ಹೈಕೋರ್ಟ್‌ 
ರಾಜ್ಯ

ವಿರೋಧದ ನಡುವಲ್ಲೂ ಕರ್ನಾಟಕ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳ ವರ್ಗಾವಣೆ: ಕೇಂದ್ರ ಸರ್ಕಾರ ಆದೇಶ

ಇತ್ತೀಚೆಗೆ ಹೈಕೋರ್ಟ್‌ನ ಕಲಾಪಗಳನ್ನು ಬಹಿಷ್ಕರಿಸಿದ ನಂತರ, ಬೆಂಗಳೂರಿನ ವಕೀಲರ ಸಂಘ (ಎಎಬಿ) ನಾಲ್ವರು ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಕೊಲಿಜಿಯಂನ ಪ್ರಸ್ತಾಪವನ್ನು ವಿರೋಧಿಸಿತ್ತು.

ಬೆಂಗಳೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್ ಮತ್ತು ಬೆಂಗಳೂರು ವಕೀಲರ ಸಂಘದ ವಿರೋಧದ ನಡುವೆಯೂ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸಿನಂತೆ ರಾಜ್ಯ ಹೈಕೋರ್ಟ್ ನ ನಾಲ್ವರು ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್ ಗಳಿಗೆ ವರ್ಗಾವಣೆ ಮಾಡಿ ಕೇಂದ್ರ ಸರ್ಕಾರ ಗುರುವಾರ ಆದೇಶಿಸಿದೆ.

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಹೊರಡಿಸಿರುವ ಪ್ರತ್ಯೇಕ ಅಧಿಸೂಚನೆಗಳಲ್ಲಿ ಕೊಲಿಜಿಯಂ ಶಿಫಾರಸಿನಂತೆ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರನ್ನು ಒಡಿಶಾ, ನ್ಯಾಯಮೂರ್ತಿ ಕೆ.ನಟರಾಜನ್ ಅವರನ್ನು ಕೇರಳ, ನ್ಯಾಯಮೂರ್ತಿ ಎನ್.ಎಸ್.ಸಂಜಯ್ ಗೌಡ ಅವರನ್ನು ಗುಜರಾತ್ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರನ್ನು ಮದ್ರಾಸ್ ಹೈಕೋರ್ಟ್ ಗೆ ವರ್ಗಾವಣೆ ಮಾಡಲಾಗಿದೆ.

ಇತ್ತೀಚೆಗೆ ಹೈಕೋರ್ಟ್‌ನ ಕಲಾಪಗಳನ್ನು ಬಹಿಷ್ಕರಿಸಿದ ನಂತರ, ಬೆಂಗಳೂರಿನ ವಕೀಲರ ಸಂಘ (ಎಎಬಿ) ನಾಲ್ವರು ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಕೊಲಿಜಿಯಂನ ಪ್ರಸ್ತಾಪವನ್ನು ವಿರೋಧಿಸಿತ್ತು. ಅಲ್ಲದೆ, ಈ ಪ್ರಸ್ತಾವನೆಯನ್ನು ಪರಿಗಣಿಸದಂತೆ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿತ್ತು.

ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದ ಸುಪ್ರೀಂ ಕೋರ್ಟ್ ಕೊಲಿಜಿಯಂ, ಉನ್ನತ ನ್ಯಾಯಾಲಯಗಳಲ್ಲಿ ಎಲ್ಲರನ್ನೂ ಒಳಗೊಳ್ಳುವಿಕೆ ಮತ್ತು ವೈವಿಧ್ಯತೆ ಕಾಪಾಡಲು ಮತ್ತು ನ್ಯಾಯದಾನದ ಗುಣಮಟ್ಟ ಎತ್ತರಿಸುವ ನಿಟ್ಟಿನಲ್ಲಿ ಏಪ್ರಿಲ್ 15 ಮತ್ತು 19ರಂದು ನಡೆದ ಸುಪ್ರೀಂ ಕೋರ್ಟ್ ಕೊಲಿಜಿಯಂನಲ್ಲಿ ವರ್ಗಾವಣೆ ಶಿಫಾರಸು ಮಾಡಲಾಗಿದೆ ಎಂದು ತಿಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್