ಸಂಗ್ರಹ ಚಿತ್ರ 
ರಾಜ್ಯ

BWSSBಗೆ ಪ್ರತಿಷ್ಠಿತ ಗರಿ: ಸುಸ್ಥಿರ ನಗರ ನೀರು ನಿರ್ವಹಣೆಗೆ ವಿಶ್ವ ಜಲ 2025 ಪ್ರಶಸ್ತಿ!

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮಾರ್ಚ್ 31ರಂದು ನವದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರತಿಷ್ಠಿತ ವಿಶ್ವ ಜಲ 2025 ಪ್ರಶಸ್ತಿಯನ್ನು ಸ್ವೀಕರಿಸಲಿದೆ.

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮಾರ್ಚ್ 31ರಂದು ನವದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರತಿಷ್ಠಿತ ವಿಶ್ವ ಜಲ 2025 ಪ್ರಶಸ್ತಿಯನ್ನು ಸ್ವೀಕರಿಸಲಿದೆ. BWSSB ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಮಾತನಾಡಿ, ಈ ಮನ್ನಣೆಯು ಬೆಂಗಳೂರಿಗೆ ಜಲ-ಸುರಕ್ಷಿತ ಭವಿಷ್ಯವನ್ನು ಖಾತ್ರಿಪಡಿಸಿಕೊಳ್ಳುವಲ್ಲಿ ನಮ್ಮ ಪ್ರಯತ್ನಗಳನ್ನು ಮುಂದುವರಿಸಲು ನಮಗೆ ಮತ್ತಷ್ಟು ಪ್ರೇರಣೆ ನೀಡುತ್ತದೆ ಎಂದರು.

ಯುನೆಸ್ಕೋ ಸಹಯೋಗದೊಂದಿಗೆ ನೀಡಲಾಗುವ ಈ ಪ್ರಶಸ್ತಿಗಳು, ಸಂಸ್ಥೆಗಳು, ಎನ್‌ಜಿಒಗಳು ಮತ್ತು ವ್ಯಕ್ತಿಗಳು ನೀರಿನ ಸಂಸ್ಕರಣೆ, ಮರುಬಳಕೆ ಮತ್ತು ಸಂರಕ್ಷಣೆಯಲ್ಲಿ ಮಾಡಿದ ಅಸಾಧಾರಣ ಪ್ರಯತ್ನಗಳನ್ನು ಗುರುತಿಸುತ್ತವೆ. BWSSB ಸುಸ್ಥಿರ ನಗರ ನೀರು ಸರಬರಾಜು ಮತ್ತು ನಿರ್ವಹಣೆಗೆ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಪ್ರಶಸ್ತಿಯನ್ನು ಪಡೆಯುತ್ತಿದೆ.

ಮನೋಹರ್ ಅವರ ಪ್ರಕಾರ, ಅಂತರ್ಜಲ ಮಟ್ಟವನ್ನು ಹೆಚ್ಚಿಸಲು 23 ಕೆರೆಗಳನ್ನು ಸಂಸ್ಕರಿಸಿದ ನೀರಿನಿಂದ ತುಂಬಿಸುವುದು, ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ ಅಂತರ್ಜಲ ಕಾರ್ಯಪಡೆಯನ್ನು ಸ್ಥಾಪಿಸಿರುವುದು ಮತ್ತು 3,000 ಮಳೆನೀರು ಕೊಯ್ಲು ಟ್ಯಾಂಕ್‌ಗಳನ್ನು ನಿರ್ಮಿಸುವುದು ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಂಡಿದ್ದಕ್ಕಾಗಿ BWSSB ಗೆ ಪ್ರಶಸ್ತಿ ಲಭಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT