ಪ್ರಮೋದ್ ಮಧ್ವರಾಜ್  
ರಾಜ್ಯ

ಮೀನು ಕದ್ದಿದ್ದಕ್ಕೆ ಮಹಿಳೆಯ ಮೇಲೆ ಹಲ್ಲೆ- ಪ್ರಚೋದನಕಾರಿ ಹೇಳಿಕೆ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪ್ರಕರಣ ದಾಖಲು

ಕಳ್ಳರು ನಮ್ಮ ಮನೆಗೆ ಪ್ರವೇಶಿಸಿದರೆ, ನಾವು ಏನು ಮಾಡಬೇಕು? ಪೊಲೀಸರು ಬರಲು 5-6 ಗಂಟೆ ತೆಗೆದುಕೊಂಡರೆ, ನಾವು ಏನು ಮಾಡಬೇಕು? ನಾವು ಕಳ್ಳರನ್ನು ಕಟ್ಟಿ ಹಾಕದೆ ಇನ್ನೇನು ಮಾಡಲು ಸಾಧ್ಯ?

ಉಡುಪಿ: ಮಲ್ಪೆ ಬಂದರಿನಲ್ಲಿ ಶನಿವಾರ ಮಲ್ಪೆ ಮೀನುಗಾರರ ಸಂಘ ಮತ್ತು ಇತರ ಸಂಘಟನೆಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮೀನು ಕದ್ದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರರ ಸಂಘ ಮತ್ತು ಇತರ ಪ್ರಮುಖ ಮೀನುಗಾರರ ಸಂಘಗಳು ಪ್ರತಿಭಟನೆ ಆಯೋಜಿಸಿದ್ದವು.

ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಚಿವ, ಪ್ರಮೋದ್ ಮಧ್ವರಾಜ್ ಅವರು, ಮಹಿಳೆಯನ್ನು ಕಟ್ಟಿಹಾಕಿ ಎರಡು ಏಟು ಕೊಟ್ಟದ್ದನ್ನು ಸಮರ್ಥಿಸಿಕೊಂಡಿದ್ದರು. ಕಳ್ಳರು ನಮ್ಮ ಮನೆಗೆ ಪ್ರವೇಶಿಸಿದರೆ, ನಾವು ಏನು ಮಾಡಬೇಕು? ಪೊಲೀಸರು ಬರಲು 5-6 ಗಂಟೆ ತೆಗೆದುಕೊಂಡರೆ, ನಾವು ಏನು ಮಾಡಬೇಕು? ನಾವು ಕಳ್ಳರನ್ನು ಕಟ್ಟಿ ಹಾಕದೆ ಇನ್ನೇನು ಮಾಡಲು ಸಾಧ್ಯ? ನಾವು ಅವರ ಮೇಲೆ ಮಚ್ಚು, ಕತ್ತಿ ಅಥವಾ ಮಾರಕ ಆಯುಧಗಳಿಂದ ದಾಳಿ ಮಾಡಿದ್ದೇವಾ? ಕೇವಲ ಕಪಾಳಮೋಕ್ಷ, ಮಹಿಳೆಯೇ ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ ಎಂದು ಹೇಳಿದ್ದರು.

ಈ ಹೇಳಿಕೆ ಹಿನ್ನೆಲೆಯಲ್ಲಿ ಮಲ್ಪೆ ಪೊಲೀಸರು ಸುಮೋಟೋ ಕೇಸು ದಾಖಲಿಸಿದ್ದಾರೆ. ದ್ವೇಷ ಭಾವನೆಯಿಂದ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು, ಬಿಎನ್ ಎಸ್ 57, 191 (1)192 ನಂತೆ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕವಾಗಿ ಕಟ್ಟಿಹಾಕಿದ್ದು ಸರಿ ಎಂಬುದನ್ನು ಮಧ್ವರಾಜ್ ಸಮರ್ಥಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?