ರಾಜ್ಯ

BWSSB: ಬೆಂಗಳೂರು ಜಲಮಂಡಳಿ ಪೋರ್ಟಲ್ ಮೇಲಿನ ಸೈಬರ್ ದಾಳಿ ಯತ್ನ ವಿಫಲ

ಏಪ್ರಿಲ್‌ 11 ರಂದು ಬೆಳಿಗ್ಗೆ ಜಲಮಂಡಳಿಯ ಆನ್‌ಲೈನ್‌ ವಾಟರ್‌ ಕನೆಕ್ಷನ್‌ ಅರ್ಜಿ ಸಲ್ಲಿಸುವ ವೆಬ್‌ಸೈಟ್‌ನಿಂದ ದತ್ತಾಂಶ ಕದಿಯುವ ಪ್ರಯತ್ನಗಳನ್ನು ನಡೆಸಲಾಗಿದೆ

ಬೆಂಗಳೂರು: ಬೆಂಗಳೂರು ನೀರು ಮತ್ತು ಒಳಚರಂಡಿ ಮಂಡಳಿಯ ಆನ್‌ಲೈನ್ ಅರ್ಜಿ ಸಲ್ಲಿಕೆಯ ಪೋರ್ಟಲ್‌ ಮೇಲೆ ಸೈಬರ್ ದಾಳಿಯ ಯತ್ನ ನಡೆದಿದ್ದು, ಯಾವುದೇ ಸೂಕ್ಷ್ಮ ಡೇಟಾಗೆ ಧಕ್ಕೆಯಾಗುವ ಮೊದಲು ಅಧಿಕಾರಿಗಳು ಅದನ್ನು ಎದುರಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಏಪ್ರಿಲ್‌ 11 ರಂದು ಬೆಳಿಗ್ಗೆ ಜಲಮಂಡಳಿಯ ಆನ್‌ಲೈನ್‌ ವಾಟರ್‌ ಕನೆಕ್ಷನ್‌ ಅರ್ಜಿ ಸಲ್ಲಿಸುವ ವೆಬ್‌ಸೈಟ್‌ನಿಂದ ದತ್ತಾಂಶ ಕದಿಯುವ ಪ್ರಯತ್ನಗಳನ್ನು ನಡೆಸಲಾಗಿದೆ. ಆದರೆ ಪ್ರಾಥಮಿಕ ಹಂತದ ತನಿಖೆಯಲ್ಲಿ ಸೂಕ್ಷ್ಮ ಗ್ರಾಹಕ ಮಾಹಿತಿ ಸೋರಿಕೆಯಾಗಿಲ್ಲ ಎನ್ನುವುದು ತಿಳಿದು ಬಂದಿದೆ

ಈ ಬಗ್ಗೆ ಇಂಡಿಯನ್‌ ಕಂಪ್ಯೂಟರ್‌ ಎಮರ್ಜೆನ್ಸಿ ರೆಸ್ಪಾನ್ಸ್‌ ಟೀಮ್‌ ನ ಮಾಹಿತಿಯ ನಂತರ ನಮ್ಮ ಇಂಜಿನೀಯರ್‌ಗಳು ದಾಳಿಯನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆಯ ದೃಷ್ಟಿಯಿಂದ ಸೈಬರ್‌ ಠಾಣೆಗೆ ದೂರು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಜಲಮಂಡಳಿಯ ಗ್ರಾಹಕರ ದತ್ತಾಂಶಗಳನ್ನು ಕರ್ನಾಟಕ ಸರ್ಕಾರ ನಿರ್ವಹಿಸುವಂತಹ ರಾಜ್ಯ ದತ್ತಾಂಶ ಕೇಂದ್ರದಲ್ಲಿ ಸಂಗ್ರಹಿಸಲಾಗಿದೆ. ನೀರಿನ ಸಂಪರ್ಕಕ್ಕೆ ಅರ್ಜಿಗಳನ್ನು ಸಲ್ಲಿಸುವ ವೆಬ್‌ಸೈಟ್‌ ಪೋರ್ಟ್‌ಲ್‌ ಮೇಲೆ ದಾಳಿ ಮಾಡುವ ಪ್ರಯತ್ನ ನಡೆದಿದೆ. ಈ ಸೈಬರ್‌ ದಾಳಿಯನ್ನು ನಮ್ಮ ಇಂಜಿನಿಯರ್‌ಗಳು ಯಶಸ್ವಿಯಾಗಿ ತಡೆದಿದ್ದಾರೆ.

ಸೈಬರ್‌ ದಾಳಿಕೋರರು ನಮ್ಮ ಒಟ್ಟಾರೆ ಗ್ರಾಹಕರ ದತ್ತಾಂಶದಲ್ಲಿ ಕೆಲವೇ ಭಾಗದ ಮಾಹಿತಿಯನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಪ್ರಾಥಮಿಕ ಹಂತದಲ್ಲಿ ಗ್ರಾಹಕರ ಸೂಕ್ಷ್ಮ ಮಾಹಿತಿಗಳು ಸೋರಿಕೆಯಾಗಿಲ್ಲ ಎನ್ನುವುದು ತಿಳಿದು ಬಂದಿದೆ.

ಜಲಮಂಡಳಿಯ ಪೋರ್ಟಲ್ ಮೇಲೆ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಈ ವೆಬ್‌ಸೈಟ್‌ನಲ್ಲಿದ್ದಂತಹ ದತ್ತಾಂಶಗಳನ್ನು ಹೆಚ್ಚು ಸುರಕ್ಷಿತ ಕೇಂದ್ರೀಕೃತ ಸರ್ವರ್‌ಗಳಿಗೆ ವರ್ಗಾಯಿಸಲಾಗಿದೆ. ಪಾರದರ್ಶಕ, ಸುರಕ್ಷಿತ ಹಾಗೂ ಟ್ಯಾಂಪರ್‌ - ರೆಸಿಸ್ಟಾಂಟ್‌ ಪ್ಲಾಟ್‌ಫಾರಂ ಆಗಿರುವಂತಹ ಬ್ಲಾಕ್‌ಚೈನ್‌ನಂತಹ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಇನ್ನು 'ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಭದ್ರತೆಯನ್ನು ಇನ್ನಷ್ಟು ಬಲಪಡಿಸಲು ಬ್ಲಾಕ್‌ಚೇನ್ ತಂತ್ರಜ್ಞಾನವನ್ನು ಭವಿಷ್ಯದ ದೀರ್ಘಕಾಲಿಕ ಕ್ರಮವಾಗಿ ಪರಿಗಣಿಸಲಾಗುತ್ತಿದೆ'. ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಬಗ್ಗೆ ದೂರು ಸಲ್ಲಿಸಲಾಗಿದ್ದು, ದತ್ತಾಂಶದ ಮಾರಾಟ ಹಾಗೂ ಅದರ ದುರುಪಯೋಗ ಪಡೆದುಕೊಳ್ಳುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಲಮಂಡಳಿ ಅಧ್ಯಕ್ಷ ಡಾ.ರಾಮ್‌ ಪ್ರಸಾತ್‌ ಮನೋಹರ್‌ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇನ್ನು ಗ್ರಾಹಕರ ಮಾಹಿತಿಯ ಭದ್ರತೆಗೆ BWSSB ಬದ್ಧವಾಗಿದ್ದು, ಸಾರ್ವಜನಿಕ ಸೇವೆಗಳ ನಿರ್ವಹಣೆಗೆ ದೃಢವಾದ ಡಿಜಿಟಲ್ ಮೂಲಸೌಕರ್ಯ ನಿರ್ಮಾಣಕ್ಕೆ ಸಕ್ರೀಯವಾಗಿದೆ ಎಂದು ಸಂಸ್ಥೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ