ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ವರದಿ ಸಲ್ಲಿಸಿದ ನ್ಯಾ. ನಾಗಮೋಹನ್ ದಾಸ್ ಆಯೋಗ 
ರಾಜ್ಯ

ಒಳಮೀಸಲಾತಿ:‌ ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ವರದಿ ಸಲ್ಲಿಸಿದ ನ್ಯಾ. ನಾಗಮೋಹನ್ ದಾಸ್ ಆಯೋಗ

2 ತಿಂಗಳಿಗಿಂತ ‌ಹೆಚ್ಚು ನಾನು ಹಾಗೂ ನನ್ನ ತಂಡ ಆಳವಾದ ಅಧ್ಯಯನ ಮಾಡಿ 104 ಪುಟಗಳ ಒಳಮೀಸಲಾತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ.

ಬೆಂಗಳೂರು: ಒಳಮೀಸಲಾತಿ ಜಾರಿ ವಿಚಾರವಾಗಿ ನಡೆಯುತ್ತಿರುವ ಹೋರಾಟಗಳ ನಡುವೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಮಧ್ಯಂತರ ವರದಿಯನ್ನು ಸಲ್ಲಿಸಲಾಗಿದೆ.

ಗುರುವಾರ ಕ್ಯಾಬಿನೆಟ್ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರಿಗೆ ನ್ಯಾ. ನಾಗಮೋಹನ್ ದಾಸ್ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಮಧ್ಯಂತರ ವರದಿಯನ್ನು ಸಲ್ಲಿಸಿದರು.

ವರದಿ ಸಲ್ಲಿಕೆ ಬಳಿಕ ಮಾತನಾಡಿದ ಅವರು, ಎರಡು ತಿಂಗಳಿಗಿಂತ ‌ಹೆಚ್ಚು ನಾನು ಹಾಗೂ ನನ್ನ ತಂಡ ಆಳವಾದ ಅಧ್ಯಯನ ಮಾಡಿ 104 ಪುಟಗಳ ಒಳಮೀಸಲಾತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಇದರಲ್ಲಿ ತರಾತುರಿ ಪ್ರಶ್ನೆ ಇಲ್ಲ. ಮಧ್ಯಂತರ ವರದಿ ಕೊಡಿ ಎಂದು ಸರ್ಕಾರ ನಮ್ಮನ್ನು ಕೇಳಲಿಲ್ಲ. ನಾವೇ ಸ್ವ ಇಚ್ಛೆಯಿಂದ ವರದಿಯನ್ನು ‌ನೀಡಿದ್ದೇವೆ ಎಂದರು.

ಮಧ್ಯಂತರ ವರದಿ ಕೊಡಿ ಎಂದು ಸರ್ಕಾರ ಕೇಳಿರಲಿಲ್ಲ. ಈ ವರದಿ ಮೇಲೆ ಸರ್ಕಾರ ಏನು ತೀರ್ಮಾನ ಮಾಡುತ್ತೊ ನೋಡೋಣ' ಎಂದರು.

ಉದ್ಯೋಗಕಾಂಕ್ಷಿಗಳಿಗೆ ಅನ್ಯಾಯ ಆಗಬಾರದು. ಅವರಿಗೆ ಶಾಶ್ವತವಾದ ಪರಿಹಾರ ಕೊಡಬೇಕು.‌ ಈ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ.‌ ವರದಿ ಬಗ್ಗೆ ಸರ್ಕಾರ ಏನೂ ಉತ್ತರ ಕೊಟ್ಟಿಲ್ಲ. ನೇಮಕಾತಿ ಬಗ್ಗೆ ನಾವು ಏನೂ ಸಲಹೆ ಕೊಟ್ಟಿಲ್ಲ ಎಂದರು.

ವರದಿ ನೀಡಿರುವ ಹಂತದಲ್ಲಿ ಬೇರೆ ಯಾವ ವಿಚಾರವನ್ನು ಹೇಳಲು ಸಾಧ್ಯವಿಲ್ಲ. ಸರ್ಕಾರದ ತೀರ್ಮಾನ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಮಧ್ಯಂತರ ವರದಿ ನೀಡಿರುವುದು ಒಳ ಮೀಸಲಾತಿ ಜಾರಿಯ ವಿಳಂಬ ಧೋರಣೆಗೆ ಅನುಕೂಲ ಎಂಬ ವಾದವನ್ನು ನಿರಾಕರಣೆ ಮಾಡಿದ ಅವರು, ನನಗೆ ಹೀಗೆ ಅನ್ನಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಶಾಶ್ವತವಾದ ಪರಿಹಾರವನ್ನು ಕೊಡಬೇಕು ಎಂಬುದು ನನ್ನ ಆಸೆಯಾಗಿದೆ. ಸರ್ಕಾರ ಏನು ತೀರ್ಮಾನ ಮಾಡುತ್ತದೆ ಅದರ ಆಧಾರದಲ್ಲಿ ಅಂತಿಮ ವರದಿ ಸಲ್ಲಿಸುತ್ತೇನೆ. ಮಧ್ಯಂತರ ವರದಿ ನೀಡಿದ್ದೇನೆ, ಇದಕ್ಕೆ ಸರ್ಕಾರ ಉತ್ತರ ಕೊಟ್ಟಿಲ್ಲ. ಉತ್ತರದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದರು‌.

ಮಧ್ಯಂತರ ವರದಿ ಮೀಸಲಾತಿ ಕೊಡಲು ವಿಳಂಬ ಧೋರಣೆ ಮಾಡೋಕೆ ಅಲ್ಲ. ಶಾಶ್ವತ ಪರಿಹಾರ ಕೊಡೋದು ನಮ್ಮ ಇಚ್ಚೆ. ಈ ನಿಟ್ಟಿನಲ್ಲಿ ವರದಿ ಕೊಡಲಾಗಿದೆ. ಮಧ್ಯಂತರ ವರದಿ ಕೊಟ್ಟಿದ್ದೇನೆ‌. ಸರ್ಕಾರ ಏನ್ ಕ್ರಮ ತೆಗೆದುಕೊಳ್ಳುತ್ತೋ ನೋಡೋಣ. ಮಧ್ಯಂತರ ವರದಿಯಲ್ಲಿ ಏನಿದೆ ಅಂತ ನಾನು ಹೇಳೋಕೆ ಆಗೊಲ್ಲ. ಸರ್ಕಾರ ಏನ್ ಮಾಡುತ್ತೆ ಅಂತ ಸರ್ಕಾರವನ್ನ ಕೇಳಿ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!