ಗೃಹ ಸಚಿವ ಜಿ ಪರಮೇಶ್ವರ್ 
ರಾಜ್ಯ

ಹನಿಟ್ರ್ಯಾಪ್ ಪ್ರಕರಣ: ರಾಜಣ್ಣ ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ; ಸಚಿವ ಪರಮೇಶ್ವರ್‌ ಭರವಸೆ

ರಾಜಣ್ಣ ದೂರು ಕೊಡೋದಾಗಿ ಹೇಳಿದ್ದಾರೆ, ಇನ್ನೂ ಕೊಟ್ಟಿಲ್ಲ. ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. ಯಾವ ತನಿಖೆಗೆ ಕೊಡಬೇಕು ಎಂಬುದರ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು.

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್‌ ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ಅವರು ಭಾನುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಣ್ಣ ದೂರು ಕೊಡೋದಾಗಿ ಹೇಳಿದ್ದಾರೆ, ಇನ್ನೂ ಕೊಟ್ಟಿಲ್ಲ. ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. ಯಾವ ತನಿಖೆಗೆ ಕೊಡಬೇಕು ಎಂಬುದರ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಈಗಾಗಲೇ ಯಾವ ತನಿಖೆಗೆ ಕೊಡಬೇಕು ಎಂದು ಪ್ರಾಥಮಿಕವಾಗಿ ಚಿಂತನೆಗಳು ನಡೆದಿವೆ, ಸಿಎಂ ಜೊತೆಗೆ ಚರ್ಚೆ ಮಾಡಿದ ಬಳಿಕ ನಿರ್ಧಾರ ಪ್ರಕಟಿಸುತ್ತೇವೆಂದು ತಿಳಿಸಿದರು.

ಹನಿ ಟ್ರ್ಯಾಪ್‌ ಪ್ರಕರಣದಲ್ಲಿ ದೊಡ್ಡ ಆರೋಪ ಕೇಳಿ ಬಂದಿದೆ. ಹೀಗಾಗಿ ಗಂಭೀರವಾಗಿ ತಗೊಳ್ಳಲೇಬೇಕಿದೆ. ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ರಾಜಣ್ಣ ಅವರು ಇಷ್ಟೊತ್ತಿಗೆ ದೂರು ಕೊಟ್ಟಿದ್ದರೆ ಯಾವ ಸ್ವರೂಪದ ತನಿಖೆ ಅಂತ ಘೋಷಣೆ ಮಾಡುತ್ತಿದ್ದೆವು ಎಂದು ಹೇಳಿದ್ದಾರೆ.

ಸಿಬಿಐ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ ಎಂಬ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯಿಸಿ, ನಾವು ನಮ್ಮದೇ ರೀತಿಯಲ್ಲಿ ಪರಿಶೀಲಿಸಿ ನಿರ್ಧಾರ ಮಾಡುತ್ತೇವೆ. ಇಷ್ಟು ದೊಡ್ಡ ಘಟನೆ ನಡೆದಿದೆ, ವಿಧಾನಸೌಧದಲ್ಲಿ ಚರ್ಚೆ ಆಗಿದೆ. ನಡೆಯದಿರೋದೆಲ್ಲ ನಡೆದಿದೆ, ಅಂತಹದ್ದಲ್ಲಿ ಗಂಭೀರವಾಗಿ ತಗೊಳ್ಳಲಿಲ್ಲ ಎಂದರೆ ಆಗುವುದಿಲ್ಲ ಎಂದರು.

ಸದನದಲ್ಲಿ ಏಕಾಏಕಿ ರಾಜಣ್ಣ ಮಾತಾಡಿದ್ದಕ್ಕೆ ಹೈಕಮಾಂಡ್ ಬೇಸರವಾಗಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿ, ಇದು ಗೊತ್ತಿಲ್ಲ, ಇದರ ಬಗ್ಗೆ ಅಧ್ಯಕ್ಷರು ನೋಡ್ಕೋತಾರೆ ಎಂದು ಹೇಳಿದ್ದಾರೆ.

ರಾಜಣ್ಣ ಅವರ ಮೇಲೆ ದೂರು ಕೊಡದಂತೆ ಒತ್ತಡ ಇದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದರ ಬಗ್ಗೆ ನನ್ನ ಜೊತೆ ಯಾರೂ ಮಾತಾಡಿಲ್ಲ, ಹೈಕಮಾಂಡ್‌ನವರೂ ಮಾತಾಡಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

SCROLL FOR NEXT