ರಾಜ್ಯ

News Headlines 01-05-25 | ನಾಳೆ SSLC ಫಲಿತಾಂಶ ಪ್ರಕಟ; DK Suresh ಪತ್ನಿ ಎಂದು ವಿಡಿಯೋ ಹರಿಬಿಟ್ಟಿದ್ದ ಮಹಿಳೆ ಬಂಧನ; KSRTC ಚಾಲಕ ಎಆರ್ ಮುಲ್ಲಾ ಅಮಾನತು!

ಮಂಗಳೂರಿನಲ್ಲಿ ವ್ಯಕ್ತಿ ಕೊಲೆ: ಮೂವರು ಪೊಲೀಸರ ಅಮಾನತು

ಮಂಗಳೂರಿನ ಕುಡುಪುವಿನಲ್ಲಿ ಏಪ್ರಿಲ್ 27ರಂದು ಕ್ರಿಕೆಟ್ ಪಂದ್ಯಾಟದ ವೇಳೆ ಗುಂಪು ಹಲ್ಲೆಯಿಂದ ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್, ಹೆಡ್ ಕಾನ್‌ಸ್ಟೇಬಲ್ ಚಂದ್ರ ಪಿ ಹಾಗೂ ಕಾನ್‌ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಳ್ಳುವ ಬದಲು ಸಂಶಯಾಸ್ಪದ ಸಾವು ಎಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಈ ಮೂಲಕ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ನಡೆದಿತ್ತು ಎಂಬ ಆರೋಪಗಳು ಕೇಳಿಬಂದಿತ್ತು. ಹೀಗಾಗಿ ಕರ್ತವ್ಯಲೋಪ ಆರೋಪದಡಿ ಪೊಲೀಸ್ ಕಮಿಷನರ್ ಮೂವರನ್ನು ಅಮಾನತು ಮಾಡಿದ್ದಾರೆ.

ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಸುಳ್ಳು ಪೋಸ್ಟ್: ಮಂಗಳೂರು ಪೊಲೀಸರಿಂದ 3 ಕೇಸ್ ದಾಖಲು

ಮಂಗಳೂರಿನ ಕುಡುಪುವಿನ ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿ ಅಶಾಂತಿ ಉಂಟುಮಾಡುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನಕಲಿ ಮತ್ತು ಪ್ರಚೋದನಕಾರಿ ವಿಷಯ ಪೋಸ್ಟ್ ಮಾಡಿದವರ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಕುಡುಪು ಘಟನೆಯಲ್ಲಿ ಬಳಸಲಾದ ಕೊಲೆ ಬ್ಯಾಟ್ ಸ್ಟಂಪ್ ವಶಪಡಿಸಿಕೊಳ್ಳಲಾಗಿದೆ ಎಂದು BEARY MUSLIM ARMY ಎಂಬ ವಾಟ್ಸಾಪ್ ಗ್ರೂಪ್ ಮತ್ತು beary royal nawab ಎಂಬ ಇನ್‌ಸ್ಟಾಗ್ರಾಮ್ ಪುಟದಲ್ಲಿ ಸುಳ್ಳು ಮಾಹಿತಿ ಹಂಚಿಕೊಂಡ ಪೋಸ್ಟ್ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ 2023ರ BNSನ ಸೆಕ್ಷನ್ 192, 353(1), 353(2)ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

KSRTC ಚಾಲಕ ಎಆರ್ ಮುಲ್ಲಾ ಅಮಾನತು

ಪ್ರಯಾಣಿಕರು ಇರುವಾಗಲೇ KSRTC ಬಸ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಬಸ್ ನಲ್ಲೇ ನಮಾಜ್ ಮಾಡಿದ್ದ ಚಾಲಕನನ್ನು ಅಮಾನತು ಮಾಡಲಾಗಿದೆ. ಏಪ್ರಿಲ್ 29ರಂದು ಹುಬ್ಬಳ್ಳಿಯಿಂದ ಹಾವೇರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಬಸ್ ಚಾಲಕ ಕಮ್ ನಿರ್ವಾಹಕ ಎಆರ್ ಮುಲ್ಲಾನನ್ನು ಅಮಾನತು ಮಾಡಲಾಗಿದೆ. ಮುಲ್ಲಾ ನಮಾಜ್ ಮಾಡುತ್ತಿರುವ ವಿಡಿಯೊವನ್ನು ಪ್ರಯಾಣಿಕರೊಬ್ಬರು ಸಾಮಾಜಿಕ ಜಲಾತಾಣಗಳಲ್ಲಿ ಹರಿಬಿಟ್ಟಿದ್ದರು. ಈ ವಿಡಿಯೋ ವ್ಯಾಪಕ ವೈರಲ್ ಆಗಿದ್ದು ಚಾಲಕನ ನಡೆಗೆ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಹಾನಗಲ್ KSRTC ಘಟಕದ ಚಾಲಕ ಎಆರ್ ಮುಲ್ಲಾನನ್ನು ಕರ್ತವ್ಯಲೋಪ ಅಡಿಯಲ್ಲಿ ಕೆಲಸದಿಂದ ಅಮಾನತು ಮಾಡಲಾಗಿದೆ.

DK Suresh ಪತ್ನಿ ಎಂದು ವಿಡಿಯೋ ಹರಿಬಿಟ್ಟಿದ್ದ ಮಹಿಳೆ ಬಂಧನ

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮಾಜಿ ಸಂಸದ ಡಿಕೆ ಸುರೇಶ್ ಪತ್ನಿ ಎಂದು ಹೇಳಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿಬಿಟ್ಟಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಡಿ.ಕೆ ಸುರೇಶ್ ಪರ ವಕೀಲ ಪ್ರದೀಪ್ ದೂರಿ ನೀಡಿದ್ದು ಈ ದೂರಿನನ್ವಯ ರಾಮನಗರ ಸೆನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಕನಕಪುರದ ದೊಡ್ಡಾಲಹಳ್ಳಿ ಗ್ರಾಮದ ಪವಿತ್ರ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಕೆ ಸುರೇಶ್ ಫೋಟೋದೊಂದಿಗೆ ಮಹಿಳೆ ತನ್ನ ಫೋಟೋವನ್ನು ಎಡಿಟ್ ಮಾಡಿ ಏ.8ರಂದು ಫೇಸ್ ಬುಕ್, ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಹರಿಬಿಟ್ಟಿದ್ದರು.

ನಾಳೆ SSLC ಫಲಿತಾಂಶ ಪ್ರಕಟ

SSLC ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಾಳೆ ಪ್ರಕಟಿಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಲಭ್ಯವಾಗಲಿದೆ. http://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮಾರ್ಚ್‌, ಏಪ್ರಿಲ್ ತಿಂಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿತ್ತು. 8,96,447 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ನಾಳೆ ಫಲಿತಾಂಶ ಪ್ರಕಟವಾಗಲಿದೆ.

ನೆಲಮಂಗಲದಲ್ಲಿ ಇಂದು ಎಲ್‌ಪಿಜಿ ಸಿಲಿಂಡರ್ ಸ್ಫೋಟ: ಇಬ್ಬರು ಸಜೀವ ದಹನ

ಬೆಂಗಳೂರು ಉತ್ತರ ತಾಲ್ಲೂಕಿನ ನೆಲಮಂಗಲದ ಅಡಕಮಾರಹಳ್ಳಿಯಲ್ಲಿ ಇಂದು ಎಲ್‌ಪಿಜಿ ಸಿಲಿಂಡರ್ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಇಬ್ಬರು ಸಜೀವ ದಹನವಾಗಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ನಾಗರಾಜು ಹಾಗೂ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಅಭಿಷೇಕ್, ಶಿವಶಂಕರ್, ಲಕ್ಷ್ಮಿದೇವಿ ಮತ್ತು ಬಸನಗೌಡ ಸುಟ್ಟಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದೆಡೆ ಚಿತ್ರದುರ್ಗದ ಕಾತ್ರಾಳ ಗ್ರಾಮದ ಕೆರೆ ಬಳಿ ಡಿವೈಡರ್ಗೆ ಇನ್ನೋವಾ ಕಾರು ಡಿಕ್ಕಿ ಹೊಡೆದು ತಮಿಳುನಾಡು ಮೂಲದ ಅರ್ಜುನ್, ಶರವಣ, ಮತ್ತು ಸೇಂದಿಲ್ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT