ಸಾಂದರ್ಭಿಕ ಚಿತ್ರ 
ರಾಜ್ಯ

ಸರ್ಕಾರಿ ನೌಕರರ ಕಳ್ಳಾಟಕ್ಕೆ ಬ್ರೇಕ್: AI ಸೆಲ್ಫಿ ಆಧಾರಿತ ಹಾಜರಾತಿ ವ್ಯವಸ್ಥೆ ಪರಿಚಯಿಸಲು ರಾಜ್ಯ ಸರ್ಕಾರ ಸಿದ್ಧತೆ!

ನೌಕರರು ತಮ್ಮ ಕಚೇರಿ ಆವರಣದಲ್ಲಿ ತಮ್ಮ ಮೊಬೈಲ್ ಫೋನ್‌ನಿಂದ ಸೆಲ್ಫಿ ಕ್ಲಿಕ್ ಮಾಡುವ ಮೂಲಕ ತಮ್ಮ ಹಾಜರಾತಿಯನ್ನು ಖಚಿತಪಡಿಸಬೇಕು, ಈ ವೇಳೆ ಹಾಜರಾತಿಯನ್ನು ನೈಜ ಸಮಯದಲ್ಲಿ ಸೆರೆಹಿಡಿಯಲಾಗುತ್ತದೆ.

ಬೆಂಗಳೂರು: ಲೆಡ್ಜರ್‌ನಲ್ಲಿ ಸಹಿ ಮಾಡುವ ಮೂಲಕ ಅಥವಾ ಬಯೋಮೆಟ್ರಿಕ್ ಸಾಧನದ ಮೇಲೆ ಬೆರಳು ಇಡುವ ಮೂಲಕ ಹಾಜರಾತಿ ಬಗ್ಗೆ ಮಾಹಿತಿ ನೀಡುತ್ತಿದ್ದ ವ್ಯವಸ್ಥೆಗೆ ಶೀಘ್ರದಲ್ಲೇ ಅಂತ್ಯವಾಡುವ ಸಾಧ್ಯತೆಯಿದೆ.

ಏಕೆಂದರೆ ಕೃತಕ ಬುದ್ಧಿಮತ್ತೆ ಮತ್ತು ಭೌಗೋಳಿಕ ಮಾಹಿತಿ ವ್ಯವಸ್ಥೆಯಿಂದ ಸಕ್ರಿಯಗೊಳಿಸಲಾದ ಕರ್ನಾಟಕ ಅಡ್ವಾನ್ಸ್ಡ್ ಅಟೆಂಡೆನ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (KAAMS) ಅನ್ನು ತನ್ನ ಎಲ್ಲಾ ಇಲಾಖೆಗಳಲ್ಲಿ ಪರಿಚಯಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ.

ನೌಕರರು ತಮ್ಮ ಕಚೇರಿ ಆವರಣದಲ್ಲಿ ತಮ್ಮ ಮೊಬೈಲ್ ಫೋನ್‌ನಿಂದ ಸೆಲ್ಫಿ ಕ್ಲಿಕ್ ಮಾಡುವ ಮೂಲಕ ತಮ್ಮ ಹಾಜರಾತಿಯನ್ನು ಖಚಿತಪಡಿಸಬೇಕು, ಈ ವೇಳೆ ಹಾಜರಾತಿಯನ್ನು ನೈಜ ಸಮಯದಲ್ಲಿ ಸೆರೆಹಿಡಿಯಲಾಗುತ್ತದೆ. ಈ AI-ಚಾಲಿತ ಹಾಜರಾತಿ ವ್ಯವಸ್ಥೆಯನ್ನು ದೇಶದಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕದ ಸರ್ಕಾರಿ ಕಚೇರಿಯಲ್ಲಿ ಪರಿಚಯಿಸಲಾಗುತ್ತಿದೆ.

ಐದು ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುವ 70 ಕ್ಕೂ ಹೆಚ್ಚು ಇಲಾಖೆಗಳನ್ನು ರಾಜ್ಯ ಸರ್ಕಾರ ಹೊಂದಿದೆ. ಹೆಚ್ಚಿನ ಇಲಾಖೆಗಳು ಈಗ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಹೊಂದಿವೆ, ಅಲ್ಲಿ ನೌಕರರು ಹಾಜರಾತಿಯನ್ನು ಖಚಿತ ಪಡಿಸಲು ತಮ್ಮ ID ಕಾರ್ಡ್ ಸ್ವೈಪ್ ಮಾಡುತ್ತಾರೆ ಅಥವಾ ಬಯೋಮೆಟ್ರಿಕ್ ಸಾಧನದ ಮೇಲೆ ಬೆರಳನ್ನು ಇಡುತ್ತಾರೆ. ಶಿಕ್ಷಕರು ಕೆಲಸ ಮಾಡುತ್ತಿರುವ ಕೆಲವು ಇಲಾಖೆಗಳು (ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಎರಡೂ), ಲೆಡ್ಜರ್‌ನಲ್ಲಿ ಸಹಿ ಮಾಡುವ ಸಾಂಪ್ರದಾಯಿಕ ವಿಧಾನವನ್ನು ಇನ್ನೂ ಪಾಲಿಸಲಾಗುತ್ತಿದೆ.

ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ತಮ್ಮ ಬುದ್ದಿವಂತಿಕೆಯಿಂದ ಬದಲಾಯಿಸಿ ನಿರ್ವಹಿಸಲು ಸಾಧ್ಯವಿದೆ ಎಂದು ಮೂಲಗಳು ತಿಳಿಸಿವೆ. ಸಿಬ್ಬಂದಿ ತಮ್ಮ ಅನಿಯಮಿತ ಹಾಜರಾತಿಯನ್ನು ಮರೆಮಾಡಲು ಉಪಕರಣಗಳನ್ನು ಹಾನಿಗೊಳಿಸಬಹುದು ಅಥವಾ ಬೇರೆ ಯಾವುದಾದರೂ ತಂತ್ರವನ್ನು ಆಶ್ರಯಿಸಬಹುದು ಎಂದು ಹೇಳಲಾಗಿದೆ.

ಆದರೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (DPAR) ಇ-ಆಡಳಿತ ಕೇಂದ್ರವು ಇತ್ತೀಚೆಗೆ ಅಭಿವೃದ್ಧಿಪಡಿಸಿರುವ KAAMS, ಜಿಯೋಫೆನ್ಸ್ ನಿಂದ ವಿನ್ಯಾಸಗೊಳಿಸಲಾಗಿದೆ, ಹೀಗಾಗಿ ಅದನ್ನು ಹಾಳು ಮಾಡುವುದು ಅಸಾಧ್ಯವಾಗಿದೆ.

DPAR (ಇ-ಆಡಳಿತ) ದ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಈ ವ್ಯವಸ್ಥೆಯು ನೈಜ ಸಮಯದ ಹಾಜರಾತಿಯನ್ನು ಸೆರೆಹಿಡಿಯುತ್ತದೆ. ಯಾವುದೇ ರೀತಿಯಲ್ಲಿ ದುರಪಯೋಗ ಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಆರೋಗ್ಯ ಇಲಾಖೆಯ ಕೆಲವು ಸ್ಥಳಗಳಲ್ಲಿ ಆರಂಭಿಕವಾಗಿ ಪ್ರಯೋಗ ನಡೆಸಲಾಯಿತು. ಕೆಲವು ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ವೈದ್ಯರು ಗೊತ್ತುಪಡಿಸಿದ ಸ್ಥಳಗಳಲ್ಲಿ ಲಭ್ಯವಿರಲಿಲ್ಲ ಎಂದು CEGಯ ಕೃತಕ ಬುದ್ಧಿಮತ್ತೆ ಕೋಶದ ಯೋಜನಾ ನಿರ್ದೇಶಕ ಶ್ರೀವ್ಯಾಸ್ HM, ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಆದರೆ ಹೊಸ ವ್ಯವಸ್ಥೆಯೊಂದಿಗೆ, ಅವರು ತಮ್ಮ ಹಾಜರಾತಿಯನ್ನು ವೈಯಕ್ತಿಕವಾಗಿ ಗುರುತಿಸಬೇಕಾಗಿರುವುದರಿಂದ ಸಿಬ್ಬಂದಿ ಅದನ್ನು ನಕಲಿ ಮಾಡಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.

ಉದ್ಯೋಗಿಗಳು ಮೊಬೈಲ್ ಅಪ್ಲಿಕೇಶನ್ KAAMS ಅನ್ನು ಡೌನ್‌ಲೋಡ್ ಮಾಡಬೇಕು ಮತ್ತು ಅವರ ಆಧಾರ್ ಮೂಲಕ ಒಮ್ಮೆ ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದ ಶ್ರೀವ್ಯಾಸ್ ಹೊಸ ತಂತ್ರಜ್ಞಾನ ಕಾರ್ಯ ನಿರ್ವಹಣೆ ಬಗ್ಗೆ ವಿವರಿಸಿದ್ದಾರೆ.

ನೌಕರರ ಡೇಟಾವನ್ನು ಸರ್ಕಾರದ ಡೇಟಾಬೇಸ್ - ಮಾನವ ಸಂಪನ್ಮೂಲ ನಿರ್ವಹಣಾ ಸೇವೆಯಿಂದಲೂ ಪಡೆಯಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ, ಉದ್ಯೋಗಿಯ ಸೆಲ್ಫಿ ತೆಗೆದುಕೊಳ್ಳಲಾಗುತ್ತದೆ, ಇದನ್ನು AI ಉಪಕರಣವನ್ನು ಬಳಸಿಕೊಂಡು ಆಧಾರ್ ಫೋಟೋದೊಂದಿಗೆ ಹೋಲಿಸಲಾಗುತ್ತದೆ.

HRMS ಡೇಟಾವು ಒಬ್ಬರ ಕೆಲಸದ ಸ್ಥಳದ ವಿವರಗಳನ್ನು ನೀಡುವುದರಿಂದ, ಅದನ್ನು ಜಿಯೋಫೆನ್ಸ್ ಮಾಡಲಾಗಿದೆ. ಪ್ರತಿದಿನ, ಉದ್ಯೋಗಿ ತನ್ನ ಕೆಲಸದ ಸ್ಥಳಕ್ಕೆ ಬಂದಾಗ, ಅವನು/ಅವಳು ಸೆಲ್ಫಿ ತೆಗೆದುಕೊಳ್ಳಬೇಕು. ಈ ಫೋಟೋವನ್ನು ಅಪ್ಲಿಕೇಶನ್‌ನಲ್ಲಿ ನೋಂದಣಿ ಸಮಯದಲ್ಲಿ ತೆಗೆದ ಸೆಲ್ಫಿಯೊಂದಿಗೆ ಹೋಲಿಸಲಾಗುತ್ತದೆ. ಅವರ ಹಾಜರಾತಿಯನ್ನು ಗುರುತಿಸಲು ಯಾವುದೇ ಉಪಕರಣಗಳು ಅಥವಾ ಗ್ಯಾಜೆಟ್‌ಗಳು ಇರುವುದಿಲ್ಲ ಮತ್ತು ಅವರ ಸೆಲ್ ಫೋನ್ ಅನ್ನು ಮಾತ್ರ ಬಳಸಲಾಗುತ್ತದೆ ಎಂದು ಅವರು ಹೇಳಿದರು.

ನೌಕರರ ಕಚೇರಿ ಆವರಣದಿಂದ 100-200 ಮೀಟರ್ ಒಳಗೆ ಸೆಲ್ಫಿ ತೆಗೆದುಕೊಳ್ಳಬೇಕು. ಆದಾಗ್ಯೂ, ನೌಕರರ ಚಲನವಲನಗಳನ್ನು ಟ್ರ್ಯಾಕ್ ಮಾಡಲಾಗುವುದಿಲ್ಲ ಎಂದು ಅವರು ಹೇಳಿದರು. ನೌಕರರ ಸಂಪೂರ್ಣ ಡೇಟಾ ರಾಜ್ಯ ಸರ್ಕಾರದಲ್ಲಿ ಇರುತ್ತದೆ ಮತ್ತು ಯಾವುದೇ ಖಾಸಗಿ ಸಂಸ್ಥೆಯ ಬಳಿ ಇರುವುದಿಲ್ಲ. ಈ ವ್ಯವಸ್ಥೆಯು ಅನೇಕ ವೈಶಿಷ್ಟ್ಯಗಳಿಂದ ಕೂಡಿದೆ, ಒಬ್ಬ ಉದ್ಯೋಗಿ ತಡವಾಗಿ ಬಂದರೆ ಅಥವಾ ಕಚೇರಿಯಿಂದ ಬೇಗನೆ ಹೊರಟುಹೋದರೆ ಇಲಾಖೆಯ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಲಿದೆ ಎಂದು ಅದರ ಕಾರ್ಯ ನಿರ್ವಹಣೆ ಬಗ್ಗೆ ವ್ಯಾಸ್ ವಿವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ

11 ಮಕ್ಕಳ ಸಾವು: ಕೇರಳದಲ್ಲೂ ಕೋಲ್ಡ್ರಿಫ್ ಸಿರಪ್ ಮಾರಾಟ, ವಿತರಣೆ ನಿಷೇಧ

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ: ವಿಜಯ್ ಜೊತೆ ಬಿಜೆಪಿ ಮಾತುಕತೆ? ಕಾಲ್ತುಳಿತ ಘಟನೆಯ ನಂತರ TVKಗೆ ಪ್ರಮುಖ ಭರವಸೆ?

Bengaluru: ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಗಂಭೀರ ಗಾಯ, ಆಸ್ಪತ್ರೆಗೆ ದಾಖಲು!

KRS ಪಕ್ಷದ ಕಾರ್ಯಕರ್ತರು V/S ಪೊಲೀಸರ ಸಂಘರ್ಷ: 'ಕೇಸ್' ದಾಖಲು! ಅಸಲಿ ಕಾರಣವೇನು?

SCROLL FOR NEXT