ಲಕ್ಷ್ಮಿ ಹೆಬ್ಬಾಳ್ಕಕರ್ - ಸಿಟಿ ರವಿ 
ರಾಜ್ಯ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಿಂದನೆ ಪ್ರಕರಣ: ಸಿಟಿ ರವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತಮ್ಮ ವಿರುದ್ಧ ಅವಹೇಳನಕಾರಿ ಪದ ಬಳಸಿದ ಸಿಟಿ ರವಿ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಡಿಸೆಂಬರ್ 19, 2024 ರಂದು ಬೆಳಗಾವಿ ಜಿಲ್ಲೆಯ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಹೇಳನಕಾರಿ ಪದ ಬಳಿಸಿ ನಿಂದಿಸಿದ ಆರೋಪದ ತಮ್ಮ ವಿರುದ್ಧ ದಾಖಲಿಸಿದ್ದ ಎಫ್ಐಆರ್ ರದ್ದು ಕೋರಿ ಬಿಜೆಪಿ ಎಂಎಲ್ ಸಿ ಸಿಟಿ ರವಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಪ್ರಕರಣ ರದ್ದು ಕೋರಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು, ದೂರುದಾರ ಮಹಿಳೆಯ ವಿರುದ್ಧ ಮಾತನಾಡಿದ್ದಾರೆ ಎಂದು ಹೇಳಲಾದ ಮಾತು, ಮಾತನಾಡಿದ್ದರೆ ಅಥವಾ ಸನ್ನೆ ಮಾಡಿದ್ದರೆ ಅದು ಖಂಡಿತವಾಗಿಯೂ ಅವರ ನಮ್ರತೆಯನ್ನು ಅತಿರೇಕಗೊಳಿಸುತ್ತದೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ, ಅದು ಶಾಸನ ಸಭೆಯ ವಿನಾಯಿತಿಗೆ ಒಳಪಡುವುದಿಲ್ಲ ಎಂದು ಹೇಳಿದ್ದಾರೆ.

ತಮ್ಮ ವಿರುದ್ಧ ಅವಹೇಳನಕಾರಿ ಪದ ಬಳಸಿದ ಸಿಟಿ ರವಿ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಡಿಸೆಂಬರ್ 19, 2024 ರಂದು ಬೆಳಗಾವಿ ಜಿಲ್ಲೆಯ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಂತರ ರಾಜ್ಯ ಸರ್ಕಾರವು ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ(CID) ವರ್ಗಾಯಿಸಿತು.

ಸಿಟಿ ರವಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು, ದೂರು ದಾಖಲಿಸುವ ಮೊದಲು, ವಿಧಾನಸಭೆಯ ಸ್ಪೀಕರ್ ಈ ವಿಷಯವನ್ನು ಕೈಗೆತ್ತಿಕೊಂಡು ವಿಚಾರಣೆ ಮುಕ್ತಾಯಗೊಳಿಸಿದರು ಎಂದು ಹೇಳಿದರು.

ವಿಧಾನ ಪರಿಷತ್​​ನಲ್ಲಿ ಈ ಘಟನೆ ನಡೆದಿರುವುದರಿಂದ ಸಿಟಿ ರವಿ ಅವರಿಗೆ ಶಾಸಕಾಂಗ ವಿನಾಯಿತಿ ಇದೆ ಎಂದು ನಾವದಗಿ ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸರ್ಕಾರಿ ಅಭಿಯೋಜಕರು, ಶಾಸಕಾಂಗದೊಳಗೆ ಯಾವುದೇ ಅಪರಾಧ ನಡೆದರೆ, ಅದನ್ನು ನಿಸ್ಸಂದೇಹವಾಗಿ ತನಿಖೆ ಮಾಡಬೇಕಾಗುತ್ತದೆ ಎಂದು ವಾದಿಸಿದರು.

ವಾದ ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ, ಸಿಟಿ ರವಿ ಅವರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ವಿಧಾನ ಪರಿಷತ್ತಿನಲ್ಲಿ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಈ ಆರೋಪವನ್ನು ಸಿಟಿ ರವಿ ಅಲ್ಲಗಳದಿದ್ದಾರೆ. ಮತ್ತೊಂದೆಡೆ, ಅಶ್ಲೀಲವಾಗಿ ನಿಂದಿಸಿರುವುದು ಸರ್ಕಾರಿ ಟಿವಿಯಲ್ಲಿ ದಾಖಲಾಗಿರುವುದು ಇತ್ತೀಚೆಗೆ ದೃಢಪಟ್ಟಿದೆ. ಆದರೆ ಅದು ಸಿಟಿ ರವಿ ಅವರ ಧ್ವನಿಯೇ ಎಂಬುದನ್ನು ಖಚಿತಪಡಿಸಲು ಅವರ ವಾಯ್ಸ್ ಸ್ಯಾಂಪಲ್ ಕೋರಲಾಗಿತ್ತು. ಆದರೆ ವಾಯ್ಸ್ ಸ್ಯಾಂಪಲ್ ನೀಡಲು ಸಿಟಿ ರವಿ ನಿರಾಕರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ