ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ಸಂಭ್ರಮದ ಯುಗಾದಿ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರ ಶುಭಾಶಯ

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ನಾಡಿನೆಲ್ಲೆಡೆ ಶ್ರೀ ವಿಶ್ವಾವಸು ನಾಮ ಸಂವತ್ಸರದ ಯುಗಾದಿ ಹಬ್ಬವನ್ನು ಸಡಗ- ಸಂಭ್ರಮದಿಂದ ಜನತೆ ಆಚರಿಸುತ್ತಿದ್ದಾರೆ. ಹಾಲು, ಹೂವು, ಹಣ್ಣು, ತರಕಾರಿ ಸೇರಿದಂತೆ ಮತ್ತಿತರ ದಿನೋಪಯೋಗಿ ವಸ್ತುಗಳ ಬೆಲೆ ಹೆಚ್ಚಾಗಿದ್ದರೂ ಹಬ್ಬದ ಸಡಗರಕ್ಕೆ ಕುಂದು ತಂದಿಲ್ಲ. ಎಲ್ಲೆಡೆ ಮನೆಗಳಿಗೆ ತಳಿರು ತೋರಣ ಕಟ್ಟಿ, ಹೂವುಗಳಿಂದ ಆಲಂಕರಿಸುವ ಮೂಲಕ ಯುಗಾದಿಯನ್ನು ಆಚರಿಸಲಾಗುತ್ತಿದೆ.

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.

ಇದು ಭರವಸೆ ಮತ್ತು ಜೀವನೋತ್ಸಾಹದೊಂದಿಗೆ ಸಂಬಂಧ ಹೊಂದಿರುವ ವಿಶೇಷ ಹಬ್ಬವಾಗಿದೆ. ಸಂತೋಷ ಮತ್ತು ಸಾಮರಸ್ಯದ ಮನೋಭಾವ ಬೆಳೆಯಲಿ ಮತ್ತು ಅರಳಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ನೋವು - ನಲಿವು, ಸೋಲು - ಗೆಲುವು, ಕಷ್ಟ - ಸುಖಗಳ ಜೀವನ ಸಂದೇಶ ಸಾರುವ ಹಬ್ಬ ಯುಗಾದಿ. ದುಃಖದ ಕಹಿಬೇವು, ಸಂತಸದ ಸಿಹಿಬೆಲ್ಲ ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿ, ಭರವಸೆಯೊಂದಿಗೆ ಮುನ್ನಡೆಯೋಣ, ಬೇವಿನಂತ ಕಹಿ ಅನುಭವಗಳಿಂದ ಕಲಿತ ಪಾಠವು ಬೆಲ್ಲದಂತ ಸಿಹಿ ಬದುಕಿಗೆ ಮುನ್ನುಡಿಯಾಗಲಿ. ಯುಗದ ಆದಿಯು ನಾಡಿನಲ್ಲಿ‌ ಸುಖ, ಶಾಂತಿ ಸಮೃದ್ಧಿಯನ್ನು ತರಲಿ‌ ಎಂದು ಹಾರೈಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಡಿಯೋ ಮೂಲಕ ಸಂದೇಶ ನೀಡಿದ್ದಾರೆ.

ವಿಶ್ವಾವಸುನಾಮ ಸಂವತ್ಸರವು ನಿಮಗೆ ಸುಖ-ಸಂತೋಷ, ನೆಮ್ಮದಿ-ಸಮೃದ್ಧಿ ಹಾಗೂ ಆಯುರಾರೋಗ್ಯ ನೀಡಲಿ ಎಂದು ಕುಮಾರಸ್ವಾಮಿ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ