ಪವಿತ್ರ 
ರಾಜ್ಯ

ನಾನು ಡಿ.ಕೆ ಸುರೇಶ್ ಪತ್ನಿ, ನನಗೆ ರಾಯಲ್ ಸ್ಟೇಟಸ್ ಬೇಕು: ಮಹಿಳೆ ವಿಡಿಯೋ ವೈರಲ್

ನೀವು ಡಿ.ಕೆ ಸುರೇಶ್ ಪತ್ನಿ ಅಲ್ಲವೇ, ಏಕೆ ಇಷ್ಟೊಂದು ಸಿಂಪಲ್ ಆಗಿ ಬಂದಿದ್ದೀರಾ ಎಂದು ಕೇಳುತ್ತಾರೆ, ಜನರಿಗೆ ಸ್ಟೇಟಸ್ ಬೇಕು, ಹೀಗಾಗಿ ನಾನು ರಾಯಲ್ ಆಗಿ ಇರಲು ಬಯಸುತ್ತೇನೆ.

ರಾಮನಗರ: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಬಿಟ್ಟಿದ್ದಾರೆ.

ನಾನು ಮೊದಲು ಡಿ.ಕೆ. ಸುರೇಶ್ ಅವರ ಹೆಂಡತಿಯಾಗಿ ಹೇಳಬೇಕೆಂದರೆ, ನಾನು ಫಸ್ಟ್ ಸುರೇಶ್ ಅವರ ಅಭಿಮಾನಿ. ಯಾಕೆಂದರೆ ಅವರು ಮೂರು ಸಲ ಎಂ.ಪಿ.ಯಾಗಿ ಯಾರೂ ಮಾಡಲಿಕ್ಕಾಗದ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಇಂತಹವರನ್ನು ನನ್ನ ಗಂಡ ಎಂದು ಹೇಳಿಕೊಳ್ಳಲು ಖುಷಿಪಡುತ್ತೇನೆ ಎಂದು ಆಕೆ ವಿಡಿಯೊದಲ್ಲಿ ಹೇಳಿದ್ದಾರೆ. ನಾನು ಹಲವು ಸಭೆ ಸಮಾರಂಭಗಳಿಗೆ ಹೋಗುತ್ತಿರುತ್ತೇನೆ.

ಆದರೆ ಸರಳವಾಗಿ ಹೋಗುವುದರಿಂದ ಎಲ್ಲರೂ ನನ್ನ ಪ್ರಶ್ನೆ ಮಾಡುತ್ತಾರೆ, ನೀವು ಡಿ.ಕೆ ಸುರೇಶ್ ಪತ್ನಿ ಅಲ್ಲವೇ, ಏಕೆ ಇಷ್ಟೊಂದು ಸಿಂಪಲ್ ಆಗಿ ಬಂದಿದ್ದೀರಾ ಎಂದು ಕೇಳುತ್ತಾರೆ, ಜನರಿಗೆ ಸ್ಟೇಟಸ್ ಬೇಕು, ಹಾಗಾಗಿ ನಾನು ರಾಯಲ್ ಆಗಿ ಇರಲು ಬಯಸುತ್ತೇನೆ ಎಂದು ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಹರಿ ಬಿಟ್ಟಿದ್ದಾರೆ. ಫೇಸ್‌ಬುಕ್‌ನಲ್ಲಿ PavitraDksuresh Dodalahalli ಎಂಬ ಹೆಸರಿನಲ್ಲಿ ಖಾತೆ ಹೊಂದಿರುವ ಮಹಿಳೆ, ಏ.8ರಂದು ವಿಡಿಯೊ ಪೋಸ್ಟ್ ಮಾಡಿದ್ದಾರೆ.

ಡಿ.ಕೆ. ಸುರೇಶ್ ಪರ ವಕೀಲ ಪ್ರದೀಪ್ ಎಂಬುವರು ರಾಮನಗರದ ಸಿಇಎನ್ ಪೊಲೀಸ್ ಠಾಣೆಗೆ ಮಹಿಳೆ ವಿರುದ್ಧ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಸುರೇಶ್ ಅವರ ಪತ್ನಿ ಎಂದು ದುರುದ್ದೇಶದಿಂದ ಹೇಳಿಕೊಂಡು ಅಪಪ್ರಚಾರ ನಡೆಸುತ್ತಿರುವ ಮಹಿಳೆ, ಸಾರ್ವಜನಿಕವಾಗಿ ತಪ್ಪು ಸಂದೇಶ ಹರಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಚಿಹ್ನೆ ಸಹ ದುರುಪಯೋಗಪಡಿಸಿ ಕೊಂಡಿದ್ದಾರೆ. ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ವಕೀಲ ಪ್ರದೀಪ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ