ಬಸ್‌ಗಳ ಮೇಲೆ ಕಲ್ಲು ತೂರಾಟ 
ರಾಜ್ಯ

ಸುಹಾಸ್ ಶೆಟ್ಟಿ ಹತ್ಯೆ: ದಕ್ಷಿಣ ಕನ್ನಡ ಬಹುತೇಕ ಬಂದ್; ಬಸ್‌ಗಳ ಮೇಲೆ ಕಲ್ಲು ತೂರಾಟ

ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕೆಲವು ಸಾರ್ವಜನಿಕ ಸಾರಿಗೆ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು: ರೌಡಿ ಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಎಚ್‌ಪಿ ನೀಡಿದ ಬಂದ್ ಕರೆ ಮತ್ತು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಶುಕ್ರವಾರ ಬಂದ್‌ ವಾತಾವರಣವಿತ್ತು.

ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕೆಲವು ಸಾರ್ವಜನಿಕ ಸಾರಿಗೆ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು ತಾಲ್ಲೂಕಿನ ಬಜ್ಪೆ ಬಳಿಯ ಕಿನ್ನಿಪದವಿನಲ್ಲಿ ಗುರುವಾರ ಸಂಜೆ ಹಿಂದೂ ಕಾರ್ಯಕರ್ತ ಮತ್ತು ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಮಾಡಲಾಗಿದ್ದು, ಇದನ್ನು ಖಂಡಿಸಿ ವಿಎಚ್‌ಪಿ ಇಂದು ಬಂದ್‌ಗೆ ಕರೆ ನೀಡಿತ್ತು.

ಹಂಪನಕಟ್ಟೆ, ಸೆಂಟ್ರಲ್ ಮಾರ್ಕೆಟ್, ಫಲ್ನೀರ್, ಬಲ್ಮಠ, ಕಂಕನಾಡಿ, ಉರ್ವಾ ಮತ್ತು ಅಳಕೆಯಂತಹ ಮಂಗಳೂರು ನಗರದ ಎಲ್ಲಾ ಅಪ್‌ಟೌನ್ ಪ್ರದೇಶಗಳಲ್ಲಿ ಅಂಗಡಿಗಳು ಬಂದ್ ಆಗಿದ್ದವು.

ಫರಂಗಿಪೇಟೆ, ಬಜ್ಪೆ, ಉಳ್ಳಾಲ, ಗುರುಪುರ, ಸುರತ್ಕಲ್, ಗಂಜಿಮಠ, ಕಿನ್ನಿಗೋಳಿ ಮತ್ತು ಮುಲ್ಕಿಯಂತಹ ಉಪನಗರ ಪ್ರದೇಶಗಳು ಸಹ ಸಂಪೂರ್ಣವಾಗಿ ಬಂದ್ ಆಗಿದ್ದವು.

ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ, ಅಂಗಡಿಗಳನ್ನು ಮುಚ್ಚುವಂತೆ ಪೊಲೀಸರು ಸೂಚಿಸಿದ್ದಾರೆ.

ಪಂಪ್‌ವೆಲ್ ಮತ್ತು ಕಂಕನಾಡಿ ಪ್ರದೇಶಗಳ ಬಳಿ ಕೆಲವು ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ ನಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಉಪನಗರ ಪ್ರದೇಶಗಳಿಗೆ ಬಸ್ ಸೇವೆ ಸ್ಥಗಿತಗೊಳಿಸಿದೆ.

ಅಧಿಕಾರಿಗಳ ಪ್ರಕಾರ, ಮೂಲ್ಕಿ ಮತ್ತು ನಂತೂರು ಬಳಿ ಕೆಲವು ಖಾಸಗಿ ಬಸ್‌ಗಳ ಮೇಲೂ ಕಲ್ಲು ತೂರಾಟ ನಡೆಸಲಾಯಿತು, ನಂತರ ಅವುಗಳ ಸೇವೆ ಬಂದ್ ಸ್ಥಗಿತಗೊಳಿಸಲಾಗಿದೆ.

ಇಂದು ಬೆಳಗ್ಗೆ ಉಪನಗರ ಕೇಂದ್ರಗಳಿಂದ ಮಂಗಳೂರು ನಗರಕ್ಕೆ ಹೋಗುವ ದಾರಿಯಲ್ಲಿ ತಮ್ಮ ನಾಲ್ಕು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಕ ರಾಜೇಶ್ ಶೆಟ್ಟಿ ಅವರು ತಿಳಿಸಿದ್ದಾರೆ.

ಘಟನೆಯ ನಂತರ, ಪೊಲೀಸರು ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತದ ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿಯೂ ಸೇವೆ ಸಲ್ಲಿಸುತ್ತಿರುವ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಸಾರ್ವಜನಿಕ ಸಭೆ, ಸಮಾರಂಭ, ಮೆರವಣಿಗೆಗಳು, ಘೋಷಣೆಗಳು ಮತ್ತು ಆಯುಧಗಳಾಗಿ ಬಳಸಬಹುದಾದ ವಸ್ತುಗಳನ್ನು ಸಾಗಿಸುವುದನ್ನು ನಿಷೇಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ