ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಎಲ್‌ಪಿಜಿ ಸಿಲಿಂಡರ್ ಸೋರಿಕೆ: ಇಬ್ಬರು ಸಜೀವ ದಹನ, ನಾಲ್ವರಿಗೆ ಗಂಭೀರ ಗಾಯ

ಮೃತರನ್ನು 50 ವರ್ಷದ ನಾಗರಾಜು ಮತ್ತು 50 ವರ್ಷದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಅಭಿಷೇಕ್ ಗೌಡ, ಶಿವಶಂಕರ್, ಲಕ್ಷ್ಮಿದೇವಿ ಮತ್ತು ಬಸನಗೌಡ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು: ಬೆಂಗಳೂರು ಉತ್ತರ ತಾಲ್ಲೂಕಿನ ನೆಲಮಂಗಲ ಪಟ್ಟಣದ ಬಳಿಯ ಅಡಕಮಾರಹಳ್ಳಿಯಲ್ಲಿ ಗುರುವಾರ ಎಲ್‌ಪಿಜಿ ಸಿಲಿಂಡರ್ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಇಬ್ಬರು ಸಜೀವ ದಹನವಾಗಿ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡ ಆಘಾತಕಾರಿ ಘಟನೆ ವರದಿಯಾಗಿದೆ.

ಮೃತರನ್ನು 50 ವರ್ಷದ ನಾಗರಾಜು ಮತ್ತು 50 ವರ್ಷದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಅಭಿಷೇಕ್ ಗೌಡ, ಶಿವಶಂಕರ್, ಲಕ್ಷ್ಮಿದೇವಿ ಮತ್ತು ಬಸನಗೌಡ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಮನೆಯೊಳಗಿನ ಎಲ್‌ಪಿಜಿ ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ.

ಪೊಲೀಸರ ಪ್ರಕಾರ, ನಾಗರಾಜು ಬಳ್ಳಾರಿ ಮೂಲದವರಾಗಿದ್ದು, ಪತ್ನಿ ಲಕ್ಷ್ಮಿದೇವಿ ಮತ್ತು ಮಕ್ಕಳಾದ ಅಭಿಷೇಕ್ ಗೌಡ ಮತ್ತು ಬಸನ ಗೌಡ ಅವರೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ಗ್ಯಾಸ್ ಖಾಲಿಯಾಗಿದ್ದಾಗ ಮತ್ತೊಂದು ಸಿಲಿಂಡರ್ ಅನ್ನು ಜೋಡಿಸಿದ ಅಭಿಷೇಕ್ ಅನಿಲ ಸೋರಿಕೆಯಾಗಿರುವುದನ್ನು ಗಮನಿಸಿಲ್ಲ. ಬಳಿಕ ದೇವರ ಫೋಟೊ ಮುಂದೆ ದೀಪ ಹಚ್ಚಿದಾಗ ಬೆಂಕಿ ಹೊತ್ತಿಕೊಂಡಿದೆ. ಇದರಿಂದಾಗಿ ಮನೆಗೆ ಬೆಂಕಿ ವ್ಯಾಪಿಸಿದೆ ಎಂದು ವರದಿಯಾಗಿದೆ.

ಬೆಂಕಿ ಮನೆಗೆ ಆವರಿಸುತ್ತಿದ್ದಂತೆ, ಲಕ್ಷ್ಮಿದೇವಿ ಮತ್ತು ಬಸನಗೌಡ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ನಾಗರಾಜು ಮತ್ತು ಅಭಿಷೇಕ್ ಒಳಗೆ ಸಿಲುಕಿಕೊಂಡಿದ್ದಾರೆ. ಆಗ ನೆರೆಮನೆಯ ಶ್ರೀನಿವಾಸ್ ಮತ್ತು ಮನೆ ಮಾಲೀಕ ಶಿವಶಂಕರ್ ಬೆಂಕಿಯನ್ನು ನಂದಿಸಲು ಮತ್ತು ಸಂತ್ರಸ್ತರನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ.

ದುರಂತವೆಂದರೆ, ನಾಗರಾಜು ಮತ್ತು ಅಭಿಷೇಕ್ ಅವರನ್ನು ಉಳಿಸಲು ಪ್ರಯತ್ನಿಸುವಾಗ, ಶ್ರೀನಿವಾಸ್ ಬೆಂಕಿಯಲ್ಲಿ ಸಿಲುಕಿಕೊಂಡು ಜೀವಂತವಾಗಿ ಸುಟ್ಟುಹೋಗಿದ್ದಾರೆ. ಆದಾಗ್ಯೂ, ಅಭಿಷೇಕ್ ಬೆಂಕಿಯಿಂದ ತಪ್ಪಿಸಿಕೊಂಡು ಮನೆಯಿಂದ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ.

ಗಾಯಾಳುಗಳು ಸದ್ಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

2024ರ ಮೇ 22ರಂದು, ಮೈಸೂರು ನಗರದ ಯರಗನಹಳ್ಳಿಯಲ್ಲಿ ಶಂಕಿತ ಎಲ್‌ಪಿಜಿ ಸಿಲಿಂಡರ್ ಸೋರಿಕೆಯಿಂದಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದರು. ಮೃತರನ್ನು ಕುಮಾರಸ್ವಾಮಿ (45), ಅವರ ಪತ್ನಿ ಮಂಜುಳಾ (39) ಮತ್ತು ಅವರ ಮಕ್ಕಳಾದ ಅರ್ಚನಾ (19) ಮತ್ತು ಸ್ವಾತಿ (17) ಎಂದು ಗುರಿತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT