ಕರ್ನಾಟಕದಲ್ಲಿ ಮಳೆ (ಸಾಂದರ್ಭಿಕ ಚಿತ್ರ) 
ರಾಜ್ಯ

Karnataka Rains: ಪೂರ್ವ ಮುಂಗಾರು ಚುರುಕು: ಕರ್ನಾಟಕದ ಹಲವೆಡೆ ಭಾರೀ ಮಳೆ, ಇನ್ನೂ 3 ದಿನ ವರ್ಷಧಾರೆ!: ಹವಾಮಾನ ಇಲಾಖೆ

ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗುಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

ಬೆಂಗಳೂರು: ಕರ್ನಾಟಕದಲ್ಲಿ ಆರಂಭವಾಗಿರುವ ಪೂರ್ವ ಮುಂಗಾರು (Pre Monsoon) ಮಾರುತಗಳು ಚುರುಕು ಪಡೆದುಕೊಂಡಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೋಮವಾರವೂ ಕೂಡ ಭಾರಿ ಮಳೆಯಾಗುತ್ತಿದೆ.

ಬಿರು ಬೇಸಿಗೆ ನಡುವೆಯೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ವಿಜಯಪುರ, ಬಾಗಲಕೋಟೆ, ಹಾಸನ, ಕೊಡಗು ಜಿಲ್ಲೆಯಲ್ಲಿ ಭಾರಿ ವರ್ಷಧಾರೆಯಾಗಿದೆ. ಪೂರ್ವ ಮುಂಗಾರು ಚುರುಕು ಪಡೆದುಕೊಂಡಿದ್ದು, ಬೇಸಿಗೆಯಲ್ಲಿಯೂ ಉತ್ತಮ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೊಡಗು ಜಿಲ್ಲೆಯ ಹಲವೆಡೆ ಇಂದು ಭಾರಿ ಮಳೆಯಾಗಿದ್ದು, ಮಡಿಕೇರಿ ನಗರ ಸೇರಿದಂತೆ ಹಲವೆಡೆ ಆಲಿಕಲ್ಲು ಮಳೆಯಾಗುತ್ತಿದ್ದು, ಕಾಫಿ ಬೆಳೆಗಾರರಲ್ಲಿ ಮಂದಹಾಸ ಮೂಡಿದೆ. ಗುಡುಗು ಸಿಡಿಲು ಆಲಿಕಲ್ಲು ಸಹಿತ ಮಳೆಯಾಗಿದೆ. ಹಾಸನದಲ್ಲೂ ಮಳೆಯಾಗುತ್ತಿದ್ದು, ಜಿಲ್ಲೆಯ ಸಕಲೇಶಪುರ, ಆಲೂರು ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ.

ಅತ್ತ ಬಿರು ಬಿಸಿಲಿನಿಂದ ಕಾದು ಕೆಂಡವಾಗಿದ್ದ ವಿಜಯಪುರ ಜಿಲ್ಲೆಯಲ್ಲೂ ಸಹ ವರುಣ ತಂಪೆರೆದಿದ್ದು, ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಂಗಾಪುರದಲ್ಲಿ ಕಳೆದ ಅರ್ಧ ಗಂಟೆಯಿಂದ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗುತ್ತಿದೆ. ಅತ್ತ ಗಾಳಿ ಮಳೆ ಹೊಡೆತಕ್ಕೆ ನಾಗನೂರು ಗ್ರಾಮದಲ್ಲಿ ಅಣ್ಣಪ್ಪ ಶಿರಹಟ್ಟಿ ಎಂಬುವರ ಗೋವಿನಜೋಳ ನೆಲಕ್ಕೆ ಉರುಳಿದೆ. ಬಾಗಲಕೋಟೆ ಜಿಲ್ಲೆಯಲ್ಲೂ ಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ, ತೊದಲಬಾಗಿ ಗ್ರಾಮಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ.

ಇನ್ನೂ 3 ದಿನ ವರ್ಷಧಾರೆ

ಹವಾಮಾನ ಇಲಾಖೆ ಮಾಹಿತಿಯಂತೆ ಇನ್ನೂ ಮೂರು ದಿನಗಳ ಮಳೆಯಾಗಲಿದ್ದು, ಅಂದರೆ ಮಾರ್ಚ್‌ 24 ರಿಂದ 27 ವರೆಗೆ ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗುಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT