ಉರುಳಿಬಿದ್ದ ತೇರು online desk
ರಾಜ್ಯ

ಆನೇಕಲ್: ಉರುಳಿಬಿದ್ದ ಮದ್ದೂರಮ್ಮ ಜಾತ್ರೆಯ ತೇರು; ಓರ್ವ ಸಾವು, ಹಲವರಿಗೆ ಗಾಯ!

ಎರಡು ಕುರ್ಜುಗಳು ಧರೆಗೆ ಉರುಳಿಬಿದ್ದಿದ್ದು, ಟ್ರ್ಯಾಕ್ಟರ್ ಹಾಗೂ ನೂರಾರು ಎತ್ತುಗಳ‌‌ ಮೂಲಕ ಈ ತೇರನ್ನು ಎಳೆಯಲಾಗುತ್ತಿತ್ತು.

ಬೆಂಗಳೂರು: ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ಮದ್ದೂರಮ್ಮ ಜಾತ್ರೆಯ ತೇರು ಉರುಳಿಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಎರಡು ಕುರ್ಜುಗಳು ಧರೆಗೆ ಉರುಳಿಬಿದ್ದಿದ್ದು, ಟ್ರ್ಯಾಕ್ಟರ್ ಹಾಗೂ ನೂರಾರು ಎತ್ತುಗಳ‌‌ ಮೂಲಕ ಈ ತೇರನ್ನು ಎಳೆಯಲಾಗುತ್ತಿತ್ತು.

150 ಕ್ಕೂ ಹೆಚ್ಚು ಅಡಿ ಎತ್ತರದ ಕುರ್ಜುಗಳು ಇದಾಗಿದ್ದು, . ತೇರು ಎಳೆದು ತರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮದ್ದೂರಮ್ಮ ಜಾತ್ರೆಗೆ ನೂರಾರು ವರ್ಷಗಳ ಇತಿಹಾಸವಿದೆ. ಅತೀ ಎತ್ತರ ತೇರು ಕಟ್ಟಿ ಎಳೆದು ತರುವ ಜಾತ್ರೆ ನೋಡಲು ಲಕ್ಷಾಂತರ ಜನ ಆಗಮಿಸುತ್ತಾರೆ. ಗಾಳಿ ಸಹಿತ ಮಳೆಯ ಕಾರಣದಿಂದಾಗಿ ತೇರು ಧರೆಗೆ ಉರುಳಿದೆ.

ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುರ್ಜು ನಿಧಾನವಾಗಿ ಉರುಳಿದ್ದರಿಂದ ಅಪಾಯವನ್ನರಿತ ಭಕ್ತರು ಅವಘಡದಿಂದ ತಪ್ಪಿಸಿಕೊಂಡಿದ್ದಾರೆ. ಈ ಹಿಂದೆ ರಾಯಸಂದ್ರದ ಕುರ್ಜು ಉರುಳಿ ಬಿದ್ದಿತ್ತು, ಕಳೆದ ವರ್ಷ ಮತ್ತೊಂದು ಕುರುಜು ಉರುಳಿದ್ದನ್ನು ನೆನಪಿಸಬಹುದಾದರೂ ಆಗಲೂ ಯಾರಿಗೂ ಏನೂ ಆಗದಂತೆ ದೇವಿ ಕಾಪಾಡಿದ್ದಳು ಎನ್ನುವುದೇ ಎಲ್ಲರ ನಂಬಿಕೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT