ರಾಜ್ಯ

ಇಂದು ಕರ್ನಾಟಕ ಬಂದ್: ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ

ಮಹಾರಾಷ್ಟ್ರೀಗರ ಕನ್ನಡ ವಿರೋಧಿ ನೀತಿ ಹಾಗೂ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್​ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

ಬೆಂಗಳೂರು: ಮಹಾರಾಷ್ಟ್ರೀಗರ ಕನ್ನಡ ವಿರೋಧಿ ನೀತಿ ಹಾಗೂ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್​ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಅದರಂತೆ ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಬಂದ್ ನಡೆಯಲಿದೆ. ಬಂದ್ ಸಮಯದಲ್ಲಿ ಏನಿರುತ್ತಾ ಹಾಗೂ ಏನಿರಲ್ಲ ಎಂಬ ಮಾಹಿತಿ ಇಲ್ಲಿದೆ.

ಏನಿರುತ್ತೆ?

* ದೈನಂದಿನ ಅವಶ್ಯಕ ವಸ್ತುಗಳಾದ ಹಾಲು, ದಿನಪತ್ರಿಕೆ, ಮೆಡಿಕಲ್, ವೈದ್ಯಕೀಯ ಸೇವೆ ನಾಳೆಯೂ ಇರಲಿದೆ

* ಆ್ಯಂಬುಲೆನ್ಸ್ , ಹೋಲ್ ಸೆಲ್ ಬಟ್ಟೆ ಅಂಗಡಿಗಳು ಇರಲಿವೆ

* ತರಕಾರಿ,ಹೂ, ಹಣ್ಣುಗಳು, ಸೂಪರ್ ಮಾರ್ಕೆಟ್, ಹೋಟೆಲ್ ಗಳ ಎಂದಿನಂತೆ ಓಪನ್ ಇರಲಿದೆ

* BMTC-KSRTC,ಮೆಟ್ರೋ ಸಂಚಾರ, ರೈಲು ಓಡಾಡಲಿವೆ

* ಖಾಸಗಿ ಬಸ್, ಶಾಲಾ ವಾಹನ ಓಡಾಟ ಇರಲಿದೆ.

* ಬಾರ್ ಗಳು ತೆರೆದಿರಲಿದ್ದು, ಏರ್ ಪೋರ್ಟ್ ಟ್ಯಾಕ್ಸಿ ಸೇವೆ ಇರಲಿದೆ

* ಶೇಕಡ 65ರಷ್ಟು ಆಟೋಗಳ ಸೇವೆ ಇರಲಿದೆ

ಏನಿರಲ್ಲ?

ಥಿಯೇಟರ್ ಗಳು ಮಧ್ಯಾಹ್ನ ತನಕ ಬಂದ್

ಶೇಕಡ 35ರಷ್ಟು ಆಟೋ ಸೇವೆಯಲ್ಲಿ ತುಸು ವ್ಯತ್ಯಯ

ಗೂಡ್ಸ್ ವಾಹನಗಳ ಸೇವೆಯಲ್ಲಿ ವ್ಯತ್ಯಯ

ಓಲಾ-ಊಬರ್ ಸೇವೆಯಲ್ಲಿ ವ್ಯತ್ಯಯ

ನೈತಿಕ ಬೆಂಬಲ

* BMTC-KSRTC ನೌಕರರ ಸಂಘ, ಲಾರಿ ಚಾಲಕರ ಸಂಘ, ಮದ್ಯ ಮಾರಾಟಗಾರರ ಸಂಘ, ಕೆಲ ಮಾಲ್ ಅಸೋಸಿಯೇಷನ್, ಗಾರ್ಮೆಂಟ್ಸ್ ಅಸೋಸಿಯೇಷನ್, ಹೋಲ್ ಸೆಲ್ ಬಟ್ಟೆ ವ್ಯಾಪಾರಸ್ಥರು, ಹೋಟೆಲ್ ಅಸೋಸಿಯೇಷನ್, ಬೆಂಗಳೂರು ಸಂಚಾರಿ ಆಟೋ ಸೇನೆ, APMC ಮಾರುಕಟ್ಟೆಗಳ ಒಕ್ಕೂಟ, ಖಾಸಗಿ ಸಾರಿಗೆ ಒಕ್ಕೂಟ, ಕರ್ನಾಟಕ ರಕ್ಷಣಾ ವೇದಿಕೆ ಅಭಿಮಾನಿ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಧ್ವನಿ, ಬೀದಿ ಬದಿ ವ್ಯಾಪಾರಿಗಳ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘಟನೆ, ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್, ಖಾಸಗಿ ಶಾಲೆಗಳ ಒಕ್ಕೂಟ ಕೃಪಾ, ಖಾಸಗಿ ಶಾಲೆಗಳ ಒಕ್ಕೂಟ ರುಪ್ಸ ಪೋಷಕರ ಸಮನ್ವಯ ಸಮಿತಿ, ಪೀಸ್ ಆಟೋ ಸಂಘಟನೆ ಮತ್ತು ಕರುನಾಡು ಕಾರ್ಮಿಕ ಸೇನೆ ಬೆಂಬಲ ನೀಡಿವೆ.

ಬಂದ್ ಗೆ ಸಂಪೂರ್ಣ ಬೆಂಬಲ

* ಓಲಾ- ಉಬರ್ ಚಾಲಕರ ಸಂಘ, ಶಿವರಾಮೇಗೌಡ ಬಣ, ಕರವೇ ಗಜಕೇಸರಿ ಸೇನೆ, ಡಾ.ರಾಜ್ ಕುಮಾರ್ ಅಭಿಮಾನಿ ಸಂಘ, ವೀರ ಕನ್ನಡಿಗರ ಸೇನೆ, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು, ರೂಪೇಶ್ ರಾಜಣ್ಣ ಬಣ, ಬೆಂಗಳೂರು ಆಟೋ ಸೇನೆ, ಜಯಭಾರತ್ ಚಾಲಕರ ಸಂಘ, ಕರ್ನಾಟಕ ಜನಪರ ವೇದಿಕೆ, ಆದರ್ಶ ಆಟೋ ಯೂನಿಯನ್, ಗೂಡ್ಸ್ ಚಾಲಕರ ಸಂಘ

ಯಾರೂ ಬೆಂಬಲ ನೀಡಿಲ್ಲ

* ಪ್ರವೀಣ್ ಶೆಟ್ಟಿ ಬಣ, ಕರವೇ ನಾರಾಯಣಗೌಡರ ಬಣ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT