ಸಾಂದರ್ಭಿಕ ಚಿತ್ರ  
ರಾಜ್ಯ

ಚಿತ್ರದುರ್ಗದಲ್ಲಿ ಟಿಟಿ ಪಲ್ಟಿಯಾಗಿ ಮೂವರು ಸಾವು; ನಂಜನಗೂಡಿನಲ್ಲಿ ಮೂವರು ನೀರುಪಾಲು

ಹೆಗ್ಗೆರೆ ಗ್ರಾಮದ ಬಳಿ ಟಿಟಿ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ಟಿಟಿ ವಾಹನ ಪಲ್ಟಿ ಹೊಡೆದಿದ್ದು, ಅದರಲ್ಲಿ ಮೂವರು ಮೃತಪಟ್ಟು, ಐವರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗ: ಟಿಟಿ ವಾಹನ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಶಂಕರಿಬಾಯಿ(65ವ), ಕುಮಾರ ನಾಯ್ಕ್(46ವ) ಮತ್ತು ಶ್ವೇತಾ(38ವ) ಮೃತರಾಗಿದ್ದಾರೆ. ಐವರಿಗೆ ಗಂಭೀರ ಗಾಯಗಳಾಗಿದ್ದು, ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೆಗ್ಗೆರೆ ಗ್ರಾಮದ ಬಳಿ ಟಿಟಿ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ಟಿಟಿ ವಾಹನ ಪಲ್ಟಿ ಹೊಡೆದಿದ್ದು, ಅದರಲ್ಲಿ ಮೂವರು ಮೃತಪಟ್ಟು, ಐವರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂವರು ನೀರುಪಾಲು

ಕೆರೆಯಲ್ಲಿ ಹಸು ತೊಳೆಯಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾಮಳ್ಳಿಯಲ್ಲಿ ನಡೆದಿದೆ. ಮುದ್ದೇಗೌಡ(48ವ), ಬಸವೇಗೌಡ(45ವ), ವಿನೋದ್(17ವ) ಮೃತರಾಗಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಯುಗಾದಿ ಹಬ್ಬ ಹಿನ್ನೆಲೆ ಹಸುಗಳನ್ನು ತೊಳೆಯಲು ವಿನೋದ್ ಕೆರೆಗೆ ಹೋಗಿದ್ದರು. ಈ ವೇಳೆ ವಿನೋದ್‌ನನ್ನು ಹಸು ಕೆರೆಗೆ ಎಳೆದೊಯ್ದಿದೆ. ಆತನ ರಕ್ಷಣೆಗೆ ಮುದ್ದೇಗೌಡ ಮತ್ತು ಬಸವೇಗೌಡ ಕೆರೆಗೆ ಇಳಿದಿದ್ದಾರೆ. ಈಜು ಬಾರದೆ ನೀರಿನಲ್ಲಿ ಮುಳುಗಿ ಮೂವರೂ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್‌ ಇಂಧನ ಕೇಂದ್ರಗಳ ಮೇಲೆ ದಾಳಿಯನ್ನು 'ಒಪ್ಪಲಾಗದು': ಅನಿಲ ಪೂರೈಕೆ ಸಮಸ್ಯೆ ಬಗ್ಗೆ ಭಾರತ ಕಳವಳ!

ಯುಗಾದಿ ಹಬ್ಬದಂದೇ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ; ಬೆಂಗಳೂರಿನಲ್ಲಿ ಇಂದಿನ ದರವೆಷ್ಟು?

Indian Stock Market: ರಕ್ತಪಾತ.. ಒಂದೇ ಗಂಟೆಯಲ್ಲಿ ಹೂಡಿಕೆದಾರರಿಗೆ 7,60,00,00,00,000 ರೂ ನಷ್ಟ!

North Korea Election: ಇತಿಹಾಸದಲ್ಲೇ ಮೊದಲು; Kim Jong Un ವಿರುದ್ಧ ಮತ ಚಲಾವಣೆ, ಆದರೂ ಶೇ. 99.99% ಮತದಾನ.. ಸರ್ವಾಧಿಕಾರಿಗೆ ಭರ್ಜರಿ ಜಯ

KD Movie: Nora Fatehi ವಿರುದ್ಧ ಮುಸ್ಲಿಂ ಬೋರ್ಡ್ ಫತ್ವಾ ಜಾರಿ..!

SCROLL FOR NEXT