ಸಭಾಪತಿ ಬಸವರಾಜ ಹೊರಟ್ಟಿ (ಸಂಗ್ರಹ ಚಿತ್ರ) online desk
ರಾಜ್ಯ

ರಾಜೀನಾಮೆ ಕೊಟ್ಟಿಲ್ಲ ಸಭಾಪತಿ Basavaraj Horatti? ಅವರೇ ಕೊಟ್ಟ ಸ್ಪಷ್ಟನೆ ಏನು?

ವಿಧಾನ ಪರಿಷತ್‌ ನ ಗೌರವ ಕಳೆದು ಹೋಗಿ ಬಹಳ ದಿನ ಆಗಿದೆ. ಇಂತಹ ಸಮಯದಲ್ಲಿ ಸಭಾಪತಿಯಾಗಿ ಮುಂದುವರೆಯುವದೋ ಬೇಡವೋ ಎಂಬ ಗೊಂದಲ ಉಂಟಾಗಿದ್ದು ನಿಜ.

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗತೊಡಗಿದ್ದರ ಬೆನ್ನಲ್ಲೇ ಬಸವರಾಜ್ ಹೊರಟ್ಟಿ ಸ್ವತಃ ಸ್ಪಷ್ಟನೆ ನೀಡಿದ್ದಾರೆ.

ತಮ್ಮ ರಾಜೀನಾಮೆ ವಿಷಯ ವೈರಲ್ ಆಗುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಹೊರಟ್ಟಿ, ಹನಿಟ್ರ್ಯಾಪ್ ನಂತಹ ಪ್ರಕರಣಗಳು ಸದನದಲ್ಲಿ ಕೇಳಿ ಬರುತ್ತಿವೆ. ಚಿಂತಕರ ಚಾವಡಿ ಎನಿಸಿಕೊಂಡಿರುವ ವಿಧಾನ ಪರಿಷತ್‌ನಲ್ಲಿ ಎಲ್ಲವೂ ಸರಿಯಿಲ್ಲ. ಕಾಲ ಕೆಟ್ಟಿದ್ದು, ರಾಜಕಾರಣ ಬಹಳ ಕಲುಷಿತ ಆಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ವಿಧಾನ ಪರಿಷತ್‌ ನ ಗೌರವ ಕಳೆದು ಹೋಗಿ ಬಹಳ ದಿನ ಆಗಿದೆ. ಇಂತಹ ಸಮಯದಲ್ಲಿ ಸಭಾಪತಿಯಾಗಿ ಮುಂದುವರೆಯುವದೋ ಬೇಡವೋ ಎಂಬ ಗೊಂದಲ ಉಂಟಾಗಿದ್ದು ನಿಜ. ಸದನದ ಸದಸ್ಯರ ವರ್ತನೆಯಿಂದ ಬೇಸತ್ತು ಹೋಗಿದ್ದೇನೆ ಎಂದು ಹೊರಟ್ಟಿ ಹೇಳಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ ನಾನು ರಾಜೀನಾಮೆ ನೀಡಬೇಕು ಅಂತ ತೀರ್ಮಾನ ಮಾಡಿದ್ದು ನಿಜ. ನನ್ನ ಕಚೇರಿಯಿಂದ ನಾನು ಸಹಿ ಮಾಡದ ಪತ್ರದ ಫೋಟೋ ವೈರಲ್ ಆಗತೊಡಗಿದೆ. ರಾಜೀನಾಮೆಗೆ ಸಹಿ ಮಾಡಿರುವ ಪತ್ರ ನನ್ನ ಬಳಿಯೇ ಇದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಇಲ್ಲಿಯವರೆಗೂ ತಾವು ರಾಜೀನಾಮೆ ಸಲ್ಲಿಸಿಲ್ಲ ಎಂಬುದನ್ನು ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ.

ಸದನದಲ್ಲಿ ಮೊನ್ನೆ ನಡೆದ ಘಟನೆ ಮನಸ್ಸಿಗೆ ಬಹಳ ನೋವಾಗಿದೆ. ಕುರ್ಚಿ ಆಸೆಗೆ ಕೂರೋದು ಸರಿಯಲ್ಲ ಅಂತ ನನಗೆ ಅನ್ನಿಸಿದೆ. ನನ್ನ ಆಪ್ತರು ನನಗೆ ರಾಜೀನಾಮೆ ನೀಡಬೇಡಿ ಅಂತ ಒತ್ತಾಯ ಮಾಡ್ತಿದ್ದಾರೆ. ಹೀಗಾಗಿ ನಾನು ಸ್ವಲ್ಪ ವಿಚಾರ ಮಾಡ್ತೇನೆ. ಇನ್ನು ಮೂರ್ನಾಲ್ಕು ದಿನದಲ್ಲಿ ರಾಜೀನಾಮೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಬಸವರಾಜ ಹೊರಟ್ಟಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT