ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: ಕಾಲೇಜು ಕಟ್ಟಡದಿಂದ ಹಾರಿ 21 ವರ್ಷದ ವಿದ್ಯಾರ್ಥಿನಿ ಸಾವು

ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆರನೇ ಸೆಮಿಸ್ಟರ್ ಬಿಸಿಎ (ವಿಮಾನಯಾನ) ವಿದ್ಯಾರ್ಥಿನಿಯಾಗಿದ್ದಳು.

ಸಾಂದರ್ಭಿಕ ಚಿತ್ರ
Shilpa D
Updated On : 22 Mar 2025, 12:44 pm

ಬೆಂಗಳೂರು: ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಮಧ್ಯಾಹ್ನ 21 ವರ್ಷದ ಬಿಸಿಎ ವಿದ್ಯಾರ್ಥಿನಿ ಖಾಸಗಿ ಎಂಜಿನಿಯರಿಂಗ್ ಕಾಲೇಜು ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೃತಳನ್ನು ಕೇರಳದ ಕೋಝಿಕ್ಕೋಡ್ ಮೂಲದ ಲಕ್ಷ್ಮಿ ಮಿತ್ರ ಎಂದು ಗುರುತಿಸಲಾಗಿದೆ. ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆರನೇ ಸೆಮಿಸ್ಟರ್ ಬಿಸಿಎ (ವಿಮಾನಯಾನ) ವಿದ್ಯಾರ್ಥಿನಿಯಾಗಿದ್ದಳು. ಮಧ್ಯಾಹ್ನ 1.30 ರ ಸುಮಾರಿಗೆ ಲಕ್ಷ್ಮಿ ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ ಈ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.

ಕಾಲೇಜು ಸಿಬ್ಬಂದಿ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದರು, ಆದರೆ ವೈದ್ಯರು ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಿದರು. ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ, ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

Advertisement

Advertisement

ಈ ಸಂಬಂಧ ಪೊಲೀಸರು ಇನ್ನೂ ದೂರು ದಾಖಲಿಸಿಲ್ಲ, ಸಂತ್ರಸ್ತೆಯ ಪೋಷಕರ ಆಗಮನಕ್ಕಾಗಿ ಪೊಲೀಸರು ಕಾಯುತ್ತಿದ್ದಾರೆ.

Also Read

ಚಾಮರಾಜನಗರ: ಮದುವೆಗೆ ಹುಡುಗಿ ಸಿಗದಕ್ಕೆ ಹೈ-ಟೆನ್ಷನ್ ಕಂಬ ಹತ್ತಿ ತಾಯಿ ಕಣ್ಣೇದುರೇ ಮಸಣಶೆಟ್ಟಿ ಆತ್ಮಹತ್ಯೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement