ಡಿ.ಕೆ ಶಿವಕುಮಾರ್ 
ರಾಜ್ಯ

ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ: ಡಿ.ಕೆ ಶಿವಕುಮಾರ್

ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ಗಿಂತ ನಮ್ಮ ಸ್ಯಾಂಡಲ್ ವುಡ್ ಎತ್ತರಕ್ಕೆ ಹೋಗಿದೆ. ಇದಕ್ಕೆ ಉತ್ತೇಜನ ಕೊಡಬೇಕು ಎಂಬುದು ನಮ್ಮ ಉದ್ದೇಶ.

ಬೆಂಗಳೂರು: ಈ ವರ್ಷ ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (IIFA) ವತಿಯಿಂದ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸುವ ಸಂಬಂಧ IIFA ಪ್ರತಿನಿಧಿಗಳ ಜತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ ಹಾಗೂ ಐಫಾ ಪ್ರಶಸ್ತಿ ವಿತರಣೆ ಸಮಾರಂಭ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಐಫಾದವರ ಜತೆ ಚರ್ಚೆ ನಡೆಸಲಾಯಿತು. ಒಂದಷ್ಟು ಕಾರ್ಯಕ್ರಮಗಳನ್ನು ಸಂಯೋಜಿಸಿ ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಉತ್ತಮ ವಾತಾವರಣ ಸೃಷ್ಟಿ ಮಾಡುವುದು ನಮ್ಮ ಆಧ್ಯತೆ. ಜೊತೆಗೆ ಬೆಂಗಳೂರಿನ ಬಗ್ಗೆ ಮಹತ್ವ ನೀಡಬೇಕು ಎನ್ನುವುದು ನಮ್ಮ ಆಲೋಚನೆ ಎಂದರು.

ಈ ಹಿಂದೆ ರಾಜಸ್ಥಾನದಲ್ಲಿ ನಡೆದಿತ್ತು. ತೆಲಂಗಾಣದಲ್ಲಿ ಸೌಂದರ್ಯ ಸ್ಪರ್ಧೆ ಮಾಡುತ್ತಿದ್ದಾರೆ. ನಾವು ಇದನ್ನು ಮಾಡಲು ಹೋಗುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ಗಿಂತ ನಮ್ಮ ಸ್ಯಾಂಡಲ್ ವುಡ್ ಎತ್ತರಕ್ಕೆ ಹೋಗಿದೆ. ಇದಕ್ಕೆ ಉತ್ತೇಜನ ಕೊಡಬೇಕು ಎಂಬುದು ನಮ್ಮ ಉದ್ದೇಶ. ಅಕ್ಟೋಬರ್ ನಲ್ಲಿ ದಸರಾವಿರುವ ಕಾರಣಕ್ಕೆ ಡಿಸೆಂಬರ್, ಜನವರಿಯಲ್ಲಿ ನಡೆಸಬಹುದು ಎಂದು ತಿಳಿಸಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಸಂಸ್ಕೃತಿಯನ್ನು ಪರಿಚಯಿಸಲು ಅವಕಾಶ ಸಿಗಲಿದೆ. ಮುಂಬೈ ಬಿಟ್ಟರೆ ಬೆಂಗಳೂರು ಈ ರೀತಿಯ ಕಾರ್ಯಕ್ರಮಗಳಿಗೆ ಸೂಕ್ತ ಎಂದು ಆಯೋಜಕರು ತಿಳಿಸಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT