ಬೆಂಗಳೂರು: ಪತ್ನಿ ಹತ್ಯೆ ಮಾಡಿ ಶವವನ್ನು ಸೂಟ್‌ಕೇಸ್‌ನಲ್ಲಿ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಕೇಶ್ ಕಡೇಕರ್ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ.
ಕಳೆದ ರಾತ್ರಿ ಆರೋಪಿಯನ್ನು ಬೆಂಗಳೂರಿಗೆ ಕರೆತಂದಿದ್ದ ಪೊಲೀಸರು ಇಂದು ಕೋರಮಂಗಲ ಎನ್ಜಿವಿ ಮ್ಯಾಜಿಸ್ಟ್ರೇಟ್ ಕೋರ್ಟ್ ಜಡ್ಜ್ ನಿವಾಸಕ್ಕೆ ಹಾಜರುಪಡಿಸಿದ್ದರು. ಬಳಿಕ ರಾಕೇಶ್ನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದರು. ಸದ್ಯ ಆರೋಪಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ.
ಕೊಲೆ ಮಾಡಿ ತಂದೆಗೆ ಕರೆಮಾಡಿದ್ದ ರಾಕೇಶ್
ಪತ್ನಿಯ ಕೊಲೆ ಮಾಡಿದ ರಾಕೇಶ್, ಶವದ ಕಾಲುಗಳನ್ನ ಮುರಿದು ಶವವನ್ನ ಟ್ರ್ಯಾಲಿ ಬ್ಯಾಗ್‌ಗೆ ತುಂಬಿದ್ದ. ಅದೇ ಬ್ಯಾಗ್‌ನನ್ನ ಎಳೆಯುವಾಗ ಹ್ಯಾಂಡಲ್ ಕಟ್ ಆಗಿದೆ. ಹೀಗಾಗಿ ಶವವನ್ನ ಅಲ್ಲೇ ಬಿಟ್ಟು ಕಾರ್‌ನಲ್ಲಿ ಎಸ್ಕೇಪ್ ಆಗಿದ್ದ. ಪತಿ ಜತೆ ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಮಹಾರಾಷ್ಟ್ರ ಮೂಲದ ಗೌರಿ ಕಡೇಕರ್ ಅವರ ಮೃತದೇಹ ಗುರುವಾರ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿತ್ತು.
ಪತ್ನಿ ಕೊಲೆ ಮಾಡಿದ ನಂತರ ಈ ವಿಚಾರವನ್ನು ಗೌರಿ ಪೋಷಕರಿಗೆ ಕರೆ ಮಾಡಿ ತಿಳಿಸಿ ನಂತರ ಪುಣೆಗೆ ಪರಾರಿಯಾಗಿದ್ದನು. ಅಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಗೌರಿ ಕೊಲೆ ಕುರಿತಂತೆ ಮಾತನಾಡಿದ ಪೊಲೀಸ್ ಆಯುಕ್ತ ಬಿ ದಯಾನಂದ್, ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಮಹಿಳೆಯ ಪತಿ ಪ್ರಮುಖ ಆರೋಪಿ ಎಂದು ತಿಳಿಸಿದ್ದಾರೆ.