಮ ಸಂಸ್ಥೆಗಳಿಗೆ ಹೈಕೋರ್ಟ್ ತುರ್ತು ನೋಟಿಸ್ ನೀಡಿದೆ. ಹೆಚ್ಚುವರಿಯಾಗಿ, ರನ್ಯಾ ರಾವ್‌ಗೆ ಮಧ್ಯಂತರ ಪರಿಹಾರವನ್ನು ನೀಡಿ ಮಾನನಷ್ಟ ವರದಿಯ ಮೇಲಿನ ನಿರ್ಬಂಧಗಳನ್ನು ಪರಿಣಾಮಕಾರಿಯಾಗಿ ಬಲಪಡಿಸಿತು.

ಕೇಂದ್ರ ತನಿಖಾ ಸಂಸ್ಥೆಗಳು ಉನ್ನತ ಮಟ್ಟದ ಪ್ರಕರಣಗಳನ್ನು ನಿರ್ವಹಿಸುವಾಗ, ವಿಶೇಷವಾಗಿ ಮುದ್ರಣ, ಎಲೆಕ್ಟ್ರಾನಿಕ್, ಆಡಿಯೋ ಮತ್ತು ದೃಶ್ಯ ವೇದಿಕೆಗಳಲ್ಲಿ ಮಾಧ್ಯಮ ವರದಿಗೆ ಸಂಬಂಧಿಸಿದಂತೆ ಅನುಸರಿಸಬೇಕಾದ ಮುನ್ನೆಚ್ಚರಿಕೆಗಳು ಮತ್ತು ಸುರಕ್ಷತಾ ಕ್ರಮಗಳನ್ನು ವಿವರಿಸುವ ಮಾರ್ಗಸೂಚಿಗಳನ್ನು ಹೊರಡಿಸಬೇಕು ಎಂದು ನ್ಯಾಯಾಲಯ ಹೇಳಿ ಮುಂದಿನ ವಿಚಾರಣೆಯನ್ನು ಏಪ್ರಿಲ್ 8ಕ್ಕೆ ನಿಗದಿಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT