ಸಾಂದರ್ಭಿಕ ಚಿತ್ರ 
ರಾಜ್ಯ

ICSE, ISC Exams: ಕರ್ನಾಟಕ ಅತ್ಯುತ್ತಮ ಸಾಧನೆ, ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿನ ಫಲಿತಾಂಶ!

ICSE ಮತ್ತು ISC ಪರೀಕ್ಷೆಗಳಲ್ಲಿ ಕರ್ನಾಟಕದ ಉತ್ತೀರ್ಣರಾದವರ ಶೇಕಡಾವಾರು ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದೆ.

ಬೆಂಗಳೂರು: ಇಂಡಿಯನ್ ಸರ್ಟಿಫಿಕೇಟ್ ಆಫ್ ಸೆಕೆಂಡರಿ ಎಜುಕೇಶನ್ (ICSE) ಮತ್ತು ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ (ISC) ಬೋರ್ಡ್ ಪರೀಕ್ಷೆಗಳಲ್ಲಿ ಕರ್ನಾಟಕ ಅತ್ಯುತ್ತಮ ಸಾಧನೆ ಮಾಡಿದೆ. ICSE 10ನೇ ತರಗತಿಯಲ್ಲಿ ರಾಜ್ಯದ ಶೇ. 99.70 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 12ನೇ ತರಗತಿ ISC ಪರೀಕ್ಷೆಯಲ್ಲಿ ಶೇ.99.63 ರಷ್ಟು ಫಲಿತಾಂಶ ಬಂದಿದೆ. ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) ಬುಧವಾರ ಫಲಿತಾಂಶಗಳನ್ನು ಪ್ರಕಟಿಸಿದೆ.

ICSE ಮತ್ತು ISC ಪರೀಕ್ಷೆಗಳಲ್ಲಿ ಕರ್ನಾಟಕದ ಉತ್ತೀರ್ಣರಾದವರ ಶೇಕಡಾವಾರು ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದೆ. 10 ನೇ ತರಗತಿ ICSE ನಲ್ಲಿ ರಾಜ್ಯ ಶೇ. 99.70 ರಷ್ಟು ಫಲಿತಾಂಶ ಹೊಂದಿದ್ದರೆ, 12 ನೇ ತರಗತಿ ISC ಪರೀಕ್ಷೆಗಳಲ್ಲಿ 99.63 ರಷ್ಟು ಫಲಿತಾಂಶ ಹೊಂದಿದೆ. ICSE ರಾಷ್ಟ್ರೀಯ ಸರಾಸರಿ ಶೇ. 99.09 ರಷ್ಟಿದ್ದರೆ, ISC ಗೆ ಶೇ. 99.02 ರಷ್ಟಿದೆ.

ಒಟ್ಟಾರೆಯಾಗಿ, ಕರ್ನಾಟಕದಲ್ಲಿ ಈ ವರ್ಷ 10 ನೇ ತರಗತಿ ICSE ಪರೀಕ್ಷೆಗೆ 29,745 ವಿದ್ಯಾರ್ಥಿಗಳು ಮತ್ತು 12 ನೇ ತರಗತಿ ISC ಪರೀಕ್ಷೆಗೆ 2,442 ವಿದ್ಯಾರ್ಥಿಗಳು ಹಾಜರಾಗಿದ್ದರು. ಅವರಲ್ಲಿ 89 ಐಸಿಎಸ್‌ಇ ಮತ್ತು ಒಂಬತ್ತು ಐಎಸ್‌ಸಿ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಯಲ್ಲಿ ತೇರ್ಗಡೆಯಾಗಿಲ್ಲ.

10 ನೇ ತರಗತಿಯ ICSE ಪರೀಕ್ಷೆಯಲ್ಲಿ, ಕರ್ನಾಟಕದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಶೇ. 99.82 ರಷ್ಟು ಮಂದಿ ಉತ್ತೀರ್ಣರಾಗಿದ್ದಾರೆ. ಬಾಲಕರು ಶೇ. 99.58 ರಷ್ಟು ಉತ್ತೀರ್ಣರಾಗಿದ್ದಾರೆ. ಆದಾಗ್ಯೂ, 12 ನೇ ತರಗತಿಯ ISC ಪರೀಕ್ಷೆಯಲ್ಲಿ ಬಾಲಕರು, ಬಾಲಕಿಯರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅಂದರೆ ಶೇ. 99.65 ರಷ್ಟು ಮಂದಿ ಉತ್ತೀರ್ಣರಾಗಿದ್ದಾರೆ. ಶೇ. 99. 61 ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದಾರೆ.

ICSE ಪರೀಕ್ಷೆಯಲ್ಲಿ ವಿಶೇಷ ವರ್ಗಗಳ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ಒಟ್ಟಾರೆಯಾಗಿ, 2,019 ಎಸ್‌ಸಿ ವಿದ್ಯಾರ್ಥಿಗಳು 10 ನೇ ತರಗತಿ ಪರೀಕ್ಷೆಗೆ ಹಾಜರಾಗಿದ್ದು, ಶೇಕಡಾ 99.41 ರಷ್ಟು ಉತ್ತೀರ್ಣರಾಗಿದ್ದಾರೆ. ಎಸ್‌ಟಿ ವಿಭಾಗದಲ್ಲಿ 479 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದರೊಂದಿಗೆ ಶೇ.99.37ರಷ್ಟು ಮಂದಿ ಉತ್ತೀರ್ಣರಾಗಿದ್ದರೆ, ಒಬಿಸಿ ವರ್ಗದ 13,238 ವಿದ್ಯಾರ್ಥಿಗಳು ಅಂದರೆ ಶೇ.99.56ರಷ್ಟು ಉತ್ತೀರ್ಣರಾಗಿದ್ದಾರೆ.

ISC ಪರೀಕ್ಷೆಯಲ್ಲಿ ಕರ್ನಾಟಕದ ವಿಶೇಷ ವಿಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. 92 SC ವಿದ್ಯಾರ್ಥಿಗಳು 12 ನೇ ತರಗತಿ ಪರೀಕ್ಷೆಗೆ ಹಾಜರಾಗಿದ್ದು, ಶೇಕಡಾ 93.81 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಎಲ್ಲಾ 33 ST ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ. ಒಬಿಸಿ ವರ್ಗದ ಎಲ್ಲ 447 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT