ಲಕ್ಷ್ಮೀ ಹೆಬ್ಬಾಳ್ಕರ್ 
ರಾಜ್ಯ

ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಎರಡು ತಿಂಗಳ ಗೃಹಲಕ್ಷ್ಮಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ರೂ.2 ಸಾವಿರ ಹೆಚ್ಚಿಸಿದ್ದೆವು. ಅದಾದ ನಂತರ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ.

ಬೆಳಗಾವಿ: ಮಾರ್ಚ್‌ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ತಿಂಗಳ ಗೃಹಲಕ್ಷ್ಮಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ರೂ.2 ಸಾವಿರ ಹೆಚ್ಚಿಸಿದ್ದೆವು. ಅದಾದ ನಂತರ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್‌ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ರೂ.1,000, ಸಹಾಯಕಿಯರ ಗೌರವಧನವನ್ನು ರೂ.750 ಹೆಚ್ಚಿಸಿ ಘೋಷಿಸಿದ್ದೇವೆ. ಅದನ್ನು ಜಾರಿಗೆ ತರುತ್ತೇವೆಂದು ಹೇಳಿದರು.

ಹನಿಟ್ರ್ಯಾಪ್ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿರುವುದು ದುರಾದೃಷ್ಟಕರ ಸಂಗತಿ. ಈ ಬಗ್ಗೆ ರಾಜಣ್ಣ ಅವರು ತಮಗಾದ ಅನುಭವವನ್ನು ಸದನದಲ್ಲಿ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಈಗಾಗಲೇ ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಆ ವಿಷಯ ನೋಡಿಕೊಳ್ಳುತ್ತಾರೆ. ಆ ಬಗ್ಗೆ ಹೆಚ್ಚು ಮಾತನಾಡಲ್ಲ’ ಎಂದು ತಿಳಿಸಿದರು.

‘ಘರ್ಜಿಸುವ ಹುಲಿಗಳನ್ನೇ ಈಗ ಗುರಿ ಮಾಡಿ ಹೆದರಿಸಲಾಗುತ್ತಿದೆ’ ಎಂಬ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ‌ ಹೇಳಿಕೆಗೆ, ಈ ಬಗ್ಗೆ ಸತೀಶ ಅವರನ್ನೇ ಕೇಳಿ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್