ಅಪ್ರಾಪ್ತ ಬಾಲಕಿ ಅತ್ಯಾಚಾರ ಮಾಡಿ ಎನ್ ಕೌಂಟರ್ ಗೆ ಬಲಿಯಾದ ವ್ಯಕ್ತಿ 
ರಾಜ್ಯ

ಅಪ್ರಾಪ್ತ ಬಾಲಕಿ ಅತ್ಯಾಚಾರ, ಎನ್ ಕೌಂಟರ್ ಪ್ರಕರಣ: ರಾಜ್ಯ ಸರ್ಕಾರಕ್ಕೆ NHRC ನೋಟಿಸ್

ಆಯೋಗವು ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯದ ಪೊಲೀಸ್ ಮುಖ್ಯಸ್ಥರಿಂದ ನಾಲ್ಕು ವಾರಗಳಲ್ಲಿ ವಿವರವಾದ ವರದಿಯನ್ನು ಕೇಳಿದೆ.

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ನಂತರ ಪೊಲೀಸ್ ಎನ್‌ಕೌಂಟರ್‌ನಲ್ಲಿ ಆರೋಪಿ ಸಾವು ಘಟನೆ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC)ರಾಜ್ಯ ಸರ್ಕಾರ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನೋಟಿಸ್ ಜಾರಿ ಮಾಡಿದೆ.

ಈ ಸಂಬಂಧ ಮಾಧ್ಯಮಗಳ ಮಾಧ್ಯಮಗಳ ವರದಿ ಆಧಾರದ ಮೇಲೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಆಯೋಗ ಬುಧವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ. ಆಯೋಗವು ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯದ ಪೊಲೀಸ್ ಮುಖ್ಯಸ್ಥರಿಂದ ನಾಲ್ಕು ವಾರಗಳಲ್ಲಿ ವಿವರವಾದ ವರದಿಯನ್ನು ಕೇಳಿದೆ.

ಸಂತ್ರಸ್ತೆ ಮತ್ತು ಆರೋಪಿಯ ಮರಣೋತ್ತರ ಪರೀಕ್ಷೆ ವರದಿ ಹಾಗೂ ಮ್ಯಾಜಿಸ್ಟೀರಿಯಲ್ ತನಿಖಾ ವರದಿ ಸೇರಿದಂತೆ ಒಟ್ಟಾರೇ ವರದಿಯನ್ನು ನಾಲ್ಕು ವಾರಗಳ ಒಳಗಾಗಿ ನೀಡುವಂತೆ ತಿಳಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಮಾಧ್ಯಮ ವರದಿಗಳು ನಿಜವಾಗಿದ್ದಲ್ಲಿ, ಸಂತ್ರಸ್ತೆ, ಅಪ್ರಾಪ್ತ ಬಾಲಕಿ ಮತ್ತು ಬಂಧಿತ ಶಂಕಿತ ಅಪರಾಧಿ, ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ವ್ಯಕ್ತಿಯ ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯನ್ನು ಸೂಚಿಸುತ್ತವೆ ಎಂದು ಆಯೋಗ ಹೇಳಿದೆ.

ಏಪ್ರಿಲ್ 14 ರಂದು ಬಾಲಕಿಯ ಅಪಹರಣ ಮತ್ತು ಹತ್ಯೆ ನಡೆದಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದರು. ಬಳಿಕ ಆರೋಪಿ ಎನ್ ಕೌಂಟರ್ ನಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ಘೋಷಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

9 ವರ್ಷಗಳ ಬಳಿಕ ಇಸ್ರೇಲ್ ಗೆ ಪ್ರಧಾನಿ ಮೋದಿ ಭೇಟಿ; ಅದ್ದೂರಿ ರೆಡ್ ಕಾರ್ಪೆಟ್ ಸ್ವಾಗತ

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ: ಮಕ್ಕಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

SCROLL FOR NEXT